

ಬೆಂಗಳೂರು, ಅ.23: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಇತ್ತೀಚೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆ ಬೆನ್ನಲ್ಲೇ ಇದೀಗ ಓರ್ವ ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದು ಸಿಸಿಬಿ ವಿಚಾರಣೆ ನಡೆಸಿದೆ. ವಿಚಾರಣೆ ಬಳಿಕ ಪತ್ರಕರ್ತನಿಗೆ ನೋಟಿಸ್ ಕೊಟ್ಟು ಕಳುಹಿಸಲಾಗಿದ್ದು, ನೋಟಿಸ್ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಪತ್ರಕರ್ತ ಅರ್ಜಿ ಹಾಕಿದ್ದಾರೆ. ಪ್ರಕರಣ ಸಂಬAಧ ಹಲವು ಆಯಾಮಗಳಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೇಜೋವಧೆ ಮಾಡುವ ಉದ್ದೇಶದಿಂದ ನಕಲಿ ಹಾಗೂ ಆಕ್ಷೇಪಾರ್ಹ ಸ್ಟಿಂಗ್ ಆಪರೇಷನ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಆರೋಪಿಸಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಸಿದ್ದರಾಮಯ್ಯ ಅವರು ನೀಡಿದ ದೂರಿನನ್ವಯ, ಬೆಂಗಳೂರು ಸಿಸಿಬಿ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊAಡ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಇದರ ಮುಂದುವರಿದ ಭಾಗವಾಗಿ, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಒಬ್ಬ ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ತೀವ್ರವಾಗಿ ಗ್ರಿಲ್ ಮಾಡುತ್ತಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
