ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಸಂಬAಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಎಂಫ್ ಅಧ್ಯಕ್ಷರು ಹಾಗೂ ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಒತ್ತಾಯಿಸಿದ್ದು, ಈ ಬಗ್ಗೆ ಸಿಎಂ ಸಭೆಯಲ್ಲಿ ಚರ್ಚೆ ನಡೆಸಿ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯೂ ಇದೆ.
ಪಶು ಆಹಾರ, ಮೇವು, ಕೂಲಿ ಹಾಗೂ ಇತರ ಖರ್ಚು ವಚ್ಚಗಳು ಹೆಚ್ಚಾಗಿದೆ. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿಯಂತೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕದ ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರು ಪಶುಸಂಗೋಪನೆ ಸಚಿವ ವೆಂಕಟೇಶ್‌ಗೆ ಈಗಾಗಲೇ ಮನವಿ ಮಾಡಿದ್ದರು. ಹಾಲಿನ ದರ ಹೆಚ್ಚಳ ಸಂಬAಧ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಶು ಸಂಗೋಪನೆ ಸಚಿವ ವೆಂಕಟೇಶ್, ಸಹಕಾರ ಸಚಿವ ಕೆಎನ್ ರಾಜಣ್ಣ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ವೇಳೆ ಹಾಲಿನ ದರ ಹೆಚ್ಚಳ ಸೇರಿ ಹೈನುಗಾರರಿಗೆ ಸಂಬAಧಿಸಿದ ಇತರ ವಿಷಯಗಳೂ ಚರ್ಚೆಯಾಗಲಿವೆ. ಹಾಲಿನ ದರ ಏರಿಕೆ ಸಂಬAಧ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯೂ ಇದೆ.
ಹಾಲು ಉತ್ಪಾದಕರಿಗೆ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವ ಬಗ್ಗೆ ಸಚಿವ ಕೆ ವೆಂಕಟೇಶ್ ಕೆಲವು ದಿನಗಳ ಹಿಂದಷ್ಟೇ ಪರಿಷತ್ ಕಲಾಪದಲ್ಲಿ ಮಾಹಿತಿ ನೀಡಿದ್ದರು. ಆರ್ಥಿಕ ಇಲಾಖೆ ಹಣ ಬಿಡುಗಡೆ ಮಾಡಬೇಕಿದೆ. ಹಾಲು ಉತ್ಪಾದನೆ ಜಾಸ್ತಿ ಆಗುತ್ತಿದೆ, ಉತ್ಪಾದನೆಗೆ ತಕ್ಕಂತೆ ಅನುದಾನ ಹಂಚಿಕೆ ಇಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರ ನೆರವಿಗೆ ಧಾವಿಸಲಿದೆಯಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.
K