Category: ರಾಜ್ಯ

ಅಧಿವೇಶನ ಮುಗಿದ ನಂತರ ಅನರ್ಹ ಪಡಿತರ ಚೀಟಿ ರದ್ದತಿಗೆ ಕ್ರಮ: ಸಚಿವ ಕೆ.ಎಚ್ ಮುನಿಯಪ್ಪ

ವಿಧಾನ ಪರಿಷತ್‌ (ಆ.19): ಅಧಿವೇಶನ ಮುಗಿದ ನಂತರ ಬಿಪಿಎಲ್‌ ಪಡಿತರ ಚೀಟಿ ಪಡೆದಿರುವ ಅನರ್ಹರನ್ನು ಪತ್ತೆ ಮಾಡಿ ಎಪಿಎಲ್‌ ಕಾರ್ಡ್‌ ನೀಡಲು ಕ್ರಮ ಕೈಗೊಳ್ಳಲಾಗುವುದು, ಅನರ್ಹ ಪಡಿತರ ಚೀಟಿ ರದ್ದತಿ ನಂತರ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ಆಹಾರ ಮತ್ತು…

ಧರ್ಮಸ್ಥಳ ಬುರುಡೆ ಪ್ರಕರಣ:FSL ವರದಿ ಬರುವ ತನಕ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ

ಬೆಂಗಳೂರು,ಆ.18: ಧರ್ಮಸ್ಥಳದ ಬುರುಡೆ ಪ್ರಕರಣದ ಕುರಿತು ರಾಜಕೀಯ ತಿಕ್ಕಾಟ ಜೋರಾಗಿದ್ದು, ಈ ನಡುವೆ ಗೃಹ ಸಚಿವ ಪರಮೇಶ್ವರ್, FSL ವರದಿ ಬರುವ ತನಕ ಉತ್ಖನನ ಸ್ಥಗಿತಗೊಳಿಸಲಾಗಿದೆ ಎಂದು ಸದನದಲ್ಲಿ ಉತ್ತರಿಸಿದ್ದಾರೆ. ಪ್ರತಿಪಕ್ಷ ಬಿಜೆಪಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿ, ಅಪರಿಚಿತ ಸಾಕ್ಷಿದಾರ ವ್ಯಕ್ತಿಗೆ…

ಸಿಎಂ ಸಿದ್ಧರಾಮಯ್ಯ ವಿರುದ್ಧ ಕೊಲೆ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ

ಬೆಂಗಳೂರು, ಆ,18 : ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಕಳೆದ 2023ರಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಡಿರುವ ಕೊಲೆ ಆರೋಪದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್…

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಗೆ ಸಂಸತ್ತಿನಲ್ಲಿ ಗೌರವ: ಗಗನಯಾತ್ರಿ ಕುರಿತು ವಿಶೇಷ ಚರ್ಚೆ

ನವದೆಹಲಿ, ಆ. 18: ಬಾಹ್ಯಾಕಾಶ ಯಾನ ಮುಗಿಸಿ ಯಶಸ್ವಿಯಾಗಿ ಭೂಮಿ ಮರಳಿದ ಭಾರತದ ಹೆಮ್ಮೆಯ ಪುತ್ರ ಕ್ಯಾ. ಶುಭಾಂಶು ಶುಕ್ಲಾ ಅವರು ಭಾರತಕ್ಕೆ ಆಗಮಿಸಿದ್ದು, ಅವರನ್ನು ಗೌರವಿಸಲು ಸಂಸತ್ತು ಸಜ್ಜಾಗಿದೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 14 ದಿನಗಳ ಕಾಲ ಅಧ್ಯಯನ ನಡೆಸಿ…

ಸಾರ್ವಜನಿಕ ನದಿ, ಕೆರೆಗಳು ಸೇರಿದಂತೆ ಜಲಮೂಲದಲ್ಲಿ POP ಗಣೇಶ ಮೂರ್ತಿಗಳ ವಿಸರ್ಜನೆ ನಿಷೇಧ: ಅರಣ್ಯ ಸಚಿವ ಈಶ್ವರ ಖಂಡ್ರೆ

ಬೀದರ್,ಆ.17: ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಮಣ್ಣಿನ ಗಣಪತಿಯಿಂದ ಆಚರಿಸುವಂತೆ ಸರ್ಕಾರ ಮನವಿ ಮಾಡಿದೆ. ಯಾರೂ ಕೂಡ ಪಿಓಪಿ ಗಣೇಶ ಪೂಜಿಸದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಜನರಲ್ಲಿ ಮನವಿ ಮಾಡಿದ್ದು, ಪಿಓಪಿ ಗಣೇಶನನ್ನು ಪೂಜಿಸುವವರು ಸಾರ್ವಜನಿಕ ನದಿ,ಕೆರೆಗಳು ಹಾಗೂ ಜಲಮೂಲಗಳಲ್ಲಿ…

