Share this news

ಬೆಂಗಳೂರು: ದ್ವೇಷ ಭಾಷಣ, ನಕಲಿ ಸುದ್ದಿಗಳ ದ್ವೇಷ ಭಾಷಣ, ನಕಲಿ ಸುದ್ದಿಗಳ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರುತ್ತಿದ್ದು, ಪೊಲೀಸರು ಇಂತಹ ಬೆಳವಣಿಗೆ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಆಯೋಜಿಸಿದ್ದ ವಿಶ್ವ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ನಮಗೆ ದ್ವೇಷವಿಲ್ಲದ ಸಮಾಜ ಬೇಕು, ಆದರೆ, ಕೆಲವರು ಅಶಾಂತಿಯುಕ್ತ ಸಮಾಜವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳು ಸಿಎಂ ಅಥವಾ ಪ್ರಧಾನಿಯನ್ನು ಮೆಚ್ಚಿಸುವಲ್ಲಿ ತೊಡಗಬಾರದು, ಸತ್ಯಗಳನ್ನಷ್ಟೇ ವರದಿ ಮಾಡಬೇಕು ಎಂದು ತಿಳಿಸಿದರು. ದಲಿತರು, ಒಬಿಸಿಗಳು ಮತ್ತು ದೀನದಲಿತರಿಗೆ ಸಂಬAಧಿಸಿದ ವಿಷಯಗಳನ್ನು ವರದಿ ಮಾಡಬೇಕು, ಜನರ ಹಿತಾಸಕ್ತಿಗಳನ್ನು ಕಾಪಾಡಬೇಕು. ಪ್ರಜಾಪ್ರಭುತ್ವದಲ್ಲಿ, ಸ್ವತಂತ್ರ ಮತ್ತು ಮುಕ್ತ ಮಾಧ್ಯಮವು ಬಹಳ ಮುಖ್ಯ ಎಂದು ಹೇಳಿದರು.

 

Leave a Reply

Your email address will not be published. Required fields are marked *