ಕಾರ್ಕಳ: ಕಳೆದ ಒಂದು ವರ್ಷದಿಂದ ಭಾರೀ ಸದ್ದು ಮಾಡುತ್ತಿರುವ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕಾಮಗಾರಿಯಲ್ಲಿ ಕಳಪೆಯಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಕೊನೆಗೂ ಸಿಐಡಿ ತನಿಖೆಗೆ ಆದೇಶಿಸಿದೆ.
ಸರ್ಕಾರ ತನಿಖೆಗೆ ಅದೇಶಿಸಿದ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಉಡುಪಿಗೆ ಭೇಟಿ ಈ ಕುರಿತು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.
ಈ ಯೋಜನೆಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಕಡತಗಳ ಪರಿಶೀಲನೆ ಹಾಗೂ ಅಧಿಕಾರಿಗಳಿಂದ ಉಪಯುಕ್ತ ಮಾಹಿತಿಯನ್ನು ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.ಇದಲ್ಲದೇ ಯೋಜನೆಯ ಕುರಿತು ರಾಜಕೀಯ ಪಕ್ಷಗಳ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಬಳಿಕ ಸಿಐಡಿ ಅಧಿಕಾರಿಗಳ ತಂಡ ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಭೇಟಿ ಪರಿಶೀಲನೆ ನಡೆಸಿದ್ದು,ಲೋಕಸಭಾ ಚುನಾವಣೆ ಬಳಿಕ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ ಎನ್ನುವ ಮಾಹಿತಿ ಲಭಿಸಿದೆ.
