Category: ರಾಜ್ಯ

ಏಕರೂಪ ನಾಗರಿಕ ಸಂಹಿತೆಗೆ ಶೇ.67ರಷ್ಟು ಮುಸ್ಲಿಂ ಮಹಿಳೆಯರ ಬೆಂಬಲ: ಸರ್ವೇಯಲ್ಲಿ ಬಹಿರಂಗ

ನವದೆಹಲಿ: ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿರುವ ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ಇದೀಗ ಸಮೀಕ್ಷೆಯೊಂದರಲ್ಲಿ ಅಚ್ಚರಿಯ ಹಾಗೂ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದ್ದು,ಈ ಕುರಿತಂತೆ ನ್ಯೂಸ್18 ನೆಟ್ ವರ್ಕ್…

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕೃತ ಚಾಲನೆ ನೀಡಿದರು. ಯೋಜನೆ ಜಾರಿಯಾದ ದಿನದಿಂದ 10 ದಿನಗಳೊಳಗೆ ಪಡಿತರ ಕುಟುಂಬದ ಯಜಮಾನ…

ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್‌ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ಇಂದು ಹಲವೆಡೆ ಪ್ರತಿಭಟನೆ ನಡೆಸಿದರು. ನಮಗೆ ಗೃಹಲಕ್ಷ್ಮೀ ಯೋಜನೆ ಬೇಡ ಗೌರವಧನ ಹೆಚ್ಚಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಸರ್ಕಾರ…

ಸರ್ಕಾರಿ ನೌಕರರ ವರ್ಗಾವಣೆ ಹಾಗೂ ನಿಯೋಜನೆಗೆ ಸರ್ಕಾರದ ಅನುಮೋದನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆ ಹಾಗೂ ನಿಯೋಜನೆ ಇನ್ನುಮುಂದೆ ಸರ್ಕಾರದ ಅನುಮೋದನೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಹಂತದ ಸರ್ಕಾರಿ ನೌಕರರ ವರ್ಗಾವಣೆ, ನಿಯೋಜನೆಗೆ ಸರ್ಕಾರದ ಅನುಮೋದನೆ ಕಡ್ಡಾಯಗೊಳಿಸಿ ಇಲಾಖೆ ಆದೇಶಿಸಿದೆ.…

ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ : ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

ಕಾರ್ಕಳ : ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಮನುಕುಲವೇ ನಾಚಿಕೆಪಡುವಂತ ದುಷ್ಕೃತ್ಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ, ಜೀವನ ಪರ್ಯಂತ…

ನಾಳೆ (ಜು.10) ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು : ಸರ್ಕಾರ ಹೆಚ್ಚಳ ಮಾಡಿರುವ ಗೌರವಧನ ಪಾವತಿಸಬೇಕು, ಹೊಸ ಮೊಬೈಲ್ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿಯು (ನಾಳೆ) ಜು.10 ರಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು…

ಗೃಹಜ್ಯೋತಿ ಅರ್ಜಿ ಸ್ಥಿತಿ ತಿಳಿಯಲು ಪ್ರತ್ಯೇಕ ಲಿಂಕ್ ಬಿಡುಗಡೆ: ಮೊಬೈಲ್‌ನಲ್ಲೇ ಪರಿಶೀಲನೆ ಮಾಡಲು ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರದ ಗೃಹಜ್ಯೋತಿ ಈಗಾಗಲೇ ಸುಮಾರು 1.3 ಕೋಟಿ ಜನರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಅರ್ಜಿ ಸಲ್ಲಿಕೆಯಾದ ನಂತರ ಅದಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆಯೇ ಇಲ್ಲವೇ ಎಂಬುದರ ಬಗ್ಗೆ (ಅರ್ಜಿಯ ಸ್ಥಿತಿ) ತಿಳಿದುಕೊಳ್ಳಲು ಸರ್ಕಾರದಿಂದ ಪ್ರತ್ಯೇಕ ವೆಬ್‌ಸೈಟ್…

ಸಿದ್ದು ಸರ್ಕಾರದ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಲಾಭವೇ ಮುಖ್ಯ ಎನ್ನುವಂತಿದೆ: ಶಾಸಕ ಸುನಿಲ್ ಕುಮಾರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಬಜೆಟ್ ಪುಸ್ತಕದಲ್ಲಿ‌ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಲಾಭದ ಲೆಕ್ಕಾಚಾರ ಅಡಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ಹಿಂದಿನ‌ ಸರ್ಕಾರ ಹಾಗೂ‌‌ ಕೇಂದ್ರ ಸರ್ಕಾರದ ನಿಂದನೆಗೆ ಬಳಸಿದಷ್ಟು ಆದ್ಯತೆಯನ್ನು ಹೊಸ ಯೋಜನೆಗಳ ಘೋಷಣೆಗೆ…

ಸಿದ್ದು ಸರ್ಕಾರದ ಗ್ಯಾರಂಟಿ ಬಜೆಟ್ ಮಂಡನೆ: ದಾಖಲೆಯ 14ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ 14 ನೇ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ…

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ : ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿಯ ಎನ್.ರವಿಕುಮಾರ್ ಕೇಳಿದ ಪ್ರಶ್ನೆಗೆ ಸದರಿ ಕಾಯ್ದೆ ರದ್ದುಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ…