Category: ರಾಜ್ಯ

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ವೈಯಕ್ತಿಕ ಖಾತೆಯಿಂದ ದೇವಿಗೆ ಕಾಣಿಕೆ ಸಮರ್ಪಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್…

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಇಂದು ಬೆಂಗಳೂರಿಗೆ: ನಿಗಮ ಮಂಡಳಿಗಳಿಗೆ ಇಂದೇ ಅಧ್ಯಕ್ಷರ ಪಟ್ಟಿ ಫೈನಲ್ ಸಾಧ್ಯತೆ

ಬೆಂಗಳೂರು:ನಿಗಮ-ಮಂಡಳಿ ಹುದ್ದೆ ನೇಮಕಾತಿ ಸಂಬಂಧ ಮೊದಲ ಹಂತದ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಪಟ್ಟಿಯನ್ನು ಪ್ರಕಟಿಸುವ ಕುರಿತು ಅಂತಿಮ ಹಂತದ ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಭಾವ್ಯರ ಪಟ್ಟಿಯಲ್ಲಿರುವ ಶಾಸಕರು ಹಾಗೂ ನಾಯಕರ…

ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ನಿಧನ

ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ನಿಧನರಾದರು ಸೋಮವಾರ ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾದರು. ಕೆಲವು ವಾರಗಳ ಹಿಂದೆ ಅಂಬಿಕಾಪತಿ ಮೇಲೆ ಮನೆ ಮೇಲೆ ಐಟಿ ದಾಳಿ…

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ನಾರಾಯಣಸ್ವಾಮಿ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು :ಕಳೆದ 8 ತಿಂಗಳಿನಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೊನೆಗೂ ಅಧ್ಯಕ್ಷರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾ.ನಾರಾಯಣಸ್ವಾಮಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ…

ಮೋದಿ ಹಾರಾಟ ನಡೆಸಿದ ತೇಜಸ್ ಯುದ್ಧ ವಿಮಾನ ಕೂಡ ಪತನವಾಗಲಿದೆ: ಟಿಎಂಸಿ ನಾಯಕನ ವಿವಾದಾತ್ಮಕ ಹೇಳಿಕೆ

ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಅಪಶಕುನ ಎಂಬ ವಿಪಕ್ಷ ನಾಯಕರ ಕೀಳುಮಟ್ಟದ ಟೀಕೆಗಳು ಮುಂದುವರಿದಿದ್ದು, ಮೋದಿ ಹಾರಾಡಿದ ತೇಜಸ್‌ ಯುದ್ಧ ವಿಮಾನ ಕೂಡ ಅಪಶಕುನದಿಂದ ಪತನವಾಗುವ ಸಾಧ್ಯತೆ ಇದೆ ಎಂದು ಟಿಎಂಸಿ ನಾಯಕ ಶಾಂತನು ಸೇನ್ ಆಕ್ಷೇಪಾರ್ಹ ಹೇಳಿಕೆ…

ತುಮಕೂರು: ಮೀಟರ್ ಬಡ್ಡಿಯವನಿಂದ ಕಿರುಕುಳ ಆರೋಪ? ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ

ತುಮಕೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಕಿರುಕುಳದಿಂದ ತುಮಕೂರು ಜಿಲ್ಲೆಯ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಗರೀಬ್‌ಸಾಬ್‌ (36), ಸುಮಯಾ (30), ಹಾಜೀರಾ ( 14) , ಮಹ್ಮಮದ್ ಶುಭಾನ್ (10)…

ಯಾವುದೇ ವ್ಯಕ್ತಿಯ ಬಂಧನದ ವೇಳೆ ಪೊಲೀಸರು ದೇಹಕ್ಕೆ ಕ್ಯಾಮರಾ ಧರಿಸುವುದು ಕಡ್ಡಾಯ: ಡಿಜಿಪಿ ಅಲೋಕ್‌ ಮೋಹನ್ ಆದೇಶ

ಬೆಂಗಳೂರು: ಸುಳ್ಳು ಕೇಸ್ ದಾಖಲು, ಭ್ರಷ್ಟಾಚಾರ, ಸುಲಿಗೆ, ಅನುಚಿತ ವರ್ತನೆ ಸೇರಿ ಪೊಲೀಸರ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳ ನಿಯಂತ್ರಣ ಹಾಗೂ ಕರ್ತವ್ಯದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ದೇಹಕ್ಕೆ (ಬಾಡಿವೋರ್ನ್) ಕ್ಯಾಮರಾ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಪೊಲೀಸ್…

ಭ್ರೂಣ ಲಿಂಗ ಪತ್ತೆ ಪ್ರಕರಣ; 2 ವರ್ಷದಲ್ಲಿ ಬರೋಬ್ಬರಿ 900 ಹೆಣ್ಣು ಭ್ರೂಣಗಳ ಹತ್ಯೆ, ವೈದ್ಯರು ಸೇರಿ 9 ಆರೋಪಿಗಳ ಬಂಧನ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಿರುವ ಬೆಂಗಳೂರು ಪೊಲೀಸರು ಇಬ್ಬರು ವೈದ್ಯರು ಸೇರಿ 9 ಜನ ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಡಾ. ತುಳಸಿ ರಾಮ್, ಡಾ…

ಎಫ್ ಡಿಎ,ಎಸ್ ಡಿ ಎ ಹುದ್ದೆಗಳನ್ನು ರದ್ದುಪಡಿಸಲು ಶಿಫಾರಸು: ಸಿಎಂ ಗೆ ಆಡಳಿತ ಸುಧಾರಣಾ ಆಯೋಗದ ವರದಿ

ಬೆಂಗಳೂರು:ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷ ಹಾಗೂ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರನ್ನೊಳಗೊಂಡ ಆಯೋಗವು ಆರನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಿದೆ. ಹಲವು ಇಲಾಖೆಗಳಲ್ಲಿ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರು ಹಾಗೂ…

ಅವೈಜ್ಞಾನಿಕ ಜಾತಿ ಜನಗಣತಿ ವರದಿಗೆ ನನ್ನ ವಿರೋಧವಿದೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ವೈಜ್ಞಾನಿಕವಾಗಿ ಸಮಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ…