Share this news

 

 

 

ಕಾರ್ಕಳ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ತನಿಖೆ