Share this news

ಬೆಂಗಳೂರು, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ ಮಂಡನೆಯಾಗಿದೆ.

ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ.ಇಂದು ಮಂಡನೆಯಾದ 2026-27ನೇ ಸಾಲಿನ ರಾಜ್ಯ ಬಜೆಟ್‌ನ ಒಟ್ಟು ಗಾತ್ರ ಸರಿಸುಮಾರು 4.48 ಲಕ್ಷ ಕೋಟಿ ರೂ. ಇದರಲ್ಲಿ ಹಲವು ಇಲಾಖೆಗಳಿಗೆ ಹಂಚಿಕೆಗಳನ್ನು ಮಾಡಲಾಗಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರವು ವಿವಿಧ ಇಲಾಖೆಗಳಿಗೆ ಹಣವನ್ನು ನೀಡಿದೆ.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್​ನಲ್ಲಿ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲು ಇಡಲಾಗಿದೆ.
ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಉದ್ಯೋಗ ನೇಮಕಾತಿಯಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಗಮನಿಸಿ, ಅಭ್ಯರ್ಥಿಗಳಿಗೆ ಒಂದು ಬಾರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.ಕರ್ನಾಟಕದ ಆರ್ಥಿಕ ಪ್ರಗತಿಗಾಗಿ ಕಾರ್ಮಿಕ ಕಲ್ಯಾಣ, ಪ್ರಾದೇಶಿಕ ಸಮಾನತೆ, ವ್ಯಾಪಾರ ಮತ್ತು ಕೈಗಾರಿಕೆ ವೃದ್ಧಿ, ಪ್ರವಾಸೋದ್ಯಮ, ಹಸಿರು ಆರ್ಥಿಕತೆ, ಹಾಗೂ ನಗರ ಕೇಂದ್ರಿತ ಸುಸ್ಥಿರ ಆರ್ಥಿಕತೆ ಸೇರಿದಂತೆ ಹಲವು ಆರ್ಥಿಕ ಪ್ರಮೇಯಗಳನ್ನು ಸರ್ಕಾರ ಅನುಸರಿಸುತ್ತಿದೆ. ರಾಜ್ಯದ 45ಕ್ಕೂ ಹೆಚ್ಚು ಉತ್ಪನ್ನಗಳಿಗೆ ಭೌಗೋಳಿಕ ಸೂಚಕ (GI) ಮಾನ್ಯತೆ ದೊರೆತಿದ್ದು, ಇದು ಹೊಸ ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಕಳೆದ ವರ್ಷ 8,600 ಕೋಟಿ ರೂ.ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 2026-27ರಲ್ಲಿ 4,000 ಕೋಟಿ ರೂ. ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದೆ.ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯನ್ನು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಇತಿಹಾಸದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಗರಿಷ್ಠ ಮೊತ್ತವನ್ನು ಮೀಸಲಿಡಲಾಗಿದೆ. 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಮತ್ತು 15,000 ಶಿಕ್ಷಕರ ನೇಮಕಾತಿಗೆ ಒತ್ತು ನೀಡಲಾಗಿದೆ. ಇದರ ಜತೆಗೆ ಗ್ಯಾರಂಟಿಗೂ ಬಲ ನೀಡಲಾಗಿದೆ.ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಗೂ ಹೆಚ್ಚು ಅನುದಾನಗಳನ್ನು ನೀಡಲಾಗಿದೆ. ಕೃಷಿ ಮತ್ತು ಗ್ರಾಮೀಣ ಭಾಗದ ಮೂಲಸೌಕರ್ಯಕ್ಕೆ ಸರಿಸುಮಾರು 50,000 ಕೋಟಿಗೂ ಅಧಿಕ ಹಣವನ್ನು ವಿವಿಧ ಇಲಾಖೆಗಳ ಮೂಲಕ ಹಂಚಲಾಗಿದೆ.

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *