Category: ರಾಜ್ಯ

ಬೆಂಗಳೂರು: ಹೈಕೋರ್ಟ್‌ನಲ್ಲಿ ಕತ್ತು ಕೊಯ್ದು ಆತ್ಮಹತ್ಯೆಗೆ ವ್ಯಕ್ತಿ ಯತ್ನ

ಬೆಂಗಳೂರು: ಹೈಕೋರ್ಟ್​ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಮೂಲದ ಶ್ರೀನಿವಾಸ್ (51) ಎಂದು ಗುರುತಿಸಲಾಗಿದೆ.ಮುಖ್ಯ ನ್ಯಾಯಾಧೀಶರ ಪೀಠ ಇರುವ ಕೋರ್ಟ್ ಹಾಲ್ 1ರ ಬಳಿ ಚಾಕುವಿನಿಂದ…

ಎಸ್‌ಡಿಪಿಐ ಬೆಂಬಲಿತ ಕಾಂಗ್ರೆಸ್ ಸರ್ಕಾರದಲ್ಲಿ ಜನ ಸುರಕ್ಷಿತವಾಗಿರಲು ಸಾಧ್ಯವೇ: ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನೆ

ಚನ್ನಪಟ್ಟಣ: ಲೋಕಸಭಾ ಚುನಾವಣೆಗಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದೆ ಎಂದಾದರೆ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕದ ಜನರು ಸುರಕ್ಷತೆಯಿಂದ ಇರಲು ಸಾಧ್ಯವೇ? ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ಅವರು…

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಭೀಕರ ಸಂಘರ್ಷ: ಸೇನಾಪಡೆಗಳ ಎನ್’ಕೌಂಟರ್’ನಲ್ಲಿ 7 ಮಾವೋವಾದಿಗಳ ಹತ್ಯೆ!

ಜಾರ್ಖಂಡ್: ಛತ್ತೀಸ್’ಗಡದ ಕೇಂದ್ರ-ಕೊರ್ಚೋಲಿಯ ಕಾಡಿನಲ್ಲಿ ಮಂಗಳವಾರ ಮುಂಜಾನೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 07 ಮಾವೋವಾದಿಗಳು ಮೃತಪಟ್ಟಿದ್ದಾರೆ‌ ಎಂದು ವರದಿಯಾಗಿದೆ. ಸಿಆರ್’ಪಿಎಫ್, ಕೋಬ್ರಾ ಬೆಟಾಲಿಯನ್, ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ವಿಶೇಷ ಕಾರ್ಯಪಡೆಯ ಜಂಟಿ…

ಸಿದ್ದರಾಮಯ್ಯನವರೇ ನಿಮಗೆ ನಿಮ್ಮ ಅಧಿಕಾರ ಬಗ್ಗೆಯೇ ಗ್ಯಾರಂಟಿ ಇಲ್ಲ, ಇನ್ನು ಗ್ಯಾರಂಟಿ ಯೋಜನೆಗಳಿಗೆ ಏನು ಗ್ಯಾರಂಟಿ : ಮಾಜಿ ಸಚಿವ ಸುನಿಲ್ ಕುಮಾರ್ ವ್ಯಂಗ್ಯ

ಬೆಂಗಳೂರು:ವರುಣಾ ಕ್ಷೇತ್ರದಲ್ಲಿ 60 ಸಾವಿರ ಮತ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಮತದಾರರ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಡಿಕೊಂಡಿದ್ದಾರೆ.ಸಿದ್ದರಾಮಯ್ಯ ಅವರಿಗೆ ಈಗಲೇ ಅಧಿಕಾರ ಕಳೆದುಕೊಳ್ಳುವ ಭಯ ಆವರಿಸಿದ್ದು ಇದರಿಂದ ವಿಚಲಿತರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ,…

ಅಬಕಾರಿ ಹಗರಣ: ಇಡಿ ವಿಚಾರಣೆಯಲ್ಲಿ ಇಬ್ಬರು ಸಚಿವ ಹೆಸರು ಬಾಯಿಬಿಟ್ಟ ಸಿಎಂ ಕೇಜ್ರಿವಾಲ್!

