Category: ದೇಶ

ಗೂಗಲ್ ಕ್ರೋಮ್, ಮೊಝಿಲ್ಲಾ, ಮೈಕ್ರೋಸಾಫ್ಟ್ ಗೆ ನೇರ ಪೈಪೋಟಿ: ದೇಶಿಯ ವೆಬ್ ಬ್ರೌಸರ್ ಅಭಿವೃದ್ಧಿಪಡಿಸಲು ಮುಂದಾದ ಭಾರತ

ನವದೆಹಲಿ: ಆತ್ಮನಿರ್ಭರ ಭಾರತ ಪರಿಕಲ್ಪನೆಯ ಭಾಗವಾಗಿ ದೇಶೀಯವಾಗಿ ವೆಬ್ ಬ್ರೌಸರ್ ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದ್ದು, ಇಂತಹ ಕಂಪನಿಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಮೂಲಕ ಗೂಗಲ್ ಕ್ರೋಮ್, ಮೊಝಿಲ್ಲಾ ಫೈರ್ ಫಾಕ್ಸ್, ಮೈಕ್ರೋಸಾಫ್ಟ್ ಎಡ್ಜ್ , ಒಪೆರಾ ಮತ್ತು ಇತರ…

ಸುಪ್ರೀಂ – ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ಕಡ್ಡಾಯವಾಗಿ ಘೋಷಿಸಬೇಕು: ಸಂಸದೀಯ ಸಮಿತಿ ಶಿಫಾರಸು

ನವದೆಹಲಿ: ಇನ್ನು ಮುಂದೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್​ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಶಾಸನವನ್ನು ತರಲು ಸಂಸದೀಯ ಸಮಿತಿ ಉಭಯ ಸದನಕ್ಕೆ ಶಿಫಾರಸು ಮಾಡಿದೆ. ಇದರ ಜತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು,…

ಚಂದ್ರಯಾನ-3: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯುವ ಕುರಿತು ಮಹತ್ವದ ಮಾಹಿತಿ ನೀಡಿದ ಇಸ್ರೋ

ಶ್ರೀಹರಿಕೋಟಾ: ಭಾರತದ ಮೂರನೇ ಚಂದ್ರಯಾನ-3 ರ ಲ್ಯಾಂಡರ್ ವಿಕ್ರಮ್, ಎಲ್ಲಾ ಸಂವೇದಕಗಳು ಮತ್ತು ಅದರ ಎರಡು ಎಂಜಿನ್‌ಗಳು ಕಾರ್ಯನಿರ್ವಹಿಸದಿದ್ದರೂ ಕೂಡ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯಲು ಸಾಧ್ಯವಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದ್ದಾರೆ. ವಿಕ್ರಮ್…

ಆದಾಯ ತೆರಿಗೆ ರೀಫಂಡ್ ಹೆಸರಲ್ಲಿ ವಂಚನೆ: ತೆರಿಗೆದಾರರು ಎಚ್ಚರ ವಹಿಸುವಂತೆ ಸೂಚನೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು ವಂಚಕರು ಹೊಸ ಹೊಸ ವಿಧಾನಗಳ ಮೂಲಕ ವಂಚಿಸಲು ಪ್ರಾರಂಭಿಸಿದ್ದಾರೆ. 2022-23ನೇ ಆರ್ಥಿಕ ಸಾಲಿನ ಐಟಿಆರ್ ಸಲ್ಲಿಕೆಗೆ ಜುಲೈ 31 ಅಂತಿಮ ದಿನವಾಗಿತ್ತು. ಹೀಗಾಗಿ ಐಟಿಆರ್ ಸಲ್ಲಿಕೆ ಮಾಡಿದವರಿಗೆ ಈಗ ರೀಫಂಡ್…

ಅಶಿಸ್ತಿನ ವರ್ತನೆ ತೋರಿದ ಟಿಎಂಸಿ ಸಂಸದನನ್ನು ಅಧಿವೇಶನದಿಂದ ಅಮಾನತುಗೊಳಿಸಿ ಉಪಸಭಾಪತಿ ಆದೇಶ

ನವದೆಹಲಿ : ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸದನದ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಇಂದು ಘೋಷಿಸಿದ್ದಾರೆ. ಡೆರೆಕ್ ಒ’ಬ್ರಿಯಾನ್ ಅವರು…

ಜಮ್ಮು-ಕಾಶ್ಮೀರ: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ-ಮುಂದುವರಿದ ಕಾರ್ಯಚರಣೆ

ಶ್ರೀನಗರ : ಇಂದು (ಆ.7) ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಭದ್ರತಾ ಪಡೆ ಸಿಬ್ಬಂದಿಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಜತೆಗೆ…

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ: ಐವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಿರುವ ಎನ್‌ಐಎ ಅಧಿಕಾರಿಗಳು

ಬೆಂಗಳೂರು: ಸ್ಪೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದ ಐವರು ಶಂಕಿತ ಉಗ್ರರನ್ನು ಶೀಘ್ರದಲ್ಲೇ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ಸಿಸಿಬಿ ವಿಚಾರಣೆ ಮುಗಿದ ನಂತರ ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ರಾಷ್ಟ್ರೀಯ ತನಿಖಾ ದಳ ಈಗಾಗಲೇ ಪ್ರಕರಣದ ಬಗ್ಗೆ…

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು, ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ: ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ…

ಚಂದ್ರಯಾನ-3: ಇಂದು ಸಂಜೆ 7 ಗಂಟೆಗೆ ಚಂದ್ರನ ಕಕ್ಷೆಗೆ ಸೇರಲಿದೆ ನೌಕೆ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಈಗಾಗಲೇ ತನ್ನ ನಿಗದಿತ ಪ್ರಯಾಣದಲ್ಲಿ ಮೂರನೇ ಎರಡಷ್ಟು ಹಾದಿ ಕ್ರಮಿಸಿದ್ದು, ಶನಿವಾರ ಸಂಜೆ ಚಂದ್ರನ ಕಕ್ಷೆಗೆ ಸೇರ್ಪಡೆಯಾಗಲಿದೆ. ಆ.1ರಂದು ಭೂಮಿಯ ಕಕ್ಷೆಯಿಂದ ಹೊರಕ್ಕೆ ಜಿಗಿದು ಚಂದ್ರನತ್ತ ಪ್ರಯಾಣ ಆರಂಭಿಸಿದ್ದ ಚಂದ್ರಯಾನ ನೌಕೆ, ಇದೀಗ ಚಂದ್ರನ…

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ: ಸಮೀಕ್ಷೆ ತಡೆಕೋರಿ ಮುಸ್ಲಿಂ ಕಮಿಟಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ ನಡೆಸುತ್ತಿರುವ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಹಾಗಾಗಿ ಸಮೀಕ್ಷೆಗೆ ತಡೆ…