Category: ಉಡುಪಿ

ಕಾರ್ಕಳದ ಮುಂಡ್ಲಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿದ್ದ ಪೊಲೀಸರಿಗೆ ತೀವ್ರ ಮುಖಭಂಗ: ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆಯಾಜ್ಞೆ

ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜಾರ್ಕಳ ಮುಂಡ್ಲಿಯಲ್ಲಿ ಕಳೆದ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನ‌ ಪ್ರದರ್ಶನಕ್ಕೆ ತಡೆಯೊಡ್ಡಿ ಆಯೋಜಕರು ಹಾಗೂ ಇತರರ ವಿರುದ್ಧ ಅಜೆಕಾರು ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ…

ನಾಳೆ (ಜು.24ರಂದು) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಪಿಯು,ITI ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜು. 23: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು,ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸ್ವರೂಪ.…

ಕುಡಿದ ಮತ್ತಿನಲ್ಲಿ ಯುವಕನ ಕೊಲೆ ಯತ್ನ: ತಲೆಮರೆಸಿಕೊಂಡ ಆರೋಪಿ ತಮಿಳುನಾಡಿನಲ್ಲಿ ಬಂಧನ

ಉಡುಪಿ: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಜರಕಟ್ಟೆ ಗ್ಲೋರಿಯಾ ಬಾರ್’ನಲ್ಲಿ ಕಳೆದ ಜೂ.15 ರಂದು ಕುಡಿದ‌ ಮತ್ತಿನಲ್ಲಿ ಯುವಕನ ಕೊಲೆಗೆ ಯತ್ನಿಸಿದ ತಮಿಳುನಾಡು ಮೂಲದ ಅಳಗೇಶ ನನ್ನು ಪಡುಬಿದ್ರಿ ಪೊಲೀಸರು ತಮಿಳುನಾಡು ರಾಜ್ಯದ ಕೃಷ್ಣಗಿರಿ ಎಂಬಲ್ಲಿ ಬಂಧಿಸಿದ್ದಾರೆ. ಸಾಂತೂರಿನ ಸತೀಶ್ ಆಚಾರ್ಯ…

ವಿಪರೀತ ಮಳೆಯಿಂದ ಅಡಿಕೆ ಬೆಳೆಗೆ ಹೆಚ್ಚುತ್ತಿದೆ ಕೊಳೆ ರೋಗ ಬಾಧೆ: ರೈತರಿಗೆ ಬೆಳೆವಿಮೆಯೇ ಶೀರಕ್ಷೆ

ವರದಿ: ಕರಾವಳಿ ನ್ಯೂಸ್ ಡೆಸ್ಕ್ ಇಂದಿನ ದಿನಗಳಲ್ಲಿ ಪ್ರತಿಕೂಲ ಹವಾಮಾನದ ಪರಿಸ್ಥಿತಿಯಲ್ಲಿ ರೈತರು ಹಾಗೂ ಕೃಷಿಕರು ತಾವು ಬೆಳೆದ ಬೆಳೆ ಉಳಿಸಿಕೊಳ್ಳಲು ಹರಸಾಹಸಪಡುವಂತಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳ ಪ್ರಮುಖ ತೋಟಗಾರಿಕಾ ಬೆಳೆಯಾದ ಅಡಿಕೆ ಬೆಳೆಯನ್ನು ಕೊಳೆ ರೋಗದಿಂದ ಕಾಪಾಡುವುದೇ ರೈತರಿಗೆ ಸವಾಲಾಗಿ…

ಉಡುಪಿ ಜ್ಞಾನಸುಧಾದಲ್ಲಿ ಆಂಗ್ಲಭಾಷಾ ಉಪನ್ಯಾಸಕರ ಕಾರ್ಯಾಗಾರ

ಉಡುಪಿ: ವಿದ್ಯಾರ್ಥಿಗಳಲ್ಲಿ ಹೊಂದಾಣಿಕೆ, ಪ್ರಾಮಾಣಿಕತೆ, ನೈತಿಕತೆಗಳನ್ನು ಬೆಳೆಸುವ ಉಪನ್ಯಾಸಕರಾಗಿರಿ. ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರಿ ಎಂದು ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯಉಪನಿರ್ದೇಶಕರಾದ ಮಾರುತಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಪದವಿಪೂರ್ವ ಕಾಲೇಜು…

