Share this news

ಕಾರ್ಕಳ, ಫೆ.23: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.25ರಂದು ಕಾರ್ಕಳಕ್ಕೆ ಆಗಮಿಸಲಿದ್ದು, ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬೇಡ್ಕರ್ ಭನವದ ಉದ್ಘಾಟನೆ, ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆ ಹಾಗೂ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಅವರು ಕಾರ್ಕಳದ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯಲ್ಲಿ ಈ ಕುರಿತು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ,ಫೆ.25ರಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಬಂದು ಬಳಿಕ ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ನಲ್ಲಿ ಕಾರ್ಕಳ ತಾಲೂಕು ಕ್ರೀಡಾಂಗಣಕ್ಕೆ ಬಂದಿಳಿಯಳಿದ್ದಾರೆ ಎಂದರು. ಅಂಬೇಡ್ಕರ್ ಭನವದ ಉದ್ಘಾಟನೆ, ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆಯ ಬಳಿಕ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ ವಾರ್ಷಿಕೋತ್ಸವದಲ್ಲಿ ಭಾಗಿಯಾಗಲಿದ್ದು, ಈ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್, ಸಚಿವ ಎಚ್.ಸಿ ಮಹದೇವಪ್ಪ, ಶಾಸಕ ಸುನಿಲ್ ಕುಮಾರ್, ಜಯಪ್ರಕಾಶ್ ಹೆಗ್ಡೆ ಮುಂತಾದವರು ಭಾಗಿಯಾಗಲಿದ್ದಾರೆ ಎಂದರು.
ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ ಕುರಿತು ಮಾಹಿತಿ ಹಂಚಿಕೊAಡ ಮೊಯ್ಲಿಯವರು, ಅತ್ಯಂತ ಕಡುಬಡತನದ ಕುಟುಂಬಗಳಿAದ ಬಂದ ಶೈಕ್ಷಣಿಕವಾಗಿ ತೀರಾ ಹಿಂದುಳಿದ ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಸಹಿತ ಗುಣಮಟ್ಟದ ಉಚಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ 1992ರಲ್ಲಿನ ಸ್ಥಾಪನೆಯಾದ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆ ಇಂದು ಯಶಸ್ವಿ 34 ವರ್ಷಗಳನ್ನು ಪೂರೈಸಿದೆ. ಇದಲ್ಲದೇ ಈ ಶಿಕ್ಷಣ ಸಂಸ್ಥೆಯು 19 ಬಾರಿ ಫಲಿತಾಂಶದಲ್ಲಿ ಶೇ.100ರ ಸಾಧನೆ ಮಾಡಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಿಸಾನ್ ಸಭಾ ಟ್ರಸ್ಟ್ ಅಧ್ಯಕ್ಷ ಹರ್ಷ ಮೊಯ್ಲಿ, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ರವಿಶಂಕರ್ ಶೇರಿಗಾರ್, ಸದಾಶಿವ ದೇವಾಡಿಗ, ಕೃಷ್ಣಮೂರ್ತಿ,ಹೆಬ್ರಿ ಎಸ್,ಆರ್ ಕಾಲೇಜು ಅಧ್ಯಕ್ಷ ನಾಗರಾಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *