Share this news

ಶಿವಮೊಗ್ಗ : ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗುವಳ್ಳಿಯಲ್ಲಿ ನಡೆದಿದೆ.

ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್‌ ಮೃತಪಟ್ಟ ಮಗು. ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು.

ಈ ವೇಳೆ ಆಕಸ್ಮಿಕವಾಗಿ ಮಗು ಮುಚ್ಚಳ ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿದೆ, ಇದರಿಂದಾಗಿ ಮಗುವಿನ ಉಸಿರಾಟದಲ್ಲಿ ಏರುಪೇರಾಗಿದೆ. ತಕ್ಷಣವೇ ಕುಟುಂಬದವರು ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಮಗು ಮಾರ್ಗಮಧ್ಯೆ ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.

                        

                          

                        

                       

Leave a Reply

Your email address will not be published. Required fields are marked *