ಬೆಂಗಳೂರು:ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರೇಸ್ ಅಂಕಗಳನ್ನು ನೀಡಲು ಯಾರ ಸೂಚನೆಯಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ವಿರುದ್ಧ ಗರಂ ಆದರು.
ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡಲಾಗಿದೆ ಎಂದು ಸ್ಪಷ್ಟನೆ ನೀಡಲು ಮುಂದಾದ ಸಿಟ್ಟಿಗೆದ್ದ ಸಿಎಂ, ಗ್ರೇಸ್ ಅಂಕ ಹೆಚ್ಚಿಸುವ ಅಥವಾ ಕೈಬಿಡುವ ಕುರಿತು ಸರ್ಕಾರ ಕೈಗೊಳ್ಳುವ ನಿರ್ಧಾರವಾಗಿದೆ,ಮಾತ್ರವಲ್ಲದೇ ಗ್ರೇಸ್ ನೀಡುವ ಕ್ರಮವು “ಸಾಮೂಹಿಕ ನಕಲು” ಹೊರತುಪಡಿಸಿ ಬೇರೇನೂ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಪರೀಕ್ಷೆಗಳ ಸಮಯದಲ್ಲಿ ತೆಗೆದುಕೊಂಡ ಕಠಿಣ ಕ್ರಮಗಳನ್ನು ಉಲ್ಲೇಖಿಸಿದ ಸಿಎಂ, ಸಿಸಿಟಿವಿ ಕ್ಯಾಮೆರಾಗಳು ಮತ್ತು ವೆಬ್ ಸ್ಟ್ರೀಮಿಂಗ್ ಅನ್ನು ಸ್ಥಾಪಿಸಿದ ನಂತರ ಗ್ರೇಸ್ ಅಂಕಗಳನ್ನು ನಿಗದಿಪಡಿಸುವುದು ಸಾಮೂಹಿಕ ನಕಲು ಹೊರತುಪಡಿಸಿ ಬೇರೇನೂ ಅಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಗ್ರೇಸ್ ಅಂಕಗಳನ್ನು ರದ್ದುಪಡಿಸಿದ ಸರ್ಕಾರದ ವಿರುದ್ಧ ಮಾಜಿ ಸುನಿಲ್ ಕುಮಾರ್ ಆಕ್ರೋಶ:
ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಗ್ರೇಸ್ ಅಂಕಗಳನ್ನು ಅವಾಂತರವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಸೃಷ್ಟಿ ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಬೇಕು. ಗ್ರೇಸ್ ಮಾರ್ಕ್ಸ್ ಏಕೆ ಕೊಟ್ಟಿದ್ದೀರಿ ಎಂದು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವಷ್ಟರ ಮಟ್ಟಿಗೆ ಇದು ಶೈಕ್ಷಣಿಕ ವ್ಯವಸ್ಥೆಯ ಅಡಿಪಾಯ ಅಲ್ಲಾಡಿಸಿದೆ ಎಂದರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಪುಟದಿಂದ ವಜಾಗೊಳಿಸುವುದಕ್ಕೆ ಅರ್ಹರಾಗಿದ್ದಾರೆ ಎಂದೇ ಅರ್ಥ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