Category: ರಾಜ್ಯ

ಮಂಗಳೂರು: MBBS ಸೀಟ್ ಹೆಸರಿನಲ್ಲಿ ಅಕ್ರಮ ಪ್ರಕರಣ:ರಾಷ್ಟ್ರೀಯ  ವೈದ್ಯಕೀಯ ಆಯೋಗದಿಂದ ಸಮಗ್ರ ತನಿಖೆಗೆ ರಾಜ್ಯ ಸರ್ಕಾರಕ್ಕೆ ಸೂಚನೆ

ಮಂಗಳೂರು: ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು ಹೆಸರಿನಲ್ಲಿ ಸರ್ಕಾರದ ಅನುಮತಿಯನ್ನೇ ಪಡೆಯದೆ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸೂಚಿಸಿದೆ. ಈ ನಡುವೆ ಪೋಷಕರೊಂದಿಗೆ ಕಾಲೇಜಿಗೆ…

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವರ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಮೈಸೂರು: ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ ಅದನ್ನು ಬೇರು ಸಹಿತ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ, ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ. ಮೈಸೂರಿನಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಶ್ರೀಗಳು…

ರಾಜ್ಯದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್: 77.85 ಕೋಟಿ ರೂ ತಸ್ತಿಕ್​​ ಹಣ ​ಬಿಡುಗಡೆ

ಬೆಂಗಳೂರು: ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರ ಭತ್ಯೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆ ದೇಗುಲಗಳ ಅರ್ಚಕ ಭತ್ಯೆಯ ಒಟ್ಟು 77.85 ಕೋಟಿ ರೂ. ಬಿಡುಗಡೆಗೊಳಿಸಿದೆ. ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಸಿ ದರ್ಜೆ ದೇವಸ್ಥಾನಗಳ…

ಸನಾತನ ಧರ್ಮ ಡೆಂಘೀ, ಮಲೇರಿಯಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು :ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: “ಸನಾತನ ಧರ್ಮ ಎಂಬುದು ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ಕೇವಲ ವಿರೋಧ ಮಾಡಿದರೆ ಸಾಲದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು” ಎಂದು ಡಿಎಂಕೆ ಸಚಿವ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ…

ಸೌಜನ್ಯಾಳ ಅತ್ಯಾಚಾರ ಪ್ರಕರಣದಲ್ಲಿ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು- ಪ್ರಕರಣದ ನೆಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ತೇಜೋವಧೆ ಖಂಡನೀಯ – ಹಿಂದೂ ಜನಜಾಗೃತಿ ಸಮಿತಿ

ಇತ್ತೀಚೆಗೆ ಧರ್ಮಸ್ಥಳದ ಮೃತ ಕು. ಸೌಜನ್ಯಾ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ಇವರನ್ನು ನಿರ್ದೋಷಿ ಎಂದು ಘೋಷಿಸಿದೆ. ಈ ಪ್ರಕರಣಕ್ಕೆ 11 ವರ್ಷ ಕಳೆದರೂ ಸಹ ನಿಜವಾದ ಆರೋಪಿಗಳ ಬಂಧನ ಆಗದಿರುವುದು ದುರದೃಷ್ಟಕರ ವಿಷಯವಾಗಿದೆ.…

ನಾಡಗೀತೆಗೆ ಧಾಟಿ ನಿಗದಿ ಅಧಿಕಾರ ನಿಮಗಿದೆಯಾ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ನಿರ್ದಿಷ್ಟ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಹೊಂದಿರುವ ಶಾಸನಾತ್ಮಕ ಅಧಿಕಾರದ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಚ್ ಶುಕ್ರವಾರ ನಿರ್ದೇಶಿಸಿದೆ. ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ…

ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಇಂದು ಹೈಕೋರ್ಟ್ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ದೇವರಾಜೇಗೌಡ ಅವರು ಪ್ರಜ್ವಲ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು.…

ಸಂಪುಟದ ಎಲ್ಲಾ ಸಚಿವರಿಗೆ ಐಷಾರಾಮಿ ಕಾರು ಖರೀದಿಗೆ ಮುಂದಾದ ಸರ್ಕಾರ: 9.90 ಕೋ.ರೂ ವೆಚ್ಚದಲ್ಲಿ 33 ಹೈಬ್ರೀಡ್ ಕಾರುಗಳ ಖರೀದಿಗೆ ನಿರ್ಧಾರ – ಕಾರು ಖರೀದಿ ಮೂಲಕ ಸರ್ಕಾರದಿಂದ ದುಂದುವೆಚ್ಚ!

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೂ ಹೊಸ ಐಷಾರಾಮಿ ಕಾರುಗಳನ್ನು ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ತಲಾ 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಕ್ರಾಸ್ ಹೈಬ್ರೀಡ್ ಕಾರುಗಳ ಖರೀದಿಗೆ ಸರ್ಕಾರ ಆದೇಶಿಸಿದ್ದು,ಸಚಿವರಿಗೆ ಸಧ್ಯವೇ ಕಾರು ಭಾಗ್ಯ…

ಲೈಫ್ ಟೈಮ್ ಟ್ಯಾಕ್ಸ್ ಪಾವತಿಗೆ ಆದೇಶ: ಸರ್ಕಾರದ ವಿರುದ್ಧ ಸಿಡಿದೆದ್ದ ಗೂಡ್ಸ್ ವಾಹನ ಮಾಲೀಕರು

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಹೊರೆ ನೀಗಿಸುವ ಆತುರದಲ್ಲಿ ರಾಜ್ಯ ಸರ್ಕಾರ ಬೆಲೆಏರಿಕೆ ಜತೆಗೆ ಬೇರೆ ಬೇರೆ ಹೊರೆಯನ್ನು ರಾಜ್ಯದ ಜನರಿಗೆ ಹೇರುತ್ತಿದೆ. ವಾಹನಗಳಿಗೆ ಲೈಫ್ ಟೈಂ ಟ್ಯಾಕ್ಸ್ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದ್ದು ಗೂಡ್ಸ್ ವಾಹನ ಮಾಲೀಕರಿಗೆ ಈ ಕಾಯ್ದೆ…

ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ: ಇಂದಿನಿಂದಲೇ ಮನೆ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ

ಮೈಸೂರು: ದೇಶದ ಇತಿಹಾಸದಲ್ಲೆ ಅತಿ ದೊಡ್ಡ ಕಲ್ಯಾಣ ಕಾರ್ಯಕ್ರಮ ಎನ್ನಲಾಗುತ್ತಿರುವ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರುಪಾಯಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ…