ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 10 ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಸಿಬಿಎಸ್ಇ 10ನೇ ತರಗತಿ ಫಲಿತಾಂಶದಲ್ಲಿ ದೇಶದಲ್ಲಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದೆ. ಹತ್ತನೇ ತರಗತಿಯ ಫಲಿತಾಂಶಗಳು: ಬೋರ್ಡ್ ಪರೀಕ್ಷೆಗಳಲ್ಲಿ 93.60% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಉತ್ತೀರ್ಣರಾಗುವ ಶೇಕಡಾವಾರು ಪ್ರಮಾಣವು 0.06% ಹೆಚ್ಚಾಗಿದೆ. ಹುಡುಗಿಯರು 2.37% ಕ್ಕಿಂತ ಹೆಚ್ಚು ಅಂಕಗಳಿAದ ಹುಡುಗರನ್ನು ಹಿಂದಿಕ್ಕಿದ್ದಾರೆ. 95% ಹುಡುಗಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟ :
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇ. 91.64 ರಷ್ಟು ಹುಡುಗಿಯರು ಉತ್ತೀರ್ಣರಾಗಿದ್ದರೆ, ಬಾಲಕರ ಉತ್ತೀರ್ಣ ಪ್ರಮಾಣ ಶೇ. 85.70 ರಷ್ಟಿದೆ.ಫಲಿತಾಂಶದಲ್ಲಿ ಬೆಂಗಳೂರಿಗೆ ನಾಲ್ಕನೇ ಸ್ಥಾನ ಬಂದಿದೆ.
ಈ ವರ್ಷ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 14,96,307 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಕಳೆದ ಬಾರಿ ಸಿಬಿಎಸ್ಇ 12ನೇ ತರಗತಿಯಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.
ಸಿಬಿಎಸ್ಯ ಯ ಅಧಿಕೃತ ವೆಬ್ಸೈಟ್ cbseresults.nic.in ಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದಾಗಿದೆ.