
ನವದೆಹಲಿ,ಮಾ.27: ಇರಾನ್ ಇಸ್ರೇಲ್ ಯುದ್ಧದಿಂದಾಗಿ ಇಂಧನ ದರ ಏರಿಕೆ ಭೀತಿಯ ನಿರೀಕ್ಷೆಯಲ್ಲಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ತಲಾ 10 ರೂಪಾಯಿ ಇಳಿಕೆ ಮಾಡಿರುವುದಾಗಿ ಸರ್ಕಾರ ಘೋಷಿಸಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇಂಧನ ದರ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂಪಾಯಿ ಕಡಿತಗೊಳಿಸಿದೆ. ಈ ನಿರ್ಧಾರದಿಂದ ದೇಶಾದ್ಯಂತ ಇಂಧನ ದರಗಳಲ್ಲಿ ತಕ್ಷಣದ ಇಳಿಕೆ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.
ಇತ್ತೀಚಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದು ಜನಸಾಮಾನ್ಯರ ಮೇಲೆ ಆರ್ಥಿಕ ಒತ್ತಡವನ್ನು ಹೆಚ್ಚಿಸಿತ್ತು.
ಸರ್ಕಾರ ಶುಕ್ರವಾರ ಹೊರಡಿಸಿದ ಆದೇಶದ ಪ್ರಕಾರ, ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ₹13ರಿಂದ ₹3ಕ್ಕೆ ಇಳಿಸಲಾಗಿದೆ. ಇದರೊಂದಿಗೆ ಲೀಟರ್‌ಗೆ ಒಟ್ಟು 10 ರೂಪಾಯಿ ಕಡಿತ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಎರಡರ ಮೇಲೂ ತಲಾ 10 ರೂ. ಕಡಿತವಾಗಿದ್ದು, ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ಹಣದುಬ್ಬರ ನಿಯಂತ್ರಣ ಮತ್ತು ಸಾರ್ವಜನಿಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ಸರ್ಕಾರದ ಈ ನಿರ್ಧಾರದ ಹಿಂದಿನ ಪ್ರಮುಖ ಉದ್ದೇಶವಾಗಿದೆ.















.
.
.
.
.
.
.
.
.
.