ಧರ್ಮಸ್ಥಳ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ :ಧರ್ಮಸ್ಥಳದಲ್ಲಿ 1987 ರಿಂದ 2025 ವರೆಗೂ 279 ಅನಾಥ ಶವಗಳನ್ನು ಹೂಳಲಾಗಿದೆ!: ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಧರ್ಮಸ್ಥಳದ ಆಸುಪಾಸಿನಲ್ಲಿ 1987 ರಿಂದ 2025 ರ ಅವಧಿಯಲ್ಲಿ 279 ಅನಾಥ ಶವಗಳನ್ನು ಹೂಳಲಾಗಿದೆ ಎಂಬ ಶಾಕಿಂಗ್ ಮಾಹಿತಿ ಆರ್‌ಟಿಐ ಮೂಲಕ ಬಹಿರಂಗವಾಗಿದೆ. ಇವುಗಳಲ್ಲಿ ಹೆಚ್ಚಿನವು ಆತ್ಮಹತ್ಯೆ ಪ್ರಕರಣಗಳಿಗೆ ಸಂಬAಧಿಸಿವೆ ಎಂದು…

ಮಂಗಳೂರು ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ್ಹಾ ವಿರುದ್ಧದ 4 ಪ್ರಕರಣಗಳು ಸಿಐಡಿಗೆ ಹಸ್ತಾಂತರ

ಮಂಗಳೂರು: ಬಹುಕೋಟಿ ರುಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಮಂಗಳೂರಿನ ಬಜಾಲ್ ಬೊಲ್ಲಗುಡ್ಡೆ ನಿವಾಸಿ ರೋಶನ್ ಸಲ್ಡಾನ್ಹಾ (43) ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳು ಸಿಐಡಿಗೆ ಹಸ್ತಾಂತರಗೊಂಡಿದೆ. ಈ ಪ್ರಕರಣಗಳ ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮಾಡಲಿದ್ದಾರೆ. ಬಿಹಾರ ಉದ್ಯಮಿಯೊಬ್ಬರಿಗೆ ರೋಶನ್…

ವಾಹನ ಮಾಲೀಕರು ಮೊಬೈಲ್ ನಂಬರ್‌ಗಳನ್ನು ಆಧಾರ್ ಮೂಲಕ ಲಿಂಕ್ ಮಾಡುವುದು ಕಡ್ಡಾಯ: ರಸ್ತೆ ಸಾರಿಗೆ ಸಚಿವಾಲಯ ಆದೇಶ

ನವದೆಹಲಿ: ದೇಶದ ಎಲ್ಲಾ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ಮಾಲೀಕರು ತಮ್ಮ ಮೊಬೈಲ್ ನಂಬರ್‌ಗಳನ್ನು ಆಧಾರ್ ಮೂಲಕ ಲಿಂಕ್ ಮಾಡಬೇಕು ಎಂದು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ. ಸುಗಮ ಸಂವಹನ ಮತ್ತು ಸಾರಿಗೆ ಸೇವೆಗಳಿಗೆ ಸುಲಭ ಪ್ರವೇಶಕ್ಕಾಗಿ ಆಧಾರ್ ಮೂಲಕ ಈ…

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಸೆಪ್ಟೆಂಬರ್.14 ರಂದು ಅಷ್ಟಮಿ ಆಚರಣೆ

ಉಡುಪಿ: ದೇಶದೆಲ್ಲೆಡೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ.ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮಾತ್ರ ಜನ್ಮಾಷ್ಟಮಿ ಆಚರಣೆ ನಡೆಯುತ್ತಿಲ್ಲ. ಅದಕ್ಕಾಗಿ ಭಕ್ತರು ಇನ್ನು ಒಂದು ತಿಂಗಳು ಕಾಯಬೇಕಾಗಿದೆ. ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ-…

ಸ್ವಾತಂತ್ರ್ಯ ದಿನದಂದೇ ಕರಾಳ ಛಾಯೆ: ಬೆಂಗಳೂರಿನಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ: 12‌ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು, ಆ,15: ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಸಮೀಪದ ಚಿನ್ನಯ್ಯನಪಾಳ್ಯ ಎಂಬಲ್ಲಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು 12ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಈ ಸ್ಫೋಟದಲ್ಲಿ ಮುಬಾರಕ್(8) ಎಂಬ ಬಾಲಕ ಮೃತಪಟ್ಟಿದ್ದಾನೆ. ಈ ಸ್ಫೋಟದಲ್ಲಿ ಕಸ್ತೂರಮ್ಮ(35), ಸರಸಮ್ಮ(50),…