Category: ರಾಜ್ಯ

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭ  ಹಿನ್ನೆಲೆ: ಅಭಿಯಾನ ನಡೆಸುತ್ತಿರುವ ಶ್ರೀರಾಮಸೇನೆ ಕಾರ್ಯಕರ್ತರಿಗೆ ಕೊಲೆ ಬೆದರಿಕೆ!

ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಲವ್ ಜಿಹಾದ್ ವಿರುದ್ದ ಅಭಿಯಾನ ಆರಂಭಿಸಿದ ಶ್ರೀರಾಮಸೇನೆ ಮೇಲೆ ಬಾಂಬ್ ಹಾಕುವ ಹಾಗೂ ಜೀವ ತೆಗೆಯುವ ಬೆದರಿಕೆಗಳು ಕೇಳಿಬರುತ್ತಿವೆ. ಶ್ರೀರಾಮಸೇನೆ ಹೆಲ್ಪ್…

ಚುನಾವಣೆ ಸಂದರ್ಭ ಆಕ್ಷೇಪಾರ್ಹ ಭಾಷಣದ ಆರೋಪ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿಗೆ ಸಂಬಂಧಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

ಪರಿಶಿಷ್ಟ ಜಾತಿ, ಪಂಗಡದ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ನಿರ್ಧಾರ: ಸರ್ಕಾರದ ನಡೆಗೆ ಬಿಜೆಪಿ ಕೆಂಡ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ…

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಸಂಸದ ಡಾ.ರಾಧಾಮೋಹನ್‍ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ. ಡಾ.ರಾಧಾಮೋಹನ್‍ದಾಸ್ ಅವರು ಕರ್ನಾಟಕದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದು, ಕಾರ್ಯಕರ್ತರಿಗೆ ಮತ್ತು…

ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀಧರ ರಾವ್ ಇರಾ, ಕೂಡ್ಲು, ಕರ್ನಾಟಕ, ಮೂಲ್ಕಿ ಮತ್ತು ಧರ್ಮಸ್ಥಳ ಯಕ್ಷಗಾನ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ತೆಂಕುತಿಟ್ಟಿನ ಅಪ್ರತಿಮ ಸ್ತ್ರೀ ವೇಷಧಾರಿಯಾಗಿ ಕಲಾಸೇವೆ ಮಾಡಿರುವ ಅವರು…

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಮತ್ತೆ ಸಂಕಷ್ಟ: ಜು.15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜುಲೈ.15 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಬಿಎಸ್ ಯಡಿಯೂರಪ್ಪ ಮತ್ತು ಇತರ ಮೂವರು ಆರೋಪಿಗಳಿಗೆ ನಗರದ…

ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ : ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ಬಡವರಿಗಾಗಿ ರೂಪಿಸಲಾಗಿರುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಮಾರಾಟ ಮಾಡುವವರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯ ಮೂರ್ತಿ ವಿ.ಶ್ರೀಷಾನಂದ ಅವರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ…

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ: ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ:ವೆಸ್ಟ್ ಇಂಡೀಸ್ ನ ಬಾರ್ಬಡೋಸ್ ನಲ್ಲಿ ನಡೆದ ಟಿ 20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಗೆದ್ದ ಭಾರತೀಯ ಕ್ರಿಕೆಟ್ ತಂಡ ಗುರುವಾರ ಮುಂಜಾನೆ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಶ್ವಕಪ್ ಜತೆ ಬಂದ ಭಾರತೀಯ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ…

ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ: ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ “ನನ್ನ ದೇವ್ರು” ಜು.8 ರಿಂದ ನಿತ್ಯ ಸಂಜೆ 6.30 ರಿಂದ ಪ್ರಸಾರ

ಕರಾವಳಿ ನ್ಯೂಸ್ ಡೆಸ್ಕ್: ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ “ನನ್ನ ದೇವ್ರು” ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಇದೇ ಬರುವ ಜುಲೈ8 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ…

ಉಡುಪಿ ಜಿಲ್ಲೆಯಲ್ಲಿ ಗಾಳಿ, ಮಳೆ ಹಾನಿ : ಮಾಹಿತಿ ಪಡೆದು, ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

ಬೆಂಗಳೂರು : ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸಧ್ಯದ ಪರಿಸ್ಥಿತಿಯ…