Category: ರಾಜ್ಯ

ಉದ್ಯಮಿಗೆ ಹಣ ವಂಚನೆ ಪ್ರಕರಣ: ‘ಕುಂದಾಪುರ’ ಹೆಸರು ಬಳಸದಂತೆ ಕೋರ್ಟ್​​ ತಡೆಯಾಜ್ಞೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನದಲ್ಲಿರುವ ಚೈತ್ರಾ ಅವರ ಹೆಸರಿನ ಜತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.…

ಕೋಳಿ ಸಾಕಣೆ ವಾಣಿಜ್ಯ ಚಟುವಟಿಕೆ ಅಲ್ಲ :ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ಅಧಿಕಾರವಿಲ್ಲ- ಹೈಕೋರ್ಟ್ ಆದೇಶ

ಬೆಂಗಳೂರು : ಕೋಳಿ ಸಾಕಾಣಿಕೆಯು (ಪೌಲ್ಟ್ರಿ ಫಾರಂ) ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆಯಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್​ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯತಿ​ಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಕೃಷಿ ಜಮೀನಿನಲ್ಲಿ ನಿರ್ಮಿಸಿದ ಕೋಳಿ…

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಂಥನ್ ವ್ಯವಹಾರ ಯೋಜನೆ ಸ್ಪರ್ಧೆ : ನಿಟ್ಟೆ ವಿದ್ಯಾರ್ಥಿಗಳ ಯಕ್ಷಮಿತ್ರಕ್ಕೆ ಆಪ್ ಗೆ ದ್ವಿತೀಯ ಬಹುಮಾನ

ಕಾರ್ಕಳ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಆಯೋಜಿಸಿದ್ದ ಪ್ರತಿಷ್ಠಿತ ಮಂಥನ್ ವ್ಯವಹಾರ ಯೋಜನೆ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಯಕ್ಷಮಿತ್ರ ಆಪ್ ತಂಡವು 2ನೇ ಸ್ಥಾನವನ್ನು ಪಡೆದುಕೊಂಡಿದೆ. ವಿವಿಧ ವಲಯಗಳ 272 ತಂಡಗಳನ್ನು ಒಳಗೊಂಡ…

ರಾಜ್ಯಮಟ್ಟದ ರೆಡ್ ಕ್ರಾಸ್ ಮ್ಯಾರಥಾನ್ ಓಟ : ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಗೆ ಚಿನ್ನದ ಪದಕ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಮ್ಯಾರಥಾನ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿ ನಂದಿನಿ ಅವರು ಚಿನ್ನದ ಪದಕ ಗಳಿಸಿದ್ದಾರೆ. ಇದರೊಂದಿಗೆ ರೂ.25,000/- ನಗದು ಬಹುಮಾನ ಹಾಗೂ ಪ್ರಮಾಣಪತ್ರವನ್ನು ಇವರು ಪಡೆದಿರುತ್ತಾರೆ.…

ಮಂಗಳೂರಿನಲ್ಲಿ ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ : ಇಂಧನ ಸಚಿವ ಕೆ.ಜೆ ಜಾರ್ಜ್‌

ಬೆಂಗಳೂರು: ಭವಿಷ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಲು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲೇ ಕ್ರಾಂತಿಕಾರಕ ಹೆಜ್ಜೆ ಇಡಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ಭವಿಷ್ಯದ ಇಂಧನ‘ ಎಂದೇ ಕರೆಯಲ್ಪಡುವ ‘ಗ್ರೀನ್ ಹೈಡ್ರೋಜನ್‌‘ ಉತ್ಪಾದನೆಗೆ ದೇಶದ ಮೊದಲ ಗ್ರೀನ್ ಹೈಡ್ರೋಜನ್ ಕ್ಲಸ್ಟರ್ ನಿರ್ಮಾಣಕ್ಕೆ ತೀರ್ಮಾನಿಸಿದೆ. ಈ ಬಗ್ಗೆ…

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಗ್ಯಾರಂಟಿ ಯೋಜನೆ ಜಾರಿಗೆ ಸಿದ್ಧತೆ!: ಡಿಸೆಂಬರ್ ಅಂತ್ಯದೊಳಗೆ ಯುವನಿಧಿ ಯೋಜನೆ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣಾಪೂರ್ವದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆಗೊಳಿಸಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಯುವನಿಧಿ ಯೋಜನೆ ಜಾರಿ ಕುರಿತು ಸಚಿವ ಡಾ.ಶರಣಪ್ರಕಾಶ್…

ನಮ್ಮನ್ನು ಸುಮ್ಮನೆ ಕೆಣಕಿದರೆ ಮಸೀದಿಯಲ್ಲೂ ಗಣೇಶ ಪ್ರತಿಷ್ಠಾಪಿಸುತ್ತೇವೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಹುಬ್ಬಳ್ಳಿ: ಹಿಂದೂ ಸಮಾಜವನ್ನು ಸುಮ್ಮನೆ ಕೆಣಕಿದರೆ ಮುಂದೆ ಮಸೀದಿಯಲ್ಲೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಅವರು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇರಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಪೂರ್ವದಲ್ಲಿ ಮೂರ್ತಿಗೆ…

ಉದ್ಯಮಿಗೆ ಹಣ ವಂಚನೆ ಪ್ರಕರಣ: ಕೊನೆಗೂ ತಪ್ಪೊಪ್ಪಿಕೊಂಡ ಆರೋಪಿ ಚೈತ್ರಾ ಕುಂದಾಪುರ

ಬೆಂಗಳೂರು: ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರು ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಕುರಿತಂತೆ ಪ್ರಮುಖ ಆರೋಪಿ ಆಗಿರುವಂತಹ ಚೈತ್ರ ಕುಂದಾಪುರ ಸಿಸಿಬಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟಿದ್ದು ತನ್ನ ತಪ್ಪನ್ನು…

ಉದ್ಯಮಿಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಪ್ರಭಾವಿಗಳ ಹೆಸರು ಪ್ರಸ್ತಾಪಿಸಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗೆ ನೋಟೀಸ್ ನೀಡಲು ಸಿಸಿಬಿ ಸಿದ್ದತೆ!

ಬೆಂಗಳೂರು: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಚೈತ್ರಾ ಕುಂದಾಪುರ ವಂಚನೆ ಕೇಸ್​ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ,…

ಕಾವೇರಿ ಜಲವಿವಾದದಲ್ಲಿ‌ ಕರ್ನಾಟಕ ಮತ್ತೆ ಹಿನ್ನಡೆ! ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ನವದೆಹಲಿ:ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೊಳಿಸುವ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್​ ನ್ಯಾ.ಗವಾಯಿ ನೇತೃತ್ವದ…