Category: ರಾಜ್ಯ

ಬಿ.ವೈ ವಿಜಯೇಂದ್ರ ನೇಮಕದಿಂದ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ: ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯ

ಬೆಳಗಾವಿ: ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅತ್ಯಂತ ಪವರ್ ಫುಲ್ ನಾಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ ಬಿಟ್ಟರೆ ಬಿಜೆಪಿಗೆ ಬೇರೆ ಪ್ರಬಲ ನಾಯಕರಿಲ್ಲ ಹಾಗಾಗಿ ಅವರ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ…

ಮುಂದಿನ ಶುಕ್ರವಾರವೇ ವಿಪಕ್ಷ ನಾಯಕನ ಆಯ್ಕೆ!: ರಾಜ್ಯಾಧ್ಯಕ್ಷರಾದ ಬೆನ್ನಲ್ಲೇ ವಿಜಯೇಂದ್ರ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಈವರೆಗೂ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ವಿಫಲವಾಗಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಕೊನೆಗೂ ರಾಜ್ಯಾಧ್ಯಕ್ಷ ಪಟ್ಟಕ್ಕೆ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ನೆನೆಗುದಿಗೆ ಬಿದ್ದಿದ್ದ…

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!: ದೀಪಾವಳಿ ಹಬ್ಬಕ್ಕೆ ಬಿಎಸ್ ವೈ ಗೆ ಹೈಕಮಾಂಡ್ ಭರ್ಜರಿ ಗಿಫ್ಟ್

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರನಿಗೆ ಭರ್ಜರಿ ದೀಪಾವಳಿ ಗಿಫ್ಟ್‌ ಸಿಕ್ಕಿದೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಅವರು ಬಿಜೆಪಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ವಿಧಾನಸಭೆ…

ಕೆಇಎ ಪರೀಕ್ಷಾ ಅಕ್ರಮ:ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆಯನ್ನು ನ.16ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಕಲಬುರ್ಗಿ ಜಿಲ್ಲೆಯಲ್ಲಿ ನಡೆದ ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿರುವ ಆರೋಪದಲ್ಲಿ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪಾಟೀಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನವೆಂಬರ್ 16 ಕ್ಕೆ ಮುಂದೂಡಿದೆ. ಕಲಬುರ್ಗಿ…

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಡೆಡ್ ಲೈನ್ ನೀಡಿದ ಹೈಕೋರ್ಟ್!

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದೆ.ಈ ಮೂಲಕ ಲೋಕಸಭೆ ಚುನಾವಣೆ ಯವರೆಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡುವ…

ಜನನ-ಮರಣ ನೋಂದಣಿ ತಿದ್ದುಪಡಿ ಅಧಿಕಾರ ಎಸಿಗೆ:ಸಚಿವ ಸಂಪುಟ ಸಭೆಯಲ್ಲಿ  ಮಹತ್ವದ ತೀರ್ಮಾನ

ಬೆಂಗಳೂರು: ಜನನ-ಮರಣ ನೋಂದಣಿಗಳ ತಿದ್ದುಪಡಿ ಹಾಗೂ ವಿಳಂಬ ನೋಂದಣಿಯ ಪ್ರಕರಣಗಳಲ್ಲಿ ಸಾರ್ವಜನಿಕರು ನ್ಯಾಯಾಲಯದ ಮೊರೆ ಹೋಗುವುದನ್ನು ತಪ್ಪಿಸಿ ಉಪ ವಿಭಾಗಾಧಿಕಾರಿಗಳಿಗೆ ಜನನ-ಮರಣ ನೋಂದಣಿಗಳ ತಿದ್ದುಪಡಿ ಅಧಿಕಾರವನ್ನು ನೀಡಲು ಅಗತ್ಯ ನಿಯಮಾವಳಿ ತಿದ್ದುಪಡಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ…

ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದೆ: ಬಿಜೆಪಿ ನಾಯಕರಿಗೆ ಸಚಿವ ಎಚ್‌. ಕೆ.ಪಾಟೀಲ್‌ ತಿರುಗೇಟು

ಶಹಾಪುರ:ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ,ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಬರ ಪರಿಹಾರ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ ಎನ್ನುವ ಬಿಜೆಪಿ ನಾಯಕರಿಗೆ ಸಚಿವ ಎಚ್.ಕೆ ಪಾಟೀಲ್ ತಿರುಗೇಟು ನೀಡಿದ್ದು, ಬರದಿಂದ ರಾಜ್ಯ ತತ್ತರಿಸಿದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ ,ಕೇಂದ್ರ…

ಸಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ: ಪಕ್ಷ ನನಗೆ ಎಲ್ಲವನ್ನೂ ನೀಡಿದೆ,ಹೆಚ್ಚಿನದ್ದಕ್ಕೆ ಆಸೆ ಪಡುವುದಿಲ್ಲ

ಬೆಂಗಳೂರು: ಮಾಜಿ ಸಿಎಂ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರು ತಮ್ಮ ಸಕ್ರೀಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸದಾನಂದಗೌಡ, ನಾನು ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ,ಸಕ್ರೀಯ ಚುನಾವಣಾ ರಾಜಕೀಯದಿಂದ…

ಅಪ್ರಾಪ್ತ ಬಾಲಕಿಯರಿಗೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾದ ಮುರುಘಾ ಶ್ರೀಗಳಿಗೆ ಬಿಡುಗಡೆ ಭಾಗ್ಯ! ಕೊನೆಗೂ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿ ಒಂದು ವರ್ಷದಿಂದ ಜೈಲುವಾಸ ಅನುಭವಿಸುತ್ತಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಹೈಕೋರ್ಟ್ ಕೊನೆಗೂ…

ಆಪರೇಷನ್ ಹಸ್ತದ ಕುರಿತು ಡಿಸಿಎಂ ಡಿಕೆಶಿ ಸ್ಪೋಟಕ ಹೇಳಿಕೆ!: ನ.15 ಕ್ಕೆ ಬಿಜೆಪಿ-ಜೆಡಿಎಸ್ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ!

ನವದೆಹಲಿ:ದೀಪಾವಳಿ ಬಳಿಕ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಸೃಷ್ಟಿಯಾಗುವ ಸಾಧ್ಯತೆಯಿದ್ದು, ಆಪರೇಷನ್ ಕುರಿತಂತೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೋಟಕ ಹೇಳಿಕೆಯೊದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ನ ಹಲವು ನಾಯಕರು ನವೆಂಬರ್…