Category: ಉಡುಪಿ

ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಖಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ ಕುರಿತಂತೆ ಸ್ಥಳೀಯರಾದ ದೀಪಕ್,ಸುಮಿತ್ ಸೇರಿ 15 ಮಂದಿಯ ವಿರುದ್ಧ…

ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗಳಿಗೆ 2.80 ಕೋಟಿ ಅನುದಾನ ಮಂಜೂರು : ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೇತುವೆ ಸಹಿತ ನೂತನ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸರಕಾರದಿಂದ 2.80 ಕೋಟಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ‌. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ…

ಬಂಟ್ವಾಳ:ಪಿಕಪ್ ಚಾಲಕನ ಬರ್ಬರ ಹತ್ಯೆ: ಕೃತ್ಯದ ಬಳಿಕ ಬೈಕಿನಲ್ಲಿ ಪರಾರಿಯಾದ ಹಂತಕರು

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ…

ಭಾರೀ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಹಾನಿ: ಕೃಷಿ ಜಮೀನಿಗೆ ಪ್ರವಾಹದ ನೀರು ನುಗ್ಗಿ ಹಾನಿ

ಕಾರ್ಕಳ: ಮುಂಗಾರುಪೂರ್ವ ಮಳೆ ಭಾರೀ ಆವಾಂತರ ಸೃಷ್ಟಿಸುತ್ತಿದ್ದು, ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, ಪ್ರವಾಹದ ನೀರು ಕೃಷಿ ಜಮೀನಿಗೆ ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಕಾರ್ಕಳ ತಾಲೂಕಿನ ನಿಂಜೂರು ಗ್ರಾಮದ ಪಾತಾವು ನಿವಾಸಿ ಸುಶೀಲಾ ಎಂಬಬವರ ವಾಸದ ಮನೆ ಭಾರೀ…

ಕಾರ್ಕಳ ಪೇಟೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲಿ ಜಲಪ್ರವಾಹ: ಸಾರ್ವಜನಿಕರು ಹಾಗೂ ವಾಹನ ಸವಾರರ ಪರದಾಟ

ಕಾರ್ಕಳ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಾರ್ಕಳ ಪೇಟೆಯಲ್ಲಿ ಚರಂಡಿಗಳಲ್ಲಿ ಹರಿಯಬೇಕಿದ್ದ ನೀರು ರಸ್ತೆಯ ಮೂಲ ಹರಿಯುತ್ತಿದ್ದು, ಪುರಸಭೆಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕಾರ್ಕಳದ ಮೂರು ಮಾರ್ಗ ಜಂಕ್ಷನ್ ಬಳಿಯ ಮಂಗಳೂರು ರಸ್ತೆಯಲ್ಲಿ ನೀರಿನ ಪ್ರವಾಹ ರಸ್ತೆಗೆ…

ಕಾರ್ಕಳ: ಮೇ.28 ರಂದು ಜ್ಞಾನಸುಧಾದಲ್ಲಿ ಮೌಲ್ಯಸುಧಾ ಹಾಗೂ ಭಜನಾಸುಧಾ- ಜ್ಞಾನಯೋಗಿ ಶ್ರೀಸಿದ್ಧೇಶ್ವರ ಮಹಾಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮ

ಕಾರ್ಕಳ: ಶ್ರೀ ಮಹಾಗಣಪತಿ ದೇವಸ್ಥಾನ ಜ್ಞಾನಸುಧಾ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮೇ.28 ರಂದು ಗಣಿತನಗರ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿರುವ ಮೌಲ್ಯಸುಧಾ ಕಾರ್ಯಕ್ರಮದಲ್ಲಿ ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ಪ.ಪೂಜ್ಯ…

ಜೆ.ಇ.ಇ. ಮೈನ್(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್ ಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ರಾಷ್ಟ್ರಕ್ಕೆ ಕೆಟಗರಿ ವಿಭಾಗದಲ್ಲಿ 6ನೇ ರ‍್ಯಾಂಕ್

ಕಾರ್ಕಳ: .ಇ.ಇ. ಮೈನ್(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್ 99.4093359 ಪರ್ಸಂಟೈಲ್ ಪಡೆದು ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ಎರಡು ವಿಭಾಗಗಳಲ್ಲಿಯೂ ಕೆಟಗರಿ ವಿಭಾಗದಲ್ಲಿ ರಾಷ್ಟ್ರಕ್ಕೆ 6ನೇ ರ‍್ಯಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ವಿ…

ಜೆಇಇ ಮೈನ್ (ಬಿ.ಆರ್ಕ್/ಬಿ.ಪ್ಲಾನಿಂಗ್) ಅಂತಿಮ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ರಾಷ್ಟç ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಅಂತಿಮ ಫಲಿತಾಂಶದಲ್ಲಿ, ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕೆ.ಮನೋಜ್ ಕಾಮತ್ ಬಿ.ಪ್ಲಾನಿಂಗ್ ವಿಭಾಗದಲ್ಲಿ 99.9855627 ಪರ್ಸಂಟೈಲ್ ಪಡೆದು ಜನರಲ್ ವಿಭಾಗದಲ್ಲಿ 6ನೇ ಹಾಗೂ ಇ.ಡಬ್ಲು.ಎಸ್ ವರ್ಗದಲ್ಲಿ 1ನೇ…

ಶಾಸಕ ಸುನಿಲ್ ಕುಮಾರ್ ಅವರಿಗೆ ಭ್ರಾತೃ ವಿಯೋಗ: ಅನಾರೋಗ್ಯದಿಂದ ಬಳಲುತ್ತಿದ್ದ ಸುಜಿತ್ ಕುಮಾರ್ ವಿಧಿವಶ

ಕಾರ್ಕಳ: ಶಾಸಕ ಸುನಿಲ್ ಕುಮಾರ್ ಅವರ ಹಿರಿಯ ಸಹೋದರ ಕಾರ್ಕಳ ನೆಕ್ಲಾಜೆಯ ಸುಜಿತ್ ಕುಮಾರ್(53) ಅವರು ಶುಕ್ರವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಎರಡು ವಾರಗಳ ಹಿಂದೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ…

ತೆರವಾಗಿದ್ದ ಬೋಳ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ: ನವೀನ್‌ಚಂದ್ರ ಜೈನ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕಾರ್ಕಳ: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನವೀನ್‌ಚಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮೇ 22ರಂದು ಗುರುವಾರ ಚುನಾವಣೆ ನಡೆಯಿತು. ಸಹಕಾರ ಸಂಘಗಗಳ ಚುನಾವಣಾಧಿಕಾರಿ ಕೆ.ಆರ್ ರೋಹಿತ್ ಕುಮಾರ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ನವೀನ್‌ಚಂದ್ರ ಜೈನ್…