ಚಿಕ್ಕಮಗಳೂರು: ಚಾಮರಾಜಪೇಟೆಯಲ್ಲಿನ ಘೋರ ಕೃತ್ಯ ಮಾಸುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಮಾರ್ಕೆಟ್‌ನಲ್ಲಿ ಸ್ವೀಟ್ ಅಂಗಡಿ ಹಾಕಿಕೊಂಡು ಗೋಮಾಂಸ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಅಸ್ಸಾಂ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಬAಧಿತರ ಇಬ್ಬರು ಅಕ್ರಮ ಬಾಂಗ್ಲಾದೇಶದ ನಿವಾಸಿಗಳಾಗಿದ್ದು, ಅಸ್ಸಾಂನಿAದ ಬಂದು ಬಣಕಲ್ ಗ್ರಾಮದ ಸಂತೆಯಲ್ಲಿ ಸ್ವೀಟ್ ಅಂಗಡಿ ಜೊತೆಗೆ ಗೋಮಾಂಸ ಮಾರಾಟ ಮಾಡುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ವೀಟ್ ಡಬ್ಬದ ಪಕ್ಕದಲ್ಲಿರುವ ಬ್ಲ್ಯಾಕ್ ಬ್ಯಾಗ್‌ನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಗೋಮಾಂಸ ಸಹಿತ ಮಾರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಸ್ಥಳೀಯರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಣಕಲ್ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಸಂತೆಯಲ್ಲಿ ಈ ರೀತಿ ಅಕ್ರಮ ವ್ಯಾಪಾರ ನಡೆಯುತ್ತಿರುವುದರ ಬಗ್ಗೆ ಕ್ರಮ ಕೈಗೊಳ್ಳದೇ ಇರುವುದಕ್ಕೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಸ್ಸಾಂ ಮೂಲದವರಿಗೆ ಸಂತೆಯಲ್ಲಿ ವ್ಯಾಪಾರ ಮಾಡಲು ಲೈಸೆನ್ಸ್ ಯಾರು ಕೊಟ್ಟದ್ದು, ಅವರು ಲೈಸೆನ್ಸ್ ಪಡೆದು ವ್ಯಾಪಾರ ಮಾಡುತ್ತಿದ್ದಾರೋ, ಅಥವಾ ಅಕ್ರಮವಾಗಿ ವ್ಯಾಪಾರ ಮಾಡುತ್ತಿದ್ದಾರೋ ? ಈ ಬಗ್ಗೆ ಹಿಂದೆಯೇ ಪಂಚಾಯಿತಿ ಗಮನಕ್ಕೆ ತಂದಿದ್ದರೂ ಯಾಕೆ ಕ್ರಮ ವಹಿಸಿಲ್ಲ ಎಂದೆಲ್ಲಾ ಪ್ರಶ್ನಿಸಿದ್ದಾರೆ. ಸ್ಥಳಕ್ಕೆ ಬಣಕಲ್ ಎಸ್ಸೈ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.