ಹೆಬ್ರಿ: ದಲಿತರ ಭೂಮಿ–ವಸತಿ ಹಕ್ಕಿಗಾಗಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಹೆಬ್ರಿ.ಜು.18: ದಲಿತರ ಭೂಮಿ ಮತ್ತು ವಸತಿ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಹೆಬ್ರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಹಕ್ಕೊತ್ತಾಯದ ಪ್ರತಿಭಟನೆ ನಡೆಯಿತು. ಹೆಬ್ರಿ ಶಾಖೆಯ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ,…

ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬ ಕುರಿತು ದೂರು: ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ

ಕಾರ್ಕಳ:ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ಕಾರ್ಕಳ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಕಳ ಪುರಸಭೆ ಕಚೇರಿಗೆ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಅವರ ನೇತೃತ್ವದಲ್ಲಿ ಶುಕ್ರವಾರ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.ಈ ವೇಳೆ ಕಳೆದ 10…

ತುಳುನಾಡಿನ ಕಾರಣಿಕ ದೈವ ಕಲ್ಕುಡನಿಗೆ ಅವಮಾನಿಸಿದ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಬಹಿರಂಗ ಕ್ಷಮೆ ಯಾಚಿಸಲಿ: ಬೋಳ ಸುಧಾಕರ ಆಚಾರ್ಯ

ಕಾರ್ಕಳ, ಜು.18: ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ದೈವತ್ವಕ್ಕೆ ಏರಿದ ವಿಶ್ವಕರ್ಮ ಸಮುದಾಯದ ಕಾರಣಿಕಪುರುಷ ಕಲ್ಕುಡ ದೈವಕ್ಕೆ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಅವಮಾನ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಬೋಳ ಸುಧಾಕರ ‌ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಬೈಲೂರಿನ…

ಶಾಸಕ ಸುನಿಲ್ ಕುಮಾರ್ ತಂದೆ ಎಂ.ಕೆ ವಾಸುದೇವ ನಿಧನ : ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿ ಹಲವು ಗಣ್ಯರಿಂದ ಅಂತಿಮ ದರ್ಶನ

ಕಾರ್ಕಳ: ಆರೆಸ್ಸೆಸ್ ಹಿರಿಯ ಮುಖಂಡ, ಶಿಕ್ಷಕರು ಹಾಗೂ ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ತಂದೆ ಎಂ.ಕೆ ವಾಸುದೇವ ಅವರು ಇಂದು ಮುಂಜಾನೆ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬಿಜೆಪಿ ಹಿರಿಯ ಮುಖಂಡ ಹಾಗೂ ವಿಪಕ್ಷ ನಾಯಕ…

ಕಾರ್ಕಳ ಪಂಚಾಯತ್ ರಾಜ್ ಒಕ್ಕೂಟದ ಖಂಡನಾ ಸಭೆ: ಜಟಿಲಗೊಂಡ 9/11ಎ ನಿವೇಶನ ಸಮಸ್ಯೆ: ಬಡವರ ಮನೆ ನಿರ್ಮಾಣದ ಕನಸಿಗೆ ಕೊಳ್ಳಿಯಿಟ್ಟ ಸರ್ಕಾರದ ವಿರುದ್ದ ಆಕ್ರೋಶ

ಕಾರ್ಕಳ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸಲು ಸ್ವಂತ ಮನೆ ಕಟ್ಟುವವರ ಕನಸಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿಯಿಟ್ಟಿದೆ. ಪಂಚಾಯತ್ ಮಟ್ಟದಲ್ಲಿ ಆಗಬೇಕಿದ್ದ 9/11ಎ ನಿವೇಶನದ ಖಾತಾ ಪಡೆಯಲು ದೂರದ ಕಾಪು ಪ್ರಾಧಿಕಾರಕ್ಕೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದ್ದು,ಸರ್ಕಾರ ಈ ಕ್ಲಿಷ್ಟ ನಿಯಮಾವಳಿ ಸರಳೀಕರಣ…