Category: ರಾಜ್ಯ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಈಡಿಗ,ಬಿಲ್ಲವ,ನಾಮಧಾರಿ ಸಮಾಜದಿಂದ ಇಂದು ‘ಗಂಗಾವತಿ ಚಲೋ’: ಪ್ರಣವಾನಂದ ಶ್ರೀ ಸೇರಿದಂತೆ ಹಲವರು ಭಾಗಿ

ಕೊಪ್ಪಳ : ಈಡಿಗ ಬಿಲ್ಲವ ಹಾಗೂ ನಾಮಧಾರಿ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೊಪ್ಪಳ ಜಿಲ್ಲೆಯ ‘ ಗಂಗಾವತಿ ಚಲೋ’ ಹಮ್ಮಿಕೊಂಡಿದ್ದು ನಂತರ ಅಲ್ಲಿ ಒಂದು ದಿನ ಉಪವಾಸ ಸತ್ಯಾಗ್ರಹ ಆಯೋಜನೆ ಮಾಡಲಾಗಿದೆ. ಈಡಿಗ ಸಮುದಾಯದ ಗುರುಗಳಾದ ಪ್ರಣವಾನಂದ…

ಚುನಾವಣೆ ಗೆಲ್ಲಬೇಕಾದರೆ ಜನರ ಹೃದಯ ಗೆಲ್ಲಬೇಕು: ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್

ನವದೆಹಲಿ: ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಮೊದಲು ಜನರ ಹೃದಯಗಳನ್ನು ಗೆಲ್ಲಬೇಕು. ದೀರ್ಘಕಾಲ ಈಡೇರಿಸಲಾಗದ ತಾತ್ಕಾಲಿಕ ಸುಳ್ಳು ಭರವಸೆಗಳನ್ನು ನೀಡಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಇತ್ತೀಚಿನ ವಿಧಾನಸಭೆ ಚುನಾವಣೆ ಫಲಿತಾಂಶಗಳು ಮೋದಿಯ ಗ್ಯಾರಂಟಿ ಜನರ ನಡುವೆ ಪ್ರತಿಧ್ವನಿಸುತ್ತಿದೆ ಎಂಬುದರ ದ್ಯೋತಕ ಎಂದು ಬಣ್ಣಿಸಿದ ಪ್ರಧಾನಿ…

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ‌ ಸ್ಪೀಕರ್ ಖಾದರ್ ವಿನೂತನ ಪ್ರಯೋಗ: ಶಾಸಕರ ಹೆಸರಲ್ಲೊಂದು ಗಿಡ!

ಬೆಳಗಾವಿ: ಹಸಿರು ಪರಿಸರಕ್ಕೆ‌ ಒತ್ತು ಕೊಡುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಈ ಬಾರಿಯ ಚಳಿಗಾಲದ‌ ಅಧಿವೇಶನದಲ್ಲಿ ವಿನೂತನ ಪ್ರಯೋಗವೊಂದನ್ನು ಮಾಡಿದ್ದಾರೆ. ಹೌದು, ಸುವರ್ಣಸೌಧದ ಆವರಣದಲ್ಲಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರಿನಲ್ಲಿ ಒಂದೊಂದು ಗಿಡ ನೆಡಲಿದ್ದಾರೆ. ಈ…

ಮುಂಬಯಿ ಬೆಂಗಳೂರು ಸೇರಿದಂತೆ ಹಲವೆಡೆ ಏಕಕಾಲದಲ್ಲಿ ಎನ್ಐಎ ದಾಳಿ: ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ; ವಾಟ್ಸಪ್, ಟೆಲಿಗ್ರಾಂ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಕ್ಕೆ ಸಂಚು!

ಬೆಂಗಳೂರು: ಐಸಿಸ್ ಭಯೋತ್ಪಾದನೆ ದುಷ್ಕೃತ್ಯದ ಪ್ರಕರಣದಲ್ಲಿ ಎನ್ಐಎ ತಂಡವು (ರಾಷ್ಟ್ರೀಯ ತನಿಖಾ ದಳ) ಕರ್ನಾಟಕ ಮತ್ತು ಮಹಾರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಶಂಕಿತ ಐಸಿಸ್ ಉಗ್ರ ಮುಂಬಯಿ ಮೂಲದ ಆಲಿ ಅಬ್ಬಾಸ್…

ಶಾಸಕಿ ಕನೀಝ್‌ ಫಾತಿಮಾ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ: ಶಾಸಕಿ ಫಾತಿಮಾ ಸೇರಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದದಿಂದ ಆಯ್ಕೆಯಾದ ಕಾಂಗ್ರೆಸ್‌ ಶಾಸಕಿ ಕನೀಝ್‌ ಫಾತಿಮಾ ಅವರು ಅಫಿಡವಿಟ್‌ನಲ್ಲಿ ಆಸ್ತಿ ಹಾಗೂ ಶೈಕ್ಷಣಿಕ ಅರ್ಹತೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದು, ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು…

ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೋದಿಗೆ ಶೇ.76ರಷ್ಟು ರೇಟಿಂಗ್:ಸಮೀಕ್ಷೆಯಲ್ಲಿ ಮತ್ತೆ ನಂ.1 ಪಟ್ಟ

ನವದೆಹಲಿ: ಅಮೆರಿಕಾ ಮೂಲದ ಕನ್ಸಲ್ಟೆನ್ಸಿ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಶೇ.76ರಷ್ಟು ಅನುಮೋದಿತ ರೇಟಿಂಗ್ ನೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಸ್ಥಾನ ಪಡೆದಿದ್ದಾರೆ. ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್…

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ: ಕಳಚಿತು ಕನ್ನಡ ಚಿತ್ರರಂಗದ ಹಿರಿಯ ಕೊಂಡಿ

ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಲೀಲಾವತಿ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಆರೋಗ್ಯ ಮತ್ತಷ್ಟು…

ಸಚಿವ ಜಮೀರ್ ಅಹಮ್ಮದ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಕಾರ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಕುರಿತಂತೆ ಇಂದು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕಳೆದ ನವೆಂಬರ್‌ನಲ್ಲಿ ಹೈಕೋರ್ಟ್ ಜಮೀರ್ ಅಹಮ್ಮದ್ ಅಕ್ರಮ…

ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ತನ್ವೀರ್ ಹಾಶ್ಮಿ ವಿರುದ್ಧದ ಬಸನಗೌಡ ಯತ್ನಾಳ್‌ ಹೇಳಿಕೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್,ಎ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಒಂದು ಚಿತ್ರವೊಂದನ್ನು ಇಟ್ಟುಕೊಂಡು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಐಸಿಸ್ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿರುವುದು ಖಂಡನೀಯ ಎಂದು ಕರ್ನಾಟಕ…

ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನ ?

ಬೆಂಗಳೂರು:ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಬಲ ಪಕ್ಷವಾಗಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಕಾಂಗ್ರೆಸ್ ಹೊಂದಿದೆ. ಮೊನ್ನೆ ನಡೆದ ಚುನಾವಣೆಯಲ್ಲಿ ತೆಲಂಗಾಣವನ್ನು ಗೆದ್ದು ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ,ಕಾಂಗ್ರೆಸ್ ಅಧಿನಾಯಕಿ ಸೋನಿಯಾ…