Category: ಉಡುಪಿ

ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನ.30 ಕೊನೆಯ ದಿನ 

ಕಾರ್ಕಳ,ನ. 8: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನವೆಂಬರ್ 30 ಕೊನೆಯ ದಿನವಾಗಿದೆ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ…

KUPMA ಒಕ್ಕೂಟದ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಕಾರ್ಕಳ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ…

ಮಣಿಪಾಲ ಜ್ಞಾನಸುಧಾ : ಎನ್.ಸಿ.ಸಿ. ನೇವಿ(ನೌಕಾದಳ) ಉದ್ಘಾಟನೆ: ಜೀವನದ ಆಕಾಂಕ್ಷೆಗಳ ಜೊತೆಗೆ ದೇಶ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು- ಕ್ಯಾಪ್ಟನ್ ಗಣೇಶ್ ಕಾರ್ಣಿಕ್- ಕಲ್ಪವೃಕ್ಷದಂತೆ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ : ಕಮಾಂಡರ್ ಅಶ್ವಿನ್ ಎಂ. ರಾವ್

ಕಾರ್ಕಳ: ನಮ್ಮ ಜೀವನದಲ್ಲಿರುವ ಎಲ್ಲಾ ರೀತಿಯ ಆಸೆ ಆಕಾಂಕ್ಷೆ, ಕನಸುಗಳನ್ನು ಸಿಗುವ ಅವಕಾಶಗಳಿಂದ ಈಡೇರಿಸಿಕೊಳ್ಳುವುದರ ಜೊತೆಗೆ, ದೇಶ ಸೇವೆಯ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಮನಸ್ಸಿನ ನಿಗ್ರಹ ನಮ್ಮ ಹತೋಟಿಗೆ ಬರುವುದು ಶಿಕ್ಷಣದಿಂದ ಮಾತ್ರ. ಅದರೊಂದಿಗೆ ಎನ್.ಸಿ.ಸಿ ಯಂತಹ ಅತ್ಯುತ್ತಮ ಸಂಘಟನೆಯನ್ನು…

ರಾಜಧನ ಇಳಿಕೆಯಾದರೂ ಕೆಂಪುಕಲ್ಲು ಬಲು ದುಬಾರಿ: ಮನೆಕಟ್ಟುವ ಬಡವರ ಕನಸಿಗೆ ಕೊಳ್ಳಿಯಿಟ್ಟ ಕಲ್ಲುಕೋರೆ ಹಾಗೂ ಲಾರಿ ಮಾಲೀಕರು: ವೈಜ್ಞಾನಿಕ ದರ ನಿಗದಿಗೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು, ನ.07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ರಾಜ್ಯ ಸರಕಾರ ರಾಜಧನ ಇಳಿಕೆ ಮಾಡಿರುವುದನ್ನು ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುವವರು, ಉದ್ಯಮಿಗಳು, ಸಿವಿಲ್ ಗುತ್ತಿಗೆದಾರರ ಸಭೆ ನಡೆಸಿ ಸೂಕ್ತ ಕ್ರಮ ವಹಿಸ ಬೇಕೆಂದು…

ಅಜೆಕಾರು: ಎಲೆಕ್ಟ್ರಾನಿಕ್ಸ್ ಅಂಗಡಿ ಮಾಲೀಕನ ಚಿನ್ನ ಎಗರಿಸಿದ್ದ ನಕಲಿ ಸಾಧು ಬಂಧನ

ಕಾರ್ಕಳ: ತಾಲೂಕಿನ ಅಜೆಕಾರಿನಲ್ಲಿ ಕಳೆದ9 ತಿಂಗಳ ಹಿಂದೆ ನಕಲಿ ಸಾಧುವಿನ ವೇಷದಲ್ಲಿ ಬಂದು ಎಲೆಕ್ಟ್ರಾನಿಕ್ಸ್ ಅಂಗಡಿ ಮಾಲೀಕರೊಬ್ಬರ ಚಿನ್ನಾಭರಣವನ್ನು ಎಗರಿಸಿದ್ದ ಅಸಲಿ ಕಳ್ಳನನ್ನು ಪೊಲೀಸರು ಸೆರೆ ಹಿಡಿದು, ಆತನಿಂದ ಕಳವುಗೈದ ಉಂಗುರವನ್ನು ವಶಪಡಿಸಿಕೊಂಡಿದ್ದಾರೆ. ಮಧ್ಯಪ್ರದೇಶದ ಕಾರ್ಗೋನ್ ಜಿಲ್ಲೆಯ ಕರಣ್ ನಾಥ್ ಬಂಧಿತ…

