Category: ರಾಜ್ಯ

ರೈತರಿಗೆ ಗೊಬ್ಬರ ಕೊರತೆಯ ಬರೆ: ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ವರುಣನ ಕೃಪೆಗೆ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಈ ಬಾರಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿರುವ ರೈತ ಗೊಬ್ಬರ ಕೊರತೆಯಿಂದ ಕಂಗಾಲಾಗಿದ್ದಾನೆ. ಈ ನಡುವೆ ಕೇಂದ್ರ ಸರ್ಕಾರ ಗೊಬ್ಬರ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪ. ಕೊಟ್ಟ…

ಮಂಗಳೂರು- ಶೃಂಗೇರಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಬಂದ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ತುಂಗಾ, ಭದ್ರೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,…

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 108 ಆಂಬುಲೆನ್ಸ್ ನೌಕರರ ಬಿಗಿಪಟ್ಟು: ಆಗಸ್ಟ್ 1 ರಿಂದ ಪ್ರತಿಭಟನೆ ಎಚ್ಚರಿಕೆ

ಬೆಂಗಳೂರು, ಜುಲೈ 26: ಬಡ ರೋಗಿಗಳಿಗೆ ಆಶಾದಾಯಕವಾಗಿರುವ‌ 108 ಆರೋಗ್ಯ ಕವಚ ತುರ್ತುಚಿಕಿತ್ಸಾ ವಾಹನದ ಸಿಬ್ಬಂದಿಗಳು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆ.,1 ರಿಂದ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. 108 ಆರೋಗ್ಯ ಕವಚ ಸೇವೆಯನ್ನು ಇಷ್ಟು ದಿನಗಳ ಕಾಲ ಜಿವಿಕೆ ಎಂಬ ಖಾಸಗಿ…

ಧರ್ಮಸ್ಥಳ ಶವಗಳ ಹೂತಿಟ್ಟಿದ್ದಾರೆ ಎನ್ನಲಾದ ಕೇಸ್ : ಇಂದಿನಿಂದ ಎಸ್ಐಟಿ ತನಿಖೆ ಆರಂಭ

ಮಂಗಳೂರು,ಜು,26:ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎನ್ನುವ ಅನಾಮಿಕ ವ್ಯಕ್ತಿಯ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರ ಎಸ್ಐಟಿ ತನಿಖೆ ಆದೇಶಿಸಿದ ಬೆನ್ನಲ್ಲೇ ಇಂದಿನಿಂದಲೇ ತನಿಖೆ ಆರಂಭವಾಗಲಿದೆ. ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆಗೆ ಚಾಲನೆ…

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು.…

ಎಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಮಾರ್ಕ್ ಶೇ.33 ಅಂಕಕ್ಕೆ ಇಳಿಕೆ: ರಾಜ್ಯ ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು : ಈ ಸಲದ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ SSLC ಹಾಗೂ PUC ಪರೀಕ್ಷಾ ಪದ್ಧತಿಯಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸಾಗಲು ಪರೀಕ್ಷೆ ಮತ್ತು…

ಅರಣ್ಯದಲ್ಲಿ ದನಕರು, ಮೇಕೆ, ಕುರಿಗಳನ್ನು ಮೇಯಿಸುವುದು ನಿಷೇಧ: ಕ್ರಮ ವಹಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ ಅರಣ್ಯ ಪ್ರದೇಶದೊಳಗೆ ದನಕರು , ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬAಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ…

ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟಿಸ್: ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬೆಂಗಳೂರು: ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನಿಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್…

ಕೊನೆಗೂ ಯಶಸ್ವಿಯಾದ ಸಂಧಾನ ಕಾರ್ಯ: ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್

ನವದೆಹಲಿ: ಭಾರತ ಮತ್ತು ಯೆಮೆನ್ ಮುಖಂಡರ ಸತತ ಪ್ರಯತ್ನದ ಫಲವಾಗಿ ಕೊನೆಗೂ ಸಂಧಾನ ಯಶಸ್ವಿಗೊಂಡಿದ್ದು ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯನ್ನು ಯೆಮೆಮ್ ರದ್ದುಗೊಳಿಸಿದೆ ಎಂದು ಧರ್ಮಬೋಧಕ ಜಾಗತಿಕ ಶಾಂತಿ ಪ್ರವರ್ತಕ ಡಾ. ಕೆ ಎ ಪೌಲ್ ವಿಡಿಯೋ…

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ

ನವದೆಹಲಿ: ಜಗದೀಪ್ ಧನಕರ್ ಅವರು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬಳಿಕ ಮುಂದಿನ ಉಪರಾಷ್ಟ್ರಪತಿ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ರಾಜ್ಯಸಭೆಯಲ್ಲಿ ಎನ್​ಡಿಎ ಬಹುಮತ ಹೊಂದಿದೆ. ಜಗದೀಪ್ ಧನಕರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ…