Category: ರಾಜ್ಯ

ಇಂದು ಕಾಂಗ್ರೆಸ್ ಪಕ್ಷದಿಂದ 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ –ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ

ನವದೆಹಲಿ: ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯ ಸುದೀರ್ಘ ಚರ್ಚೆಯ ಬಳಿಕ, ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದ್ದು, ಇಂದು 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಘೋಷಣೆ ಮಾಡಿದ್ದಾರೆ. ಈ ಕುರಿತು ದೆಹಲಿಯಲ್ಲಿ ಇಂದು…

ಒಳಮೀಸಲಾತಿ ವಿರೋಧಿಸಿ ಬಂಜಾರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ

ಹಾವೇರಿ : ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒದಗಿಸಲಾಗಿರುವ ಒಳಮೀಸಲಾತಿಯನ್ನು ವಿರೋಧಿಸಿದ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಂಬೇಡ್ಕತ್‌ ಪ್ರತಿಮೆ ಬಳಿ ಬಂದು ತಮ್ಮ ಕಾವಿ ವಸ್ತ್ರದ ಶಲ್ಯದಿಂದಲೇ ನೇಣು ಬಿಗಿದುಕೊಳ್ಳಲು ಮುಂದಾಗಿದ್ದಾರೆ.…

ಸಿಎಂ ಅಭ್ಯರ್ಥಿ ಹೇಳಿಕೆ ಸತ್ಯಕ್ಕೆ ದೂರವಾದುದು : ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂಬ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಎನ್ ಡಿ ಟಿವಿ ಪ್ರಕಟಿಸಿದ ಸುದ್ದಿ ಲೇಖನ ಕರ್ನಾಟಕದ…

ದೆಹಲಿಯಲ್ಲಿ ಕೈ ಶಾಸಕನ ದರ್ಪ: ಮಾಧ್ಯಮದವರ ಮೇಲೆ ಹಲ್ಲೆಗೆ ಮುಂದಾದ ಶಾಸಕ ಭೈರತಿ ಸುರೇಶ್

ನವದೆಹಲಿ : ದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಮಾಧ್ಯಮದವರು ಪ್ರಶ್ನೆ ಮಾಡಿದ ಸಂದರ್ಭದಲ್ಲಿ ಮಾಧ್ಯಮದವರ ಮೇಲೆ ಕೈ ಶಾಸಕ ಭೈರತಿ ಸುರೇಶ್‌ ದರ್ಪ ತೋರಿದ್ದು, ಪತ್ರಕರ್ತರನ್ನೇ ತಳ್ಳುವ ಮೂಲಕ ದುರಹಂಕಾರ ಮೆರೆದಿದ್ದಾರೆ ದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಮಾಧ್ಯಮದವರು…

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕ್ಯಾತೆ ತೆಗೆದ ಚೀನಾ: ಅರುಣಾಚಲದ 11 ಸ್ಥಳಗಳನ್ನು ಮರುನಾಮಕರಣ ಮಾಡಿ ವಿವಾದ!

ನವದೆಹಲಿ: ಚೀನಾ ಭಾರತದ ವಿರುದ್ಧದ ಕಾಲು ಕೆರೆದು ಜಗಳಕ್ಕೆ ಬರುವುದನ್ನು ನಿಲ್ಲಿಸುತ್ತಿಲ್ಲ. ಬೀಜಿಂಗ್ ತನ್ನ ಹಕ್ಕನ್ನು ಪುನಃ ಪ್ರತಿಪಾದಿಸುವ ಪ್ರಯತ್ನದಲ್ಲಿ ಭಾರತದ ಅರುಣಾಚಲ ಪ್ರದೇಶಕ್ಕಾಗಿ ಚೀನೀ, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚೀನಾದ ನಾಗರಿಕ ವ್ಯವಹಾರಗಳ…

ಚುನಾವಣಾ ರಾಜಕೀಯಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಗುಡ್‌ಬೈ

ಉಡುಪಿ: ಜಿಲ್ಲೆಯಲ್ಲಿ ಕುಂದಾಪುರ ವಾಜಪೇಯಿ ಎಂದೇ ಪ್ರಖ್ಯಾತವಾಗಿದ್ದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಇಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು…

ಕಾಂಗ್ರೆಸ್ ನಿಂದ 2ನೇ ಪಟ್ಟಿ ಬಹುತೇಕ ಫೈನಲ್: 100 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ?

ಬೆಂಗಳೂರು: ವಿಧಾನಸಭಾ ಚುನಾವಣೆ ಘಷಣೆಯ ಬೆನ್ನಲ್ಲೆ ಕಾಂಗ್ರೆಸ್ ಉಳಿದ ರಾಜಕೀಯ ಪಕ್ಷಗಳಿಗಿಂತ ಮೊದಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತ್ತು. ಇದೀಗ ಕಾಂಗ್ರೆಸ್ ಮತ್ತೆ 2ನೇ ಪಟ್ಟಿ ಬಿಡುಗಡೆಗೆ ಅಂತಿಮ ಸಿದ್ಧತೆ ಮಾಡಿಕೊಂಡಿದ್ದು ಬಾಕಿ ಉಳಿದ 100 ಕ್ಷೇತ್ರಗಳಿಗೆ…

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಎ.4 ರಂದು ಹೈಕಮಾಂಡ್ ನಿಂದ ಪಟ್ಟಿ ಫೈನಲ್!

ಬೆಂಗಳೂರು: ಮುಂದಿನ ತಿಂಗಳು ಮೇ 10ರಂದು ಕರ್ನಾಟಕ ವಿಧಾಸನಸಭೆ ಚುನಾವಣೆ ಮತದಾನ ನಡೆಯಲಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರ ಕಾವೇರಿದೆ. ಕಾಂಗ್ರೆಸ್ ​ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೇನು ಕೆಲವೆ ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆ ಮಾಡಲಿದೆ.…

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ: ಏ.11ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ, ಇಂದು ನ್ಯಾಯಾಲಯವು ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ…

ಚುನಾವಣಾ ನೀತಿ ಸಂಹಿತೆ: ಆರೋಗ್ಯ ಇಲಾಖೆಯಲ್ಲಿನ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸಲು ಆದೇಶ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ.10ರಂದು ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ಘೋಷಣೆಯಾಗಲಿದೆ. ದಿನಾಂಕ 29-03-2023ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಕಚೇರಿಗಳಲ್ಲಿ ಜನಪ್ರತಿನಿಧಿಗಳ ಭಾವಚಿತ್ರವನ್ನು ತೆರವುಗೊಳಿಸುವಂತೆ ಆಯುಕ್ತರು ಆದೇಶಿಸಿದ್ದಾರೆ. ಈ ಸಂಬಂಧ…