Category: ಉಡುಪಿ

ಪರಶುರಾಮ ಮೂರ್ತಿ ನಕಲಿ ಎಂದು ಸಾಬೀತಾದರೆ ಸುನಿಲ್ ಕುಮಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ?: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಸವಾಲು

ಕಾರ್ಕಳ: ಬೈಲೂರಿನ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಪರಶುರಾಮ ಮೂರ್ತಿಯ ವಾಸ್ತವ್ಯ ವಿಚಾರ ಮರೆಮಾಚುವ ಪ್ರಯತ್ನವಾಗಿ ಶಾಸಕ ಸುನಿಲ್ ಕುಮಾರ್ ವಿಷಯಾಂತರ ಮಾಡುವುದರೊಂದಿಗೆ ನೂರಾರು ಬಾರಿ ಸುಳ್ಳನ್ನೇ ಸತ್ಯವನ್ನಾಗಿರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸುಳ್ಳನ್ನೇ ಅವರ ಮನೆ ದೇವರನ್ನಾಗಿ ಮಾಡಿಕೊಂಡು ಜನರನ್ನು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ…

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ -ಮುನಿಯಾಲು ಕೆಪಿಎಸ್ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಪ್ರಥಮ

ಹೆಬ್ರಿ : ಇಂದು ಬ್ರಹ್ಮಾವರ ವಲಯದ ಬೆಳ್ಳಾರ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕೆಪಿಎಸ್ ಮುನಿಯಾಲಿನ ಪ್ರೌಢಶಾಲಾ ವಿಭಾಗದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಮಂಡ್ಯದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ…

ಜಿಲ್ಲಾಧಿಕಾರಿ ಮನವಿ ಹಿನ್ನಲೆ : ಪರಶುರಾಮ ಪ್ರತಿಮೆಯ ಗುಣಮಟ್ಟ ಹಾಗೂ ನೈಜತೆ ಪರೀಕ್ಷೆಯ ಕುರಿತು ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ವಾಪಸ್

ಕಾರ್ಕಳ : ಕಳೆದ ಎಂಟು ದಿನಗಳಿಂದ ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿನ ಪರಶುರಾಮ ಪ್ರತಿಮೆಯ ನೈಜತೆ ಹಾಗೂ ಗುಣಮಟ್ಟದ ಪರೀಕ್ಷೆಗಾಗಿ ಒತ್ತಾಯಿಸಿ ಕಳೆದ ಶನಿವಾರದಿಂದ ಸಮಾನ ಮನಸ್ಕ ವೇದಿಕೆಯ ಹೋರಾಟಗಾರರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ…

ಇಂದಿರಾಗಾಂಧಿ ಕುಟುಂಬ ಪ್ರತಿಮೆ ಸ್ಥಾಪಿಸಿದ್ದಲ್ಲಿ ವಿರೋಧಿಸುತ್ತಿರಲಿಲ್ಲ: ಪರಶುರಾಮ ಥೀಮ್ ಪಾರ್ಕ್ ವಿರೋಧಿ ಹೋರಾಟ ರಾಜಕೀಯಪ್ರೇರಿತ: ಶಾಸಕ ಸುನಿಲ್ ಕುಮಾರ್

ಕಾರ್ಕಳ:ಕಾರ್ಕಳವನ್ನು ಪ್ರವಾಸೋದ್ಯಮದ ಕೇಂದ್ರಬಿಂದುವನ್ನಾಗಿಸಬೇಕೆಂಬ ಉದ್ದೇಶದಿಂದ ಪರಶುರಾಮ‌ ಥೀಮ್ ಪಾರ್ಕ್ ಸ್ಥಾಪನೆಯ ಯೋಜನೆ ಅನುಷ್ಟಾನಗೊಳಿಸಲಾಗಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆಯನ್ನೇ ಕಾಂಗ್ರೆಸ್ ವಿರೋಧಿಸುತ್ತಿದ್ದು, ಇಂದಿರಾ ಗಾಂಧಿ ಅಥವಾ ಅವರ ಕುಟುಂಬದ ಪ್ರತಿಮೆ ಸ್ಥಾಪಿಸಿದ್ದಲ್ಲಿ ಈ‌ ಯೋಜನೆಯನ್ನು ವಿರೋಧಿಸುತ್ತಿರಲಿಲ್ಲ ಎಂದು ಮಾಜಿ ಸಚಿವ ಹಾಗೂ…

ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ: ಕಾರ್ಕಳ ಕೆ.ಎಂ.ಇ.ಎಸ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬಜಗೋಳಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕೆ . ಎಂ . ಇ. ಎಸ್ . ಶಿಕ್ಷಣ ಸಂಸ್ಥೆಯ ಬಾಲಕರ ತಂಡವು ಪ್ರಥಮ ಸ್ಥಾನ…

ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಖಾಯಂ ಸ್ತ್ರೀರೋಗ ತಜ್ಞರನ್ನು ನೇಮಿಸಿ : ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಶಾಸಕ ವಿ ಸುನಿಲ್ ಕುಮಾರ್ ಪತ್ರ

ಕಾರ್ಕಳ: ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಂಪ್ರತಿ 50 ರಿಂದ 60 ಗರ್ಭಿಣಿ ಸ್ತ್ರೀಯರು ತಪಾಸಣೆಗೆ ಒಳಗಾಗುತ್ತಿದ್ದು, ತಿಂಗಳಿಗೆ ಅಂದಾಜು 80 ರಿಂದ 100 ಹೆರಿಗೆ ಪ್ರಕರಣಗಳು ದಾಖಲಾಗುತ್ತಿವೆ. ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಅನುಪಸ್ಥಿತಿ ಉಂಟಾದಲ್ಲಿ ತಾಲೂಕಿನ…

ಸೀಮಾ ಕಾಮತ್ ಕಾರ್ಕಳ ಅವರಿಗೆ “ಚಾಣಕ್ಯ ಅತ್ಯುತ್ತಮ ಶಿಕ್ಷಕ- 2023” ಪ್ರಶಸ್ತಿ ಪ್ರದಾನ- ಸಾಹಿತಿ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಕೊಡಮಾಡುವ ಪ್ರಶಸ್ತಿ

ಹೆಬ್ರಿ : ಶಿಕ್ಷಕರು ಸಮಾಜದ ಆಸ್ತಿ. ಸಮಾಜದ ಭದ್ರ ಅಡಿಪಾಯ ಅಂದರೆ ಅದು ಶೈಕ್ಷಣಿಕ ಕ್ಷೇತ್ರ.ವಿದ್ಯಾರ್ಥಿ ಬದುಕಿನ ಬದಲಾವಣೆಯ ಹರಿಕಾರ ಶಿಕ್ಷಕರು.ಕೇವಲ ನಾಲ್ಕು ಗೋಡೆಗಳ ಒಳಗೆ ಸೀಮಿತವಾಗಿರದೆ ಪಠ್ಯಕ್ರಮ ಹೊರತುಪಡಿಸಿ ವಿಭಿನ್ನವಾಗಿ ಯೋಚಿಸುವ ಭವಿಷ್ಯದ ಪ್ರಜೆಗಳನ್ನು ತಯಾರು ಮಾಡುವಲ್ಲಿ ಶಿಕ್ಷಕರ ಪಾತ್ರ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ…

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್? ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಕ್ಷೇತ್ರ ಪುನರ್ವಿಂಗಡಣೆ ಕರಡು ಪ್ರಸ್ತಾವನೆ ಅಂತಿಮ

ಕಾರ್ಕಳ: ಸಾಕಷ್ಟು ಸಮಯದಿಂದ ಮುಂದೂಡಿಕೆಯಾಗಿದ್ದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದೀಗ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡಣೆ ಹಾಗೂ ಕ್ಷೇತ್ರಗಳನ್ನು ಅಂತಿಮಗೊಳಿಸಿದೆ.…

ನಾಳೆ (ಸೆ.8 ಶುಕ್ರವಾರ) ಅಜೆಕಾರಿನಲ್ಲಿ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಅಜೆಕಾರು : ಕಾರ್ಕಳ ತಾಲೂಕಿನ ಅಜೆಕಾರು ಮುಖ್ಯರಸ್ತೆಯಲ್ಲಿರುವ ಶಾಲೋಮ್ ಪ್ರಗತಿ ವಾಣಿಜ್ಯ ಸಂಕೀರ್ಣದಲ್ಲಿ ನಾಳೆ (ಸೆ.8ರಂದು) ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭಗೊಳ್ಳಲಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಅಂಬಾ ಮೋಟಾರ್ ಡ್ರೈವಿಂಗ್ ಸ್ಕೂಲ್ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.…