Category: ದೇಶ

ಇಂದು ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸುದ್ದಿಗೋಷ್ಟಿ : ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಅತ್ಯಂತ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು 11.30ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ಇಂದಿನಿAದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಮೂಲಗಳ ಪ್ರಕಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು…

ಜೂ.30ರವರೆಗೆ ‘ಪ್ಯಾನ್-ಆಧಾರ್’ ಲಿಂಕ್ ಗಡುವು ವಿಸ್ತರಣೆ

ನವದೆಹಲಿ: ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡಲು ಗಡುವು ಮುಗಿಯುವ ಎರಡು ದಿನಗಳ ಮುಂಚೆಯೇ ಕೇಂದ್ರ ಸರ್ಕಾರ ಗಡುವನ್ನು ವಿಸ್ತರಣೆ ಮಾಡಿದೆ. ಈ ಹಿಂದೆ ಮಾರ್ಚ್​ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ.…

ಆಧಾರ್‌, ಪಾನ್‌ ಜೋಡಣೆಗೆ ಕೇವಲ 6 ದಿನ ಬಾಕಿ: ತಪ್ಪಿದರೆ ಪಾನ್‌ ಅಮಾನ್ಯ

ಮುಂಬೈ : ಆಧಾರ್‌ ನಂಬರ್‌ ಮತ್ತು ಪಾನ್‌ ಕಾರ್ಡ್‌ ಜೋಡಣೆಗೆ ಇನ್ನು 6 ದಿನಗಳು ಮಾತ್ರ ಬಾಕಿ ಇದ್ದು, ಈ ಅವಧಿಯೊಳಗೆ ಜೋಡಣೆಯಾಗದಿದ್ದರೆ ಪಾನ್‌ ಕಾರ್ಡ್‌ ಅಮಾನ್ಯವಾಗಲಿದೆ. ಜೊತೆಗೆ ಬ್ಯಾಂಕ್‌ ವ್ಯವಹಾರಗಳು ಕೂಡಾ ಸಾಧ್ಯವಾಗದು. ಅಲ್ಲದೇ ತೆರಿಗೆ ಪಾವತಿಸುವಾಗ ಹೆಚ್ಚುವರಿಯಾಗಿ ಶೇ.10…

ಆರು ತಿಂಗಳಲ್ಲಿ ಟೋಲ್ ಪ್ಲಾಜಾ ರದ್ದು: ಜಿಪಿಎಸ್ ಆಧಾರಿತ ಸಂಗ್ರಹ ವ್ಯವಸ್ಥೆ- ಸಚಿವ ನಿತಿನ್ ಗಡ್ಕರಿ

ನವದೆಹಲಿ: ಮುಂದಿನ ಆರು ತಿಂಗಳುಗಳಲ್ಲಿ ದೇಶದ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳು ಇರುವುದಿಲ್ಲ, ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಭಾರತೀಯ ಕೈಗಾರಿಕೆಗಳ ಒಕ್ಕೂಟ…

LPG ಗ್ರಾಹಕರಿಗೆ ಶುಭಸುದ್ದಿ: 2023-24ನೇ ಸಾಲಿಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ​ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರವು ಗೃಹಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡ್ ​ ಮೇಲೆ ನೀಡುವ 200 ರೂ. ಸಬ್ಸಿಡಿಯನ್ನು 2023-24ನೇ ಸಾಲಿಗೂ ವಿಸ್ತರಿಸಿದೆ. ಉಜ್ವಲ ಯೋಜನೆ ಅಡಿ 9.59…

ರಾಹುಲ್ ಗಾಂಧಿ ‘ಸಂಸತ್ ಸದಸ್ಯತ್ವ’ ರದ್ದು

ನವದೆಹಲಿ : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿ ಲೋಕಸಭೆ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ. ಗುರುವಾರ (ಮಾರ್ಚ್ 23) ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನ ದೋಷಿ ಎಂದು ಘೋಷಿಸಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 15,000…

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ: ಸುಪ್ರೀಂ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಏಪ್ರಿಲ್ 5 ರಂದು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸಲಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ…

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ : ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ!- ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್ ಆದೇಶ ನೀಡಿದೆ. 2019 ರಲ್ಲಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ…

ಖಲಿಸ್ತಾನಿ ಉಗ್ರ ಅಮೃತ್‌ ಪಾಕ್‌ಗೆ ಪರಾರಿಗೆ ಸಜ್ಜು: ಗಡಿಯಲ್ಲಿ ಕಟ್ಟೆಚ್ಚರಕ್ಕೆ ಬಿಎಸ್‌ಎಫ್‌ಗೆ ಕೇಂದ್ರ ಸೂಚನೆ

ಚಂಡೀಗಢ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಸತತ 3ನೇ ದಿನವೂ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ಇನ್ನಷ್ಟುತೀವ್ರಗೊಂಡಿದೆ. ಆತ ಗಡಿ ದಾಟಿ ಹೋಗಬಹುದು ಎಂಬ ಆತಂಕ ಇದ್ದು, ಗಡಿಯಲ್ಲಿ ಬಿಎಸ್‌ಎಫ್‌ ಹಾಗೂ ಸೀಮಾ ಸುರಕ್ಷಾ ಬಲಕ್ಕೆ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ…

ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ಸಮ್ಮತಿ ನೀಡಿದೆ. ಈ ಕುರಿತು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.…