
ಕಾರ್ಕಳ,ನ.14: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಶಿಯೇಷನ್ ಕಾರ್ಕಳ ವಲಯ ಇದರ ವತಿಯಿಂದ,ಕಾರ್ಕಳದ ಚೇತನ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲು ವಹಿಸಿದ್ದರು.
ಈ ಸಂದರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಷಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ (ರಿ) ಇದರ ಅಧ್ಯಕ್ಷ ಪದ್ಮಪ್ರಸಾದ್ ಜೈನ್, ವಲಯದ ಗೌರವಾಧ್ಯಕ್ಷ ಸುಶೀಲ್ ಕುಮಾರ್, ಕಾರ್ಯದರ್ಶಿಗಳಾದ ಶೇಖರ್ ಕುಕ್ಕುಜೆ, ಉಪಾಧ್ಯಕ್ಷರಾದ ಪ್ರಕಾಶ್ ಪ್ರಭು, ಹಿರಿಯ ಸದಸ್ಯರಾದ ಶೇಖರ್ ರಾವ್ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ದತ್ತಾತ್ರೇಯ ಕಾರ್ಕಳ ಮತ್ತು ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಸ್ ಶೆಟ್ಟಿ ಇವರು ಉಪಸ್ಥಿತರಿದ್ದು, ವಲಯದ ಪಧಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ಸಂಧ್ಯಾ ಪೂಜಾರಿ ಇವರು ನಿರೂಪಿಸಿ ವಂದಿಸಿದರು.

