

ಕಾರ್ಕಳ,ನ.25: ಶೈಕ್ಷಣಿಕ ರಂಗದಲ್ಲಿ ಮುಂಚೂಣಿಯಲ್ಲಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ದೀಪಾವಳಿ ಹಾಗೂ ತುಳಸಿ ಪೂಜೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಸಂಭ್ರಮದಿAದ ಆಚರಿಸಲಾಯಿತು. ಜಗಮಗಿಸುವ ವಿದ್ಯುತ್ ದೀಪಲಂಕಾರದಿAದ ಕಾಲೇಜು ಕಂಗೊಳಿಸಿದ್ದು ಮಾತ್ರವಲ್ಲದೆ ವಿಶಿಷ್ಟ ಸುಡುಮದ್ದು ಪ್ರದರ್ಶನವು ಬಾನಂಗಳದಲ್ಲಿ ಬಣ್ಣದ ಚಿತ್ತಾರವನ್ನೇ ಸೃಷ್ಟಿಸಿತು. ಬಳಿಕ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಅಂತರ್ ರಾಷ್ಟ್ರೀಯ ಖ್ಯಾತಿಯ ಜಾದೂಗಾರ ಶ್ರೀ ಸತೀಶ್ ಹೆಮ್ಮಾಡಿ ಮತ್ತು ಬಳಗದವರಿಂದ “ಮಿರಾಕಲ್ ಮ್ಯಾಜಿಕ್” ಜಾದೂ ಪ್ರದರ್ಶನ ನಡೆಯಿತು. ಸಂಸ್ಥೆಯ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್ ಎಲ್, ಗಣನಾಥ ಶೆಟ್ಟಿ ಬಿ, ಆದರ್ಶ ಎಂ ಕೆ , ವಿಮಲ್ ರಾಜ್, ಗಣಪತಿ ಭಟ್ ಕೆ ಎಸ್ , ಅಮೃತ್ ಯು ರೈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
್ರಲೋಹಿತ್ ಎಸ್ ಕೆ ದೀಪಾವಳಿ ಹಬ್ಬ ಆಚರಣೆಯ ವಿಶೇಷತೆ ಹಾಗೂ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಉಪನ್ಯಾಸಕ ವಿನಾಯಕ ಜೋಗ್ ನಡೆಸಿಕೊಟ್ಟರು. ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸಕ ವರ್ಗದವರು, ಪೋಷಕ ವರ್ಗದವರು ಕಾಲೇಜು ಸಿಬ್ಬಂದಿಗಳು ಉಪಸ್ಥಿತರಿದ್ದರು.






.
.
.
.
.
.
.
.
.
.
.
.
.
.
.
.
.
.
.
.
