Category: ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ…

ಡಿ. 31ರಿಂದ ಸಾರಿಗೆ ಸಂಘಟನೆಗಳ ಮುಷ್ಕರ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಶಕ್ತಿ ಯೋಜನೆಯ ಬಾಕಿ ಹಣ ಬಿಡುಗಡೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರ…

ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸಿಎಂ ಗೆ ಮನವಿ

ಉಡುಪಿ: ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರುಗಳ ಕ್ಷೇತ್ರದ ಜನರು ಅಭಿವೃದ್ಧಿ ವಿಚಾರವಾಗಿ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆಯಿರಿಸಿದ್ದು, ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದು, ಜನರ ಬೇಡಿಕೆಗಳಿಗೆ ಪೂರಕವಾಗಿ ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ತಮ್ಮ ಕ್ಷೇತ್ರಗಳಿಗೆ…

ಅಡಿಕೆ ಕ್ಯಾನ್ಸರ್ ಕಾರಕವಲ್ಲ ಪ್ರತಿಬಂಧಕ!: ಪ್ರತಿಷ್ಠಿತ ವಿವಿ ಅಧ್ಯಯನದ ವರದಿ

ಮಂಗಳೂರು: ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಬದಲಿಗೆ ಕ್ಯಾನ್ಸರ್ ಪ್ರತಿಬಂಧಕ ಎಂದು ಪ್ರತಿಷ್ಠಿತ ವಿವಿ ಅಧ್ಯಯನ ವರದಿ ಹೇಳಿದೆ. ಇದರಿಂದಾಗಿ ಕರಾವಳಿ, ಮಲೆನಾಡು ಭಾಗದ ಅಡಿಕೆ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಇಂಟರ್ ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್…

ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆ

ನವದೆಹಲಿ: ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ…

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ದಿಢೀರ್ ನಾಪತ್ತೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನಿದ್ದೆಗೆಡಿಸಿದ್ದ ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ…

ಬೆಳಗಾವಿ ಚಳಿಗಾಲದ ಅಧಿವೇಶನ: ವಿಫಲ ಬೋರ್‌ವೆಲ್ ಮುಚ್ಚದಿದ್ದರೆ ಜೈಲು ಮತ್ತು ದಂಡ – ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಸೋಮವಾರ ನಡೆದ ಅಧಿವೇಶನದಲ್ಲಿ ಕೊಳವೆಬಾವಿ ಮುಚ್ಚದಿದ್ದರೆ ಜೈಲು ಮತ್ತು ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಎಂಟು ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ಅವಘಡಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು…

ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಅಪರಾಧವೇ?: ಕರ್ನಾಟಕ ಪೊಲೀಸರ ಅಭಿಪ್ರಾಯ ಕೋರಿದ ಸುಪ್ರೀಂ

ನವದೆಹಲಿ: ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್…

150 ಕೋಟಿ ಆಮಿಷ ಆರೋಪ ಪ್ರಕರಣ: ಸಿಬಿಐಗೆ ವಹಿಸುವಂತೆ ವಿಜಯೇಂದ್ರ ಆಗ್ರಹ

ಬೆಳಗಾವಿ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ತಮ್ಮ ವಿರುದ್ಧ ಮಾಡಿರುವ ಆರೋಪದ…

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ಮೇಲೆ ಎಫ್‌ಐಆರ್ ದಾಖಲು

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬAಧಿಸಿAತೆ ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎನ್‌ಐಎ ನ್ಯಾಯಾಲಯದ ಸೂಚನೆ ಮೇರೆಗೆ ಶಿವಮೊಗ್ಗದ ತುಂಗಾನಗರ ಠಾಣೆಯಲ್ಲಿ ಅನಾಮಿಕ ವ್ಯಕ್ತಿಯ ಮೇಲೆ ಸಾಕ್ಷಿಯೊಬ್ಬರು ದೂರು ನೀಡಿದ ನಂತರ ಎಫ್‌ಐಆರ್ ದಾಖಲಾಗಿದೆ.…