ಧರ್ಮಸ್ಥಳ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು,ಶನಿವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಧರ್ಮಾಧಿಕಾರಿ ಹೆಗ್ಗಡೆಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ರಾಜ್ಯದ ದೊರೆಗೆ ಪೂರ್ಣ ಕುಂಭ, ವಾದ್ಯಘೋಷಗಳೊಂದಿಗೆ ಕ್ಷೇತ್ರದ ಪರವಾಗಿ ಹೆಗ್ಗಡೆ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಮುಖ್ಯ ದ್ವಾರದಿಂದ ನಡೆದುಕೊಂಡೇ ದೇವಸ್ಥಾನ ಪ್ರವೇಶಿಸಿದರು.
ಸಿಎಂ ಆಗಮನ ಹಿನ್ನೆಲೆಯಲ್ಲಿ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದರು, ಭಕ್ತರಿಗೆ ಒಂದು ತಾಸು ದೇವರ ದರ್ಶನಕ್ಕೆ ತಡೆ ನೀಡಲಾಯಿತು.