Category: ರಾಜ್ಯ

ಅವಿಶ್ವಾಸ ನಿರ್ಣಯದ ಮೂಲಕ ಪದಚ್ಯುತಿ ಸಾಧ್ಯತೆ: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು,ಆ.07: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಈ ಕುರಿತು ತನ್ನ ರಾಜೀನಾಮೆ ಪತ್ರವನ್ನು ವಿಧಾನ ಪರಿಷತ್ತಿನ ಉಪ ಸಭಾಪತಿಯವರಿಗೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ…

ಉಚಿತ ವಿದ್ಯುತ್ ಯೋಜನೆ ಎಂದು ಗೃಹಜ್ಯೋತಿ ಯೋಜನೆಗೆ ಬಿಲ್: ಸರ್ಕಾರದ ವಿರುದ್ಧ ಹೈಕೋರ್ಟ್`ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ಬೆಂಗಳೂರು,ಆ.07: ಚುನಾವಣೆ ಸಂದರ್ಭದಲ್ಲಿ ಪ್ರತೀ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ಎಂದು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಬಳಿಕ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಸಂಪೂರ್ಣವಾಗಿ ಜಾರಿಯಾಗದೆ, ಬಳಕೆದಾರರಿಗೆ ಪ್ರತಿ ತಿಂಗಳು ಬಿಲ್ ನೀಡಲಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ಗೆ…

ಗ್ರಾ. ಪಂ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಗಣಪತಿಗೆ ಮಾತ್ರ ಅವಕಾಶ ನೀಡುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು,ಆ.06: ನಾಡಿನಾದ್ಯಂತ ಸೆಪ್ಟೆಂಬರ್ 14ರಂದು ಆಚರಿಸಲಾಗುವ ಗಣೇಶ ಹಬ್ಬದ ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಲು ಪ್ರೇರೇಪಿಸುವಂತೆ ಗ್ರಾಮೀಣಾಭಿವೃದ್ಧಿ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ಉಮರ್ ಫಾರೂಕ್ ಕೊಚ್ಚಿಯಲ್ಲಿ ಎನ್‌ಐಎ ವಶಕ್ಕೆ

ಬೆಂಗಳೂರು,ಆ.05 : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸಫಲ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ದಕ್ಷಿಣ ಕನ್ನಡ…

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು : ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಕೋರಿ ಅರ್ಜಿ ಸಲ್ಲಿಸಿದ ಆರೋಪಿ ಪ್ರದೋಶ್: ನಟ ದರ್ಶನ್ ಗೆ ಉರುಳಾಗುತ್ತಾ ಪ್ರಕರಣ?

ಬೆಂಗಳೂರು,ಆ.06 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ 14ನೇ ಆರೋಪಿಯಾಗಿ ಜೈಲಿನಲ್ಲಿರುವ ಪ್ರದೋಶ್ ಗೆ ಇದೀಗ ತನ್ನ ತಪ್ಪಿನ ಅರಿವಾದಂತಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸಲು ತನಗೆ ಅವಕಾಶ ನೀಡಬೇಕೆಂದು ಕೋರ್ಟ್ಗೆ ಮನವಿ ಸಲ್ಲಿಸಿದ್ದಾನೆ. ತನಗೆ ಈ…

ಚಿಕ್ಕಮಗಳೂರಿನಲ್ಲಿ 5 ಮಂದಿ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಚಿಕ್ಕಮಗಳೂರು, ಆ.05: : ಬಾಂಗ್ಲಾ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗದ ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಹೈಕೋರ್ಟ್ ತೀವೃ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಅಕ್ರಮವಾಗಿ ನೆಲೆಸಿರುವ…

ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾಮಾಜಿಕ ಜಾಲತಾಣದ ಒತ್ತಡ ಹೆಚ್ಚುತ್ತಿದೆ: ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ, ಆ.05: ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಆಧಾರದಲ್ಲಿ ಸಾರ್ವಜನಿಕ ಅಭಿಪ್ರಾಯವು ಇಂದು ನ್ಯಾಯಾಂಗ ಸ್ವಾತಂತ್ರ‍್ಯ ಎದುರಿಸುತ್ತಿರುವ ಅತಿ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಜಾಯ್‌ಮಾಲ್ಯ ಬಾಗ್ಚಿ ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮವು ಹಲವು…

ಕಾಂಗ್ರೆಸ್ ಲೆಟರ್ ಹೆಡ್ ನಲ್ಲಿ ಸ್ಪೀಕರ್, ಉಪ ಸಭಾಪತಿಗಳ ಹೆಸರು ಪ್ರಕಟ: ಸಾಂವಿಧಾನಿಕ ಹುದ್ದೆಗಳ ದುರ್ಬಳಕೆ ಕಾಂಗ್ರೆಸ್ ಹುಟ್ಟುಗುಣ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು, ಆ.03:ಸ್ಪೀಕರ್ ಹಾಗೂ ಉಪಸಭಾಪತಿ ಸ್ಥಾನ ಸಂವಿಧಾನಾತ್ಮಕ ಹುದ್ದೆಗಳಾಗಿವೆ. ಇವುಗಳ ಆಯ್ಕೆ ಪ್ರಕ್ರಿಯೆಗೆ ಅದರದ್ದೇ ಆದ ಮಾರ್ಗ ಹಾಗೂ ನಿಯಮಾವಳಿಗಳಿವೆ. ಆದರೆ ಕಾಂಗ್ರೆಸ ಪಕ್ಷದ ಲೆಟರ್ ಹೆಡ್ ನಲ್ಲಿ ಈ ಹುದ್ದೆಗೆ ಆಯ್ಕೆಯಾದವರ ಹೆಸರು ಪ್ರಕಟಿಸಿರುವುದು ಶಾಸನಸಭೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ‌.…

ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾದ ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು,ಆ.03: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಆಂತರಿಕ ಅಸಮಾಧಾನ ಹಾಗೂ ರಾಜಕೀಯ ಕಾವು ಮತ್ತಷ್ಟು ತೀವ್ರಗೊಂಡಿದೆ. ಲೋಕಭವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ…

ರಾಜ್ಯ ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಅಧಿಕೃತ ಪಟ್ಟಿ ಬಿಡುಗಡೆ

ಬೆಂಗಳೂರು, ಆ. 03: ಬಹುನಿರೀಕ್ಷಿತ ಸಿಎಂಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್​​ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ ನೂತನ ಸ್ಪೀಕರ್​​, ಡೆಪ್ಯೂಟಿ ಸ್ಪೀಕರ್​​ ಹಾಗೂ…