Category: ರಾಜ್ಯ

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುತಾಲಿಕ್ ಸ್ಪರ್ಧೆ ಖಚಿತ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಮನವಿ : ಬಿಜೆಪಿ ಅಭ್ಯರ್ಥಿ ಹಾಕಿದರೆ 224  ಕ್ಷೇತ್ರಗಳಲ್ಲಿ ಶ್ರಿರಾಮ ಸೇನೆ ಅಭ್ಯರ್ಥಿಗಳನ್ನು ಹಾಕುವುದಾಗಿ ಎಚ್ಚರಿಕೆ

ಧಾರವಾಡ : ಮುಂದಿನ ವಿಧಾನ ಸಭಾ ಚುನಾವಣೆಗೆ ಈ ಬಾರಿ ಹಿಂದೂ ಹುಲಿ ಪ್ರಮೋದ್ ಮುತಾಲಿಕ್ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಪ್ರಮೋದ್ ಮುತಾಲಿಕ್ ಅವರು ಅವರ ಹುಟ್ಟುಹಬ್ಬದ ಜ.23 ರಂದು ಈಗಾಗಲೇ ಕ್ಷೇತ್ರವನ್ನು ಘೋಷಣೆ ಮಾಡಿದ್ದಾರೆ.…

ಉಚಿತ ಉಡುಗೊರೆ/ಆಮಿಷಗಳನ್ನು ಒಡ್ಡುತ್ತಿರುವವರ ವಿರುದ್ದ ಕಠಿಣ ಕಾನೂನು ಕ್ರಮ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ/ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿAದ, ಈ ಕುರಿತಂತೆ ಸಂಬAಧಪಟ್ಟ ಇಲಾಖೆಯ ಕಾನೂನು/ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯದ ವಿವಿಧ…

ಹೈಕೋರ್ಟ್ ತರಾಟೆ ಬೆನ್ನಲ್ಲೇ ಸರ್ಕಾರ ಅಲರ್ಟ್ : 2 ವಾರದ ಒಳಗೆ ‘ಸಮವಸ್ತ್ರ’ ವಿತರಣೆಗೆ ನಿರ್ಧಾರ

ಬೆಂಗಳೂರು : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಉತ್ಸವ ನಡೆಸುತ್ತೀರಿ, ನಿಮಗೆ ಸಮಯಕ್ಕೆ ಸರಿಯಾಗಿ ಮಕ್ಕಳಿಗೆ ಸಮವಸ್ತ್ರ ನೀಡಲು ಆಗುವುದಿಲ್ಲವೇ? ನಾಚಿಕೆಯಾಗಬೇಕು ನಿಮಗೆ ಎಂದು ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ ಸಮವಸ್ತ್ರವನ್ನು ಸಮರ್ಪಕವಾಗಿ ವಿತರಣೆ ಮಾಡಲು ಸಿಎಂ ಬೊಮ್ಮಾಯಿ…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ತಮಿಳುನಾಡು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ಭಾರೀ ಮಳೆ, ಚಳಿ, ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಬ್ರವರಿ 1 ಮತ್ತು 2 ರಂದು…

ಕಾರ್ಕಳ: ಐಎಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ವಿಜಯನಗರ ಜಿ.ಪಂ ಸಿಇಒ ಆಗಿ ವರ್ಗಾವಣೆ

ಕಾರ್ಕಳ : ಐ ಎ ಎಸ್ ಅಧಿಕಾರಿ ಎಳ್ಳಾರೆ ಸದಾಶಿವ ಪ್ರಭು ಅವರನ್ನು ವಿಜಯನಗರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20…

ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ್ದ ದಂಡ ವಸೂಲಿ ಮಾಡಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರಾಧಿ ಮೃತಪಟ್ಟರೂ ಆತನಿಗೆ ಕೋರ್ಟ್ ವಿಧಿಸಿದ್ದ ದಂಡವನ್ನು ಆತನ ಆಸ್ತಿಯಿಂದ ಅಥವಾ ಆತನ ಆಸ್ತಿಯ ಉತ್ತರಾಧಿಕಾರಿಯಿಂದ ವಸೂಲಿ ಮಾಡಬಹುದೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹಾಸನದ ವ್ಯಕ್ತಿಯೊಬ್ಬ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ಸೆಷನ್ ಕೋರ್ಟ್…

ಅಂಗನವಾಡಿ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ : ನಾಳೆ ಸಿಎಂ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಕಳೆದ 8-9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಗಲು-ರಾತ್ರಿ, ಬಿಸಿಲು, ಚಳಿ ಎನ್ನದೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಬೇಡಿಕೆಗಳನ್ನುö ಈಡೇರಿಸದಿದ್ದಲ್ಲಿ ನಾಳೆ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ…

ಫೆ.4, 5ರಂದು ವಿಜಯಪುರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ : ಶಿವಾನಂದ ತಗಡೂರು

ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಿಂದ ಫೆ.4 ಮತ್ತು 5 ರಂದು ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ…

ಕರ್ನಾಟಕದ 2 ನೇ ಅಧಿಕೃತ ಭಾಷೆಯಾಗಿ ‘ತುಳು’ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ : ಸಚಿವ ಸುನೀಲ್ ಕುಮಾರ್

ಬೆಂಗಳೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ತುಳು ಭಾಷೆಯನ್ನು ದೇಶದ ಸಂವಿಧಾನದ 8 ನೇ ಪರಿಚ್ಚೇಧಕ್ಕೆ ಸೇರಿಸಬೇಕು ಎಂದು ಬೇಡಿಕೆಯಿದ್ದು, ಹಲವು…

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬAಧಿಸಿದAತೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಇದೀಗ ಇದಕ್ಕೆ ಕರ್ನಾಟಕ ಹೈಕೋರ್ಟ್ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ…