

ಬೆಂಗಳೂರು.ನ.1: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿAದ ಜರುಗಿತು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡ ಭಾಷೆಗೆ ಯಾವುದೇ ಗಡಿಯಿಲ್ಲ ಎಂಬುದನ್ನು ಸ್ಮರಿಸಿದ ಅವರು, ಬ್ರಿಟಿಷರ ಕಾಲದ ಇತಿಹಾಸವನ್ನು ಉಲ್ಲೇಖಿಸಿ ನಮ್ಮ ಮಾತೃಭಾಷೆಯ ಮಹತ್ವವನ್ನು ಸಾರಿದರು.
ಈ ವಿಶೇಷ ಸಂದರ್ಭದಲ್ಲಿ ಪ್ರಮುಖ ಘೋಷಣೆಯೊಂದನ್ನು ಮಾಡಿದ ಮುಖ್ಯಮಂತ್ರಿಗಳು, ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಹೊಸ ನಿಯಮವನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಯ ಸಂಕಲ್ಪದೊಂದಿಗೆ ಪ್ರತಿಯೊಬ್ಬ ಕನ್ನಡಿಗರು ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಈ ಆಚರಣೆಯಲ್ಲಿ ಸಾವಿರಾರು ಶಾಲಾ ಮಕ್ಕಳು ಪಾಲ್ಗೊಂಡು ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನು ನೀಡಿದರು.
ಈ ಬಾರಿ ಭಾನುವಾರ ರಜೆ ಬಂದಿದ್ದರೂ ಸಹ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿತ್ತು. ಅದರಂತೆ, ಎಲ್ಲಾ ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡಿಗರು ನಾಡು-ನುಡಿಯ ಹಬ್ಬವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದರು.





.
.
.
.
.
.
.
.
.
.
.
.
.
.
.
.
.
.
.
.