ನಾಳೆ(ನ.05ರಂದು) ಕಾರ್ಕಳದಲ್ಲಿ ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶುಭಾರಂಭ

ಕಾರ್ಕಳ, ನ.04: ದಿ.ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಇದರ ಶಾಖೆಯ ನೂತನ ಕಚೇರಿಯು ನಾಳೆ (ನ.05ರಂದು)ಕಾರ್ಕಳದ ಸ್ಟೇಟ್ ಬ್ಯಾಂಕ್ ಬಳಿಯ ಶ್ರೀಕೃಷ್ಣ ಟವರ‍್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಸಂಜೆ 4 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ನೂತನ…

ಗುಡ್ಡಗಾಡು ಓಟದ ಸ್ಪರ್ಧೆ :ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯೆ

ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್…

ಬೆಳೆ ಸಾಲಗಳಿಗೆ ಮಾರ್ಜಿನ್ ಹಣ ಕಡಿತ : ಮಾರ್ಜಿನ್ ಹಣ ಏರಿಸಲು ಸಹಕಾರ ಭಾರತಿ ಅಗ್ರಹ

ಕಾರ್ಕಳ, ನ.04: ರೈತರಿಗೆ ನೀಡುವ ಬೆಳೆ ಸಾಲ ಮದ್ಯಮಾವಧಿ ಸಾಲಗಳ ವ್ಯವಹಾರದಲ್ಲಿ ಬಡ್ಡಿಯ ಮಾರ್ಜಿನ್ ಹಣ 3% ರಷ್ಟನ್ನು ರಾಜ್ಯ ಸರ್ಕಾರ 2015 – 16 ರ ವರೆಗೆ ನೀಡುತ್ತಾ ಬಂದಿದ್ದು, ಇದರಿಂದ ಸಹಕಾರ ಸಂಘಗಳಿಗೆ ಬಹಳ ಅನುಕೂಲವಾಗಿತ್ತು. ತದನಂತರದ ವರ್ಷಗಳಲ್ಲಿ…

ಮಣಿಪಾಲ ಜ್ಞಾನಸುಧಾ: ಅಥ್ಲೆಟಿಕ್ಸ್ ನಲ್ಲಿ ಚಿರಾಗ್ ರಾಜ್ಯಮಟ್ಟಕ್ಕೆ ಆಯ್ಕೆ – ವಾಟರ್ ಪೋಲೊ ಸ್ಪರ್ಧೆಯಲ್ಲಿ ಪಾರ್ಥ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 100ಮೀ.…

ಹೊಂಡಮಯ ರಸ್ತೆ, ನೆಟ್ ವರ್ಕ್ ಸಮಸ್ಯೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತಾಯಿಸಿ ಹೆಬ್ರಿ ತಾಲೂಕು ಹೋರಾಟ ಸಮಿತಿಯಿಂದ ತಹಸೀಲ್ದಾರ್ ಮನವಿ

ಹೆಬ್ರಿ,ನ.03:ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ‌ ರಸ್ತೆ, ವಿದ್ಯುತ್ ಸಮಸ್ಯೆ, ನಿವೇಶನ ಸಮಸ್ಯೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ ತಕ್ಷಣವೇ ಸ್ಪಂದಿಸಬೇಕೆಂದು ಆಗ್ರಹಿಸಿ ಪ್ರಗತಿಪರ ನಾಗರಿಕರ ವೇದಿಕೆ ಹಾಗೂ ಹೆಬ್ರಿ ತಾಲೂಕು ಹೋರಾಟ ಸಮಿತಿ ವತಿಯಿಂದ ಹೆಬ್ರಿ ತಹಸೀಲ್ದಾರ್ ಅವರಿಗೆ ನ.03 ರಂದು…