Category: ರಾಜ್ಯ

ಇನ್ನುಮುಂದೆ ಆಸ್ತಿಗಳ ಡಿಜಿಟಲ್ ದಾಖಲೆಗಳು ನಾಡ ಕಚೇರಿಯಲ್ಲೂ ಸಿಗಲಿದೆ: ಕಂದಾಯ ಸಚಿವ ಕೃಷ್ಣಭೈರೇ ಗೌಡ ಮಾಹಿತಿ

ಬೆಂಗಳೂರು ಜು,21: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ನುಮುಂದೆ ನಾಡ ಕಚೇರಿಯಲ್ಲೂ ಆಸ್ತಿ ಡಿಜಿಟಲ್ ದಾಖಲೆಗಳು ಸಿಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಭೂ ಸುರಕ್ಷಾ ಯೋಜನೆ ಪ್ರಗತಿ ಪರಿಶೀಲನೆ…

ಮುಡಾ ಅಕ್ರಮ ನಿವೇಶನ ಪ್ರಕರಣ: ಸಿಎಂ ಪತ್ನಿ ಪಾರ್ವತಿ, ಭೈರತಿ ಸುರೇಶ್ ವಿರುದ್ಧ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕಳೆದ ವರ್ಷ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಕುರಿತು ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯವು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.…

2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಸಾಕ್ಷ್ಯಾಧಾರಗಳ ಕೊರತೆ, ಎಲ್ಲಾ 12 ಆರೋಪಿಗಳ ಖುಲಾಸೆ

ಮುಂಬೈ: ಮುಂಬೈನಲ್ಲಿ 2006ರಲ್ಲಿ ಸಂಭವಿಸಿದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಾಂಬೆ ಹೈಕೋರ್ಟ್​ ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಅನಿಲ್ ಕಿಲೋರ್…

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅನುಮಾನಾಸ್ಪದ ಸಾವುಗಳ ಕುರಿತ ತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು:ಅಪರಿಚಿತ ಸಾಕ್ಷಿದಾರನೊಬ್ಬ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಹಾಗೂ ತಾನು ಸಾಕ್ಷ್ಯ ನುಡಿಯುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ ಬಂದಿದ್ದು,ಇದೇ ವಿಚಾರದಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ನೂರಾರು ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ರಾಜ್ಯ ಸರ್ಕಾರ…

ಮಂಗಳೂರು ಬಹುಕೋಟಿ ವಂಚನೆ ಪ್ರಕರಣ: ತನಿಖೆಯಲ್ಲಿ ಬಯಲಾಗುತ್ತಿದೆ ವಂಚಕನ ನೌಟಂಕಿ ಆಟ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ರೋಷನ್ ಸಲ್ಡಾನಾ ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಹಲವು ಆತಂಕಕಾರಿ ಸಂಗತಿಗಳು ಬಯಲಾಗುತ್ತಿವೆ. ದಿನಕ್ಕೊಂದು ಆತನ ನೌಟಂಕಿ ಆಟಗಳು ಹೊರ ಬರುತ್ತಿದ್ದು, ರೋಷನ್ ಸಲ್ಡಾನಾ ಹೆಣೆದಿರುವ ವಂಚನೆಯ ಮಾಯಾಜಾಲ ಕಂಡು ಮಂಗಳೂರು…

ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ; ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರು

ಮಂಡ್ಯ: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್​​ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ​ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ…

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು: ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದ್ದು, ಇತ್ತ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ…

ಅತ್ಯಾಚಾರ ಪ್ರಕರಣ: ತೀರ್ಪು ಕಾಯ್ದಿರಿಸಿದ ಕೋರ್ಟ್; ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 30ಕ್ಕೆ ಕಾಯ್ದಿರಿಸಿದೆ. ಪ್ರಾಸಿಕ್ಯೂಷನ್ ಪರ SPP ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ,…

ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು: ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿನಿಧಿಸುವ ಎಲ್ಲಾ ಕ್ಷೇತ್ರಗಳಿಗೂ ತಲಾ 50 ಕೋಟಿ ಅನುದಾನ ಬಿಡುಗಡೆ ಕುರಿತಂತೆ ಸಿದ್ದರಾಮಯ್ಯ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ಧಿ, ಸೇತುವೆ…

ಸಾಲ ಕೊಡುವುದಾಗಿ ಕೋಟ್ಯಂತರ ರೂ. ಪಡೆದು ವಂಚನೆ: ಮಂಗಳೂರಿನ ಖತರ್ನಾಕ್ ವಂಚಕ ಪೊಲೀಸ್ ಬಲೆಗೆ

ಮಂಗಳೂರು: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ರೋಹನ್ ಸಲ್ಡಾನಾ (45) ಬಂಧಿತ ಆರೋಪಿ.ರೋಹನ್ ಗುರುವಾರ ರಾತ್ರಿ ತನ್ನ ಐಷರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ ಮಾಡುತ್ತಿರುವಾಗಲೇ…