Category: ರಾಜ್ಯ

ವೇತನ ಹೆಚ್ಚಳ,ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ನಾಳೆ (ಜೂನ್ 27ರಂದು) ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಶತಾಯಗತಾಯ ಜಾರಿಗೊಳಿಸುವ ಚಿಂತೆಯ ನಡುವೆ ಇದೀಗ ಪ್ರತಿಭಟನೆಯ ತಲೆನೋವು ಶುರುವಾಗಿದೆ. ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವೇತನ ಹೆಚ್ಚಳ, ಸೇವಾ ಭದ್ರತೆ, ವಿಮೆ ಸೌಲಭ್ಯ, ಪಿಂಚಣೆ ಯೋಜನೆ ಜಾರಿ ಸೇರಿದಂತೆ…

ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ 3,647 ಕೋಟಿ ರೂ. ಅನುದಾನ ನೀಡಿದ ಕೇಂದ್ರ ಸರ್ಕಾರ

ನವದೆಹಲಿ (ಜೂ.26): ದೇಶದ 16 ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ವಿಶೇಷ ನೆರವು ನೀಡಿರುವ ಕೇಂದ್ರ ಬಿಜೆಪಿ ಸರ್ಕಾರ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರಕ್ಕೆ ಬರೋಬ್ಬರಿ 3,647 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಕೇಂದ್ರದ 2023-24 ಹಣಕಾಸು ವರ್ಷದ ವಿಶೇಷ ಯೋಜನೆ ಅಡಿಯಲ್ಲಿ…

5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು: ಟ್ವೀಟ್‌ನಲ್ಲಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ ಹೆಚ್‌ಡಿಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು…

ನಾಳೆಯಿಂದಲೇ ‘ಗೃಹಲಕ್ಷ್ಮೀ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಯಜಮಾನಿ ಮಹಿಳೆಗೆ ರೂ.2000 ಪ್ರತಿ ತಿಂಗಳು ನೀಡುವ ಗೃಹಲಕ್ಷ್ಮೀ ಯೋಜನೆ ಘೋಷಿಸಿತ್ತು. ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ಈ ಕುರಿತು ಮಹಿಳಾ…

ಬಸ್‌ ನಿಲ್ಲಿಸದ ಚಾಲಕ: ತಲೆ ಕೆಟ್ಟು ಬಸ್‌ಗೆ ಮಹಿಳೆಯಿಂದ ಕಲ್ಲೇಟು!

ಕೊಪ್ಪಳ : ರಾಜ್ಯದಲ್ಲಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ಗಳು ಫುಲ್ ರಷ್ ಆಗುವ ಹಿನ್ನಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬಳು ಬಸ್‌ಗೆ ಕಲ್ಲು ಹೊಡೆದ ಘಟನೆ ಕೊಪ್ಪಳ…

ಆನ್‌ಲೈನ್ ಮೂಲಕ ಲವ್ ಜಿಹಾದ್ ಆರೋಪ: ಹಿಂದೂ ವಿವಾಹಿತ ಮಹಿಳೆ ಇಸ್ಲಾಂಗೆ ಮತಾಂತರ!

ಜೈಪುರ: ಲವ್ ಜಿಹಾದ್ ಭಾರತದಲ್ಲಿ ಗಟ್ಟಿಯಾಗಿ ಬೇರೂರುತ್ತಿದೆ ಅನ್ನೋ ಆರೋಪ ಹೊಸದಲ್ಲ. ಇದೀಗ ಆನ್ ಲೈನ್ ಲವ್ ಜಿಹಾದ್ ಮೂಲಕ ಮತಾಂತರಗೊಳಿಸುವ ಹೊಸ ವಿಧಾನ ದೇಶದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ರಾಜಸ್ಥಾನದಲ್ಲಿ ಹಿಂದೂ ವಿವಾಹಿತ ಮಹಿಳೆಯನ್ನು ಆನ್‌ಲೈನ್ ಗೇಮಿಂಗ್ ಆ್ಯಪ್…

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ:ಮಾಧ್ಯಮಗಳ ವರದಿಗಳು ಸತ್ಯಕ್ಕೆ ದೂರವಾಗಿದೆ: ನಳಿನ್‌ ಕುಮಾರ್ ಕಟೀಲ್ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ, ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಳಿನ್ ಕುಮಾರ್ ಕಟೀಲು

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲು ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತುರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ರಾಜೀನಾಮೆ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಲ್ಲಿಸುವುದಾಗಿ ನಳಿನ್…

ಮಿಲ್ಲಿಂಗ್ ದರ ಏರಿಕೆಗೆ ಗಿರಣಿಗಳು ಸಜ್ಜು : ಅಕ್ಕಿ ದರ ಶೀಘ್ರ ದುಬಾರಿ ಸಾಧ್ಯತೆ

ಬೆಂಗಳೂರು (ಜೂ.24): ವಾಣಿಜ್ಯ, ಕೈಗಾರಿಕೆಗಳ ವಿದ್ಯುತ್ ದರಗಳನ್ನು ಅವೈಜ್ಞಾನಿಕವಾಗಿ ಏಕಾಏಕಿ ಶೇ.40ಕ್ಕಿಂತ ಅಧಿಕವಾಗಿ ಹೆಚ್ಚಳ ಮಾಡಿರುವುದರಿಂದ ಭತ್ತದ ಮಿಲ್ಲಿಂಗ್ ದರವನ್ನು ಹೆಚ್ಚಿಸಲು ಅಕ್ಕಿ ಗಿರಣಿಗಳ ಮಾಲೀಕರ ಸಂಘ ಮುಂದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಕ್ಕಿಯ ದರವೂ ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಪ್ರಸ್ತುತ…

ಆಗುಂಬೆ ಘಾಟಿಯಲ್ಲಿ ಅಪಘಾತ ತಪ್ಪಿಸಲು ಮುಂಜಾಗ್ರತಾ ಕ್ರಮ

ಹೆಬ್ರಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆಗುಂಬೆ ಘಾಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇತ್ತೀಚೆಗೆ ನಿರಂತರವಾಗಿ ನಡೆದ ಅಫಘಾತಗಳಿಂದ ಜೀವಹಾನಿಯಾಗಿದ್ದು, ಈ ನಿಟ್ಟಿನಲ್ಲಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಕಾರ್ಕಳ…