Category: ರಾಜ್ಯ

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕ್ಯಾತೆ ತೆಗೆದ ಚೀನಾ: ಅರುಣಾಚಲದ 11 ಸ್ಥಳಗಳನ್ನು ಮರುನಾಮಕರಣ ಮಾಡಿ ವಿವಾದ!

ನವದೆಹಲಿ: ಚೀನಾ ಭಾರತದ ವಿರುದ್ಧದ ಕಾಲು ಕೆರೆದು ಜಗಳಕ್ಕೆ ಬರುವುದನ್ನು ನಿಲ್ಲಿಸುತ್ತಿಲ್ಲ. ಬೀಜಿಂಗ್ ತನ್ನ ಹಕ್ಕನ್ನು ಪುನಃ ಪ್ರತಿಪಾದಿಸುವ ಪ್ರಯತ್ನದಲ್ಲಿ ಭಾರತದ ಅರುಣಾಚಲ ಪ್ರದೇಶಕ್ಕಾಗಿ ಚೀನೀ, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚೀನಾದ ನಾಗರಿಕ ವ್ಯವಹಾರಗಳ…

ಚುನಾವಣಾ ರಾಜಕೀಯಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಗುಡ್‌ಬೈ

ಉಡುಪಿ: ಜಿಲ್ಲೆಯಲ್ಲಿ ಕುಂದಾಪುರ ವಾಜಪೇಯಿ ಎಂದೇ ಪ್ರಖ್ಯಾತವಾಗಿದ್ದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಇಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು…

ಕಾಂಗ್ರೆಸ್ ನಿಂದ 2ನೇ ಪಟ್ಟಿ ಬಹುತೇಕ ಫೈನಲ್: 100 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ?

ಬೆಂಗಳೂರು: ವಿಧಾನಸಭಾ ಚುನಾವಣೆ ಘಷಣೆಯ ಬೆನ್ನಲ್ಲೆ ಕಾಂಗ್ರೆಸ್ ಉಳಿದ ರಾಜಕೀಯ ಪಕ್ಷಗಳಿಗಿಂತ ಮೊದಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತ್ತು. ಇದೀಗ ಕಾಂಗ್ರೆಸ್ ಮತ್ತೆ 2ನೇ ಪಟ್ಟಿ ಬಿಡುಗಡೆಗೆ ಅಂತಿಮ ಸಿದ್ಧತೆ ಮಾಡಿಕೊಂಡಿದ್ದು ಬಾಕಿ ಉಳಿದ 100 ಕ್ಷೇತ್ರಗಳಿಗೆ…

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಎ.4 ರಂದು ಹೈಕಮಾಂಡ್ ನಿಂದ ಪಟ್ಟಿ ಫೈನಲ್!

ಬೆಂಗಳೂರು: ಮುಂದಿನ ತಿಂಗಳು ಮೇ 10ರಂದು ಕರ್ನಾಟಕ ವಿಧಾಸನಸಭೆ ಚುನಾವಣೆ ಮತದಾನ ನಡೆಯಲಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರ ಕಾವೇರಿದೆ. ಕಾಂಗ್ರೆಸ್ ​ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೇನು ಕೆಲವೆ ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆ ಮಾಡಲಿದೆ.…

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ: ಏ.11ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ, ಇಂದು ನ್ಯಾಯಾಲಯವು ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ…

ಚುನಾವಣಾ ನೀತಿ ಸಂಹಿತೆ: ಆರೋಗ್ಯ ಇಲಾಖೆಯಲ್ಲಿನ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸಲು ಆದೇಶ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ.10ರಂದು ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ಘೋಷಣೆಯಾಗಲಿದೆ. ದಿನಾಂಕ 29-03-2023ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಕಚೇರಿಗಳಲ್ಲಿ ಜನಪ್ರತಿನಿಧಿಗಳ ಭಾವಚಿತ್ರವನ್ನು ತೆರವುಗೊಳಿಸುವಂತೆ ಆಯುಕ್ತರು ಆದೇಶಿಸಿದ್ದಾರೆ. ಈ ಸಂಬಂಧ…

ಇಂದು ಬಿಜೆಪಿ ಕೋರ್ ಕಮಿಟಿ ಸಭೆ : ಏಪ್ರಿಲ್ 6 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,ಈಗಾಗಲೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯು ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಇಂದಿನಿಂದ ಎರಡು ದಿನ ಕೋರ್ ಕಮಿಟಿ ಸಭೆ…

ರಾಜ್ಯದ ವಿವಿಧ 38 ದೇವಾಲಯಗಳಿಗೆ 298 ಲಕ್ಷ ರೂ. ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಗೂ ಮುನ್ನವೇ ಸರ್ಕಾರದಿಂದ ರಾಜ್ಯದ ವಿವಿಧ 38 ದೇವಾಲಯಗಳ ದುರಸ್ತಿ, ಜೀರ್ಣೋದ್ಧಾರ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 298 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ದಿನಾಂಕ 28-03-2023ರಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ…

ಸಿಎಂ ಗೂ ತಟ್ಟಿದ ನೀತಿ ಸಂಹಿತೆ ಬಿಸಿ : ಘಾಟಿ ಸುಬ್ರಮಣ್ಯ ದೇಗುಲಕ್ಕೆ ತೆರಳುತ್ತಿದ್ದಾಗ ಚುನಾವಣಾಧಿಕಾರಿಗಳಿಂದ ಸಿಎಂ ಕಾರು ತಪಾಸಣೆ

ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಚೆಕ್​​ಪೋಸ್ಟ್​ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಶುಕ್ರವಾರ (ಮಾ. 31) ತಪಾಸಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರ ಬಳಿಯ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸುತ್ತಿದ್ದಾಗ ಘಟನೆ ನಡೆದಿದೆ. ಎಸ್​ಪಿ…

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ ರಾಜ್ಯಾದ್ಯಂತ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ವಿತರಣೆ ಸ್ಥಗಿತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ ಈ ಕುರಿತಂತೆ ಆರೋಗ್ಯ ಮತ್ತು…