Category: ರಾಜ್ಯ

ನಮ್ಮನ್ನು ಸುಮ್ಮನೆ ಕೆಣಕಿದರೆ ಮಸೀದಿಯಲ್ಲೂ ಗಣೇಶ ಪ್ರತಿಷ್ಠಾಪಿಸುತ್ತೇವೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಹುಬ್ಬಳ್ಳಿ: ಹಿಂದೂ ಸಮಾಜವನ್ನು ಸುಮ್ಮನೆ ಕೆಣಕಿದರೆ ಮುಂದೆ ಮಸೀದಿಯಲ್ಲೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಅವರು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇರಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಪೂರ್ವದಲ್ಲಿ ಮೂರ್ತಿಗೆ…

ಉದ್ಯಮಿಗೆ ಹಣ ವಂಚನೆ ಪ್ರಕರಣ: ಕೊನೆಗೂ ತಪ್ಪೊಪ್ಪಿಕೊಂಡ ಆರೋಪಿ ಚೈತ್ರಾ ಕುಂದಾಪುರ

ಬೆಂಗಳೂರು: ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರು ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಕುರಿತಂತೆ ಪ್ರಮುಖ ಆರೋಪಿ ಆಗಿರುವಂತಹ ಚೈತ್ರ ಕುಂದಾಪುರ ಸಿಸಿಬಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟಿದ್ದು ತನ್ನ ತಪ್ಪನ್ನು…

ಉದ್ಯಮಿಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಪ್ರಭಾವಿಗಳ ಹೆಸರು ಪ್ರಸ್ತಾಪಿಸಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗೆ ನೋಟೀಸ್ ನೀಡಲು ಸಿಸಿಬಿ ಸಿದ್ದತೆ!

ಬೆಂಗಳೂರು: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಚೈತ್ರಾ ಕುಂದಾಪುರ ವಂಚನೆ ಕೇಸ್​ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ,…

ಕಾವೇರಿ ಜಲವಿವಾದದಲ್ಲಿ‌ ಕರ್ನಾಟಕ ಮತ್ತೆ ಹಿನ್ನಡೆ! ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ನವದೆಹಲಿ:ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೊಳಿಸುವ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್​ ನ್ಯಾ.ಗವಾಯಿ ನೇತೃತ್ವದ…

ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದ ಅನುಮತಿ

ಬೆಂಗಳೂರು: ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ 1,17,646 ಬಿಪಿಎಲ್ ಫಲಾನುಭವಿಗಳಿಗೆ ಕಾರ್ಡ್ ತಿದ್ದುಪಡಿಗೆ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಬಿಪಿಎಲ್ ಕಾರ್ಡ್ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿAದ ಹೊಸದಾಗಿ ತಿದ್ದಪಡಿಗೆ ಒಟ್ಟು 53219…

ಎಚ್‌ಡಿಕೆ ಇಂದು ದಿಲ್ಲಿಗೆ:ಬಿಜೆಪಿ ನಾಯಕರ ಜತೆ ಚರ್ಚೆಯ ಬಳಿಕ ಜೆಡಿಎಸ್‌-ಬಿಜೆಪಿ ಮೈತ್ರಿ ಅಂತಿಮ ಸಾಧ್ಯತೆ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕುವ ಉದ್ದೇಶದಿಂದ ರಾಜ್ಯದಲ್ಲಿನ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ…

ಎಎಂಆರ್‌ಐ ಹಾಸ್ಪಿಟಲ್ಸ್‌ನ ಶೇ 84ರಷ್ಟು ಷೇರು ಮಣಿಪಾಲ್ ಆಸ್ಪತ್ರೆ ತೆಕ್ಕೆಗೆ

ನವದೆಹಲಿ:ಇಮಾಮಿ ಸಮೂಹದ ಎಎಂಆರ್‌ಐ ಹಾಸ್ಪಿಟಲ್ಸ್‌ ಲಿಮಿಟೆಡ್‌ನ ಶೇ 84ರಷ್ಟು ಷೇರುಗಳನ್ನು ಖರೀದಿಸಿರುವುದಾಗಿ ಮಣಿಪಾಲ್‌ ಹಾಸ್ಟಿಟಲ್ಸ್‌ ತಿಳಿಸಿದೆ. ಎಎಂ ಆರ್ ಐ ಆಸ್ಪತ್ರೆಯ ವೈದ್ಯಕೀಯ ಪರಿಣಿತಿ ಮತ್ತು ಮೂಲ ಸೌಕರ್ಯಗಳು ಹಾಗೂ ಮಣಿಪಾಲ್ ಆಸ್ಪತ್ರೆಯ ಅತಿ ದೊಡ್ಡ ಜಾಲಗಳು ಸಮ್ಮಿಲನದಿಂದಾಗಿ ಗುಣಮಟ್ಟದ ಆರೋಗ್ಯ…

ಕುಂದಾಪುರದ ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣ:ಆರೋಪಿ ಅಭಿನವ ಹಾಲಶ್ರೀಗೆ 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ…

ಸೋಷಿಯಲ್ ಮೀಡಿಯಾ ಬಳಕೆಗೂ ವಯೋಮಿತಿ ನಿಗದಿಪಡಿಸಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್​ ಸಲಹೆ

ಬೆಂಗಳೂರು: ಶಾಲೆಗೆ ಹೋಗುವ ಮಕ್ಕಳೂ ಸಹ ಸಾಮಾಜಿಕ ಜಾಲತಾಣಗಳನ್ನು ಬೇಕಾಬಿಟ್ಟಿ ಬಳಸುತ್ತಿದ್ದ ಕಾರಣ ಮತದಾನಕ್ಕೆ 21 ವರ್ಷ ನಿಗದಿ ಮಾಡಿರುವ ಮಾದರಿಯಲ್ಲೇ ಸಾಮಾಜಿಕ ಜಾಲತಾಣ ಬಳಕೆಗೂ ವಯೋಮಿತಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ…

ಅ. 5 ರಂದು ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರ ಪ್ರತಿಭಟನೆ:ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು:ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೆ.ಎಸ್.ಆರ್.ಟಿ.ಸಿ. ನಿಗಮಗಳ ಒಕ್ಕೂಟದ(CITU) ಅಧ್ಯಕ್ಷ ಹೆಚ್.ಡಿ ರೇವಪ್ಪ ಈ ಕುರಿತು…