ನವದೆಹಲಿ: ಅಬಕಾರಿ ಹಗರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಜ್ಯಾರಿ ನಿರ್ದೇಶನಾಲಯ(ED) ವಿಚಾರಣೆಯ ವೇಳೆ ತನ್ನ ಸಂಪುಟದ ಇಬ್ಬರು ಸಚಿವರಾದ ಅತಿಷಿ ಹಾಗೂ ಸೌರಭ್‌ ಭಾರದ್ವಾಜ್‌ ಅವರ ಹೆಸರುಗಳನ್ನು ಬಾಯಿಬಿಟ್ಟಿದ್ದಾರೆ ಎಂದು ಇ.ಡಿ. ಹೇಳಿಕೊಂಡಿದೆ. ಅಬಕಾರಿ…

ನಾನು ಸಿಎಂ ಸ್ಥಾನದಲ್ಲಿ ಮುಂದುವರಿಯಬೇಕು ಅಂದ್ರೆ 60 ಸಾವಿರ ಲೀಡ್ ಕೊಡಿ: ವರುಣಾದಲ್ಲಿ ಸಿದ್ದರಾಮಯ್ಯ

ಮೈಸೂರು: ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕು ಅಂದ್ರೆ ಈ ಚುನಾವಣೆಯಲ್ಲಿ 60 ಸಾವಿರ ಲೀಡ್ ಕೊಡಬೇಕು ಎಂದು ವರುಣಾ ಕ್ಷೇತ್ರದ ಮತದಾರರಿಗೆ ಕೇಳಿಕೊಂಡಿದ್ದಾರೆ. ಸೋಮವಾರ ಬಿಳಿಗೆರೆಯಲ್ಲಿ…

ರಾಜ್ಯದಲ್ಲಿ ರಾಮ ಮಂದಿರದ ಅಲೆ ಇಲ್ಲ, ಕಾಂಗ್ರೆಸ್ 18-20 ಸ್ಥಾನ ಗೆಲ್ಲಲಿದೆ: ತನ್ವೀರ್ ಸೇಠ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನವೇ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ತನ್ವೀರ್ ಸೇಠ್, ಪಕ್ಷದ ಭವಿಷ್ಯ ಬಿಜೆಪಿಗಿಂತ ಉತ್ತಮವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, 28 ಕ್ಷೇತ್ರಗಳ ಪೈಕಿ 18-20 ರಿಂದ ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ…

ಕಾಂಗ್ರೆಸ್‌ ಎಂದಿಗೂ ತನ್ನ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್‌ ಪಕ್ಷದ ನಾಯಕರು ಎಂದಿಗೂ ತಮ್ಮ ತಪ್ಪನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈವರೆಗೆ ದೇಶದಲ್ಲಿ ಕೋಟ್ಯಾಂತರ ರುಪಾಯಿ ಹಣ ಲೂಟಿ ಮಾಡಿದ್ದಾರೆ. ಆದ್ದರಿಂದ ಐಟಿ ಅಧಿಕಾರಿಗಳು…

ಶ್ರೀಲಂಕಾಗೆ ಸ್ನೇಹದ ಸಂಕೇತವಾಗಿ ಕಚ್’ತೀವು ದ್ವೀಪ ಬಿಟ್ಟು ಕೊಟ್ಟೆವು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥನೆ

ನವದೆಹಲಿ: ಕಚ್’ತೀವು ದ್ವೀಪವನ್ನು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಶ್ರೀಲಂಕಾಗೆ ಬಿಟ್ಟುಕೊಟ್ಟಿದೆ ಎಂಬ ವಿಚಾರ ಮಾಹಿತಿ ಹಕ್ಕಿನಡಿ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಚುನಾವಣೆಯ ಹೊತ್ತಿನಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಆರಂಭಿಸಿವೆ. ಈ ಮೂಲಕ ಕಾಂಗ್ರೆಸ್‌ ಪಕ್ಷವು ಎಂದಿಗೂ ಭಾರತವನ್ನು…

ನಿರೀಕ್ಷಣಾ ಜಾಮೀನು ಹರಿದು ಹಾಕಿ ನ್ಯಾಯಾಧೀಶರಿಗೆ ನಿಂದಿಸಿದ ಪ್ರಕರಣ: ಕಾನೂನನ್ನು ಗೌರವಿಸದ ಪೊಲೀಸ್ ಅಧಿಕಾರಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಆರೋಪಿಯೊಬ್ಬರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು, ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರರು…