

ಚಿಕ್ಕಬಳ್ಳಾಪುರ,ಸೆ.25: ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸುತ್ತಿದ್ದ ಆರೋಪದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಬ್ಬೀರ್ ಮತ್ತು ಉತ್ತರ ಭಾರತ ಮೂಲದ ಸಲ್ಮಾನ್ ಬಂಧಿತರು.
ಆರೋಪಿಗಳು ಟೆಲಿಗ್ರಾಂನಲ್ಲಿ 8 ಜನರ ಗ್ರೂಪ್ ಮಾಡಿಕೊಂಡು ಭಯೋತ್ಪಾದನೆ ನಡೆಸಲು ಒಳಸಂಚು ನಡೆಸಿದ್ದರು. ಗ್ರೂಪ್‌ನಲ್ಲಿ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಕುರಿತು ಚರ್ಚೆ ನಡೆಸುತ್ತಿದ್ದು, ಪ್ರತಿದಿನವೂ ದಾಳಿ ಹಾಗೂ ಹಣ ಸಂಗ್ರಹಿಸುವ ಕುರಿತಂತೆ ಯೋಜನೆ ರೂಪಿಸಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಿ, ಆ ಹಣವನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಹೊಂದಿಸಬೇಕು. ಹಣ ಮಾಡಿದ ನಂತರ ದೇಶದಲ್ಲಿ ಭಯೋತ್ಪಾದನೆ ಸೃಷ್ಟಿಸಿ, ಅರಾಜಕತೆ ಸೃಷ್ಟಿ ಮಾಡಬೇಕು ಎನ್ನುವ ಚರ್ಚೆ ನಡೆಸಲಾಗುತ್ತಿತ್ತು ಎನ್ನುವ ಮಾಹಿತಿ ಲಭಿಸಿದೆ.
ಇದಲ್ಲದೆ, ದೇಶದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು ಟೆಲಿಗ್ರಾಂ ಗ್ರೂಪ್‌ನಲ್ಲಿ ಚರ್ಚೆ ನಡೆದಿತ್ತು. ಪ್ರಕರಣಕ್ಕೆ ಸಂಬAಧಿಸಿದAತೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 113 ಅಡಿ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಳ್ಳಾಪುರ ನಗರ ಪೊಲೀಸರು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
