Category: ರಾಜ್ಯ

ಶಿಕ್ಷಕರು, ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ…

ಪತಿಯ ವಿಚ್ಛೇದನ ನೋಟಿಸ್ ಬಳಿಕವೂ 498ಎ ಕೇಸ್ ದಾಖಲಿಸಬಹುದು: ಹೈಕೋರ್ಟ್ ಏಕಸದಸ್ಯ ಪೀಠ ಆದೇಶ

ಬೆಂಗಳೂರು: ಪತಿಯ ವಿಚ್ಛೇದನ ನೋಟಿಸ್ ಬಳಿಕವೂ 498ಎ ಕೇಸ್ ದಾಖಲಿಸಬಹುದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ‌ ಆದೇಶ ಹೊರಡಿಸಲಾಗಿದೆ. ಪತಿ, ಕುಟುಂಬದವರ ಕಿರುಕುಳದಿಂದ ರಕ್ಷಿಸಲು 498ಎ‌ ಕಾನೂನು ತರಲಾಗಿದೆ. ಅದೇ ರೀತಿಯಾಗಿ ಪತ್ನಿಯನ್ನು ರಕ್ಷಿಸಲು 498ಎ‌ ಕಾನೂನು ತರಲಾಗಿದೆ ಎಂದು ಹೈಕೋರ್ಟ್…

ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸುತ್ತೇವೆ: ಸೇವಾ ಸಿಂಧು ಆ್ಯಪ್ ನಿರ್ದೇಶಕ ಸ್ಪಷ್ಟನೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ಆದರೆ ಇತ್ತ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಫಲಾನುಭವಿಗಳು ದೂರಿದ್ದರು. ಸದ್ಯ ಈ ಕುರಿತಾಗಿ ಸೇವಾ ಸಿಂಧು ಆ್ಯಪ್ ​…

ಸರ್ಕಾರಿ ವಕೀಲರ ನೇಮಕಾತಿ ಅಕ್ರಮ: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಕೂಡಲೇ ಈ ಬಗ್ಗೆ ಇಲಾಖಾ ಹಂತದ ತನಿಖೆಯನ್ನು ಕೈಗೊಂಡು 10 ದಿನಗಳಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ…

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಮಂಗಳೂರು: ‘ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ’ ಮಾಡುವುದಾಗಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಹೊಸ ಘಟಕ ಆರಂಭಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ…

ದ್ವೇಷದ ರಾಜಕಾರಣ ಬಿಟ್ಟು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಗಮನಹರಿಸಿ: ಟ್ವಿಟರ್ ನಲ್ಲಿ ಸರ್ಕಾರಕ್ಕೆ ಸುನಿಲ್ ಕುಮಾರ್ ಚಾಟಿ

ಕಾರ್ಕಳ: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮಾಡಿ ಸರ್ಕಾರಕ್ಕೆ ಚಾಟಿ…

ಬಾಡಿಗೆದಾರರು ಸೇರಿ ಎಲ್ಲರಿಗೂ ಉಚಿತ ವಿದ್ಯುತ್ :ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್…

ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪವೇ ಒಡಿಶಾ ರೈಲು ಅಪಘಾತಕ್ಕೆ ಕಾರಣ: ರೈಲ್ವೆ ಅಧಿಕಾರಿಗಳು

ನವದೆಹಲಿ: ಬಾಲಸೋರ್ ರೈಲು ಅಪಘಾತದ ಬಗ್ಗೆ ಸಿಬಿಐ ಸೋಮವಾರ ತನ್ನ ತನಿಖೆಯನ್ನು ಪ್ರಾರಂಭಿಸುತ್ತಿದ್ದಂತೆ, ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪದಿಂದಾಗಿ ಅಪಘಾತ ಸಂಭವಿಸಿದೆ ಎಂದು ಉನ್ನತ ರೈಲ್ವೆ ಅಧಿಕಾರಿಗಳು ಹೇಳಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಸಿಬಿಐ ತನಿಖೆ…

ಬಾಡಿಗೆ ಮನೆಯವರಿಗೆ ಉಚಿತ ವಿದ್ಯುತ್ ಇಲ್ಲ: ಗೃಹಜ್ಯೋತಿ ಯೋಜನೆಯ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಲಾಭದಿಂದ ಬಾಡಿಗೆ ಮನೆಯಲ್ಲಿ ವಾಸವಿರುವವರು ವಂಚಿತರಾಗುವ ಸಾಧ್ಯತೆಯಿದೆ. ಎಲ್ಲರಿಗೂ 200 ಯೂನಿಟ್‌ವರೆಗೂ ಉಚಿತವಾಗಿ ವಿದ್ಯುತ್‌ ನೀಡುವ ಈ ಯೋಜನೆಯ ಮಾರ್ಗಸೂಚಿಯನ್ನು ಇಂಧನ ಇಲಾಖೆ ಸೋಮವಾರ ಬಿಡುಗಡೆ ಮಾಡಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ…

ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ,ಅಸಡ್ಡೆ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು ಅವರ…