Category: ರಾಜ್ಯ

ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ಕೊಚ್ಚಿ ಮಾದರಿಯ ವಾಟರ್‌ ಮೆಟ್ರೋ: ನೇತ್ರಾವತಿ, ಗುರುಪುರ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಜಲಮಾರ್ಗ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು…

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನಿಕ್ ಚಂಡಮಾರುತ ಎಫೆಕ್ಟ್ : ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ!

ನವದೆಹಲಿ : ಈಗಷ್ಟೇ ಹಿಂಗಾರು ಮಳೆಯು ಕಡಿಮೆಯಾಗಿ ಚಳಿ ತನ್ನ ಪ್ರಭಾವವನ್ನು ತೋರಿಸಲಾರಂಭಿಸಿದೆ.ಈ ಬಾರಿ ಹವಾಮಾನ ವೈಪರೀತ್ಯಗಳಿಂದ ಭಾರೀ ಮಳೆಗೆ ಕಂಗಾಲಾಗಿದ್ದ ರೈತರು ಕೊಂಚ ನಿಟ್ಟುಸಿರು ಬಿಟ್ಟು ಕೃಷಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆಯು ಮತ್ತೊಮ್ಮೆ ಚಂಡಮಾರುತವು ಸಕ್ರಿಯಗೊಳ್ಳುವ…

ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್​

ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ…

ವಿಧಾನಸಭೆ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ

ಹುಬ್ಬಳ್ಳಿ : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲಾ 3 ಕ್ಷೇತ್ರಗಳಲ್ಲಿ ಕೂಡ ಕಾಂಗ್ರೆಸ್ ಪಕ್ಷ ಗೆಲ್ಲಿದೆ ಎಂದು ಡಿಸಿಎಂ ಡಿಕೆ ಶಿವಕುಮರ್ ವಿಶ್ವಾಸ ವ್ಯಕ್ತಪಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಸಂಡೂರು…

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಬೆಂಗಳೂರು,: ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಅಬಕಾರಿ ಇಲಾಖೆಯು ಮದ್ಯದಂಗಡಿಗಳಿAದ “ಮಂಥ್ಲಿ ಮನಿ” ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್…

ಎಡನೀರು ಶ್ರೀಗಳ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ : ದುಷ್ಕೃತ್ಯ ಎಸಗಿದವರನ್ನು ಬಂಧಿಸಿ, ಶ್ರೀಗಳಿಗೆ ಸೂಕ್ತ ಭದ್ರತೆ ನೀಡಲು ಶಾಸಕ ಸುನಿಲ್ ಕುಮಾರ್ ಆಗ್ರಹ

ಬೆಂಗಳೂರು: ಎಡನೀರು ಸಂಸ್ಥಾನದ ಸಚ್ಚಿದಾನಂದ ಭಾರತೀ ಶ್ರೀಗಳ ಕಾರಿನ ಮೇಲೆ ಕೇರಳದಲ್ಲಿ ಮತಾಂಧ ಶಕ್ತಿಗಳು ದಾಳಿ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ…

ಪದೇಪದೇ ಅನಗತ್ಯ ಹೇಳಿಕೆ ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಆರೋಪ: ಸಚಿವ ಜಮೀರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ದೂರು!

ಬೆಂಗಳೂರು : ವಕ್ಫ್ ವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಇದರಿಂದ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ‌. ಈ ನಡುವೆ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಕ್ಫ್ ವಿಚಾರದಲ್ಲಿ ಬೇಕಾಬಿಟ್ಟಿ…

ವಕ್ಫ್ ಬೋರ್ಡ್ ನೋಟೀಸ್ ಕಾಂಗ್ರೆಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ:ಮಾಜಿ ಸಚಿವ ಸುನೀಲ್ ಕುಮಾರ್ ಗಂಭೀರ ಆರೋಪ

ಬೆಂಗಳೂರು : ವಕ್ಫ್ ಮಂಡಳಿಯು ಆಸ್ತಿ ಒತ್ತುವರಿ ಮಾಡುವ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಮುಂದಾಗಿದ್ದು,ಇದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್…

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಹೆಚ್ ಡಿ ಕೆ ಎ1,ನಿಖಿಲ್​ ಕುಮಾರಸ್ವಾಮಿ​ ಎ2, ಸುರೇಶ್ ಬಾಬು ಎ3

ಬೆಂಗಳೂರು: ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಚಂದ್ರೇಶಖರ್​ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಹೆಚ್​ಡಿ ಕುಮಾರಸ್ವಾಮಿ ಅವರು ಎಡಿಜಿಪಿ ಚಂದ್ರಶೇಖರ್​ ವಿರುದ್ಧ ಗಂಭೀರ ಆರೋಪ ಮಾಡಿದ್ದರು.…

ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ನವದೆಹಲಿ: ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ನ ಒಂಬತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ…