

ಚಿಕ್ಕಮಗಳೂರು,ಆ. 25: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ.
ಬಂಧಿತ ಆರೋಪಿ ಅಫ್ರಿದ್ ಖಾಸಗಿ ಕಾರು ಶೋರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದು, ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊAಡಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್‌ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಕೇವಲ ವಿಡಿಯೋ ಕ್ರಿಯೇಟ್ ಮಾಡಿದವರು ಮಾತ್ರವಲ್ಲದೆ, ಈ ದೇಶದ್ರೋಹಿ ವಿಡಿಯೋವನ್ನು ಶೇರ್ ಮಾಡಿದವರು ಮತ್ತು ವಾಟ್ಸಾಪ್, ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೇಟಸ್ ಹಾಕಿಕೊಂಡವರ ಮೇಲೆಯೂ ತನಿಖೆ ನಡೆಸಲಾಗುತ್ತಿದೆ.
ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಇತ್ತೀಚೆಗೆ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಒಂದನ್ನು ನಿರ್ಮಿಸಲಾಗಿತ್ತು. ಆದರೆ, ಕೆಲವು ಕಿಡಿಗೇಡಿಗಳು ಈ ಕಟೌಟ್ ಬ್ಯಾಕ್‌ಗ್ರೌಂಡ್‌ನಲ್ಲಿ ಪಾಕಿಸ್ತಾನದ ‘ಮುಜಾಹಿದ್’ ಬೆಂಬಲಿತ ಹಾಗೂ ದೇಶವಿರೋಧಿ ಧಾಟಿಯ ಹಾಡನ್ನು ಹಾಕಿ ವಿಡಿಯೋ ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಘಟನೆ ನಡೆದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲೂ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಇಂತಹ ದೇಶದ್ರೋಹಿ ಕೃತ್ಯಗಳಿಗೆ ಕಾರಣ ಎಂದು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಶಾಂತಿ ಕದಡಲು ಯತ್ನಿಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ವಾಗ್ದಾಳಿ ನಡೆಸಿದೆ. ಸದ್ಯ ಪೊಲೀಸರು ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ವಹಿಸಿದ್ದು, ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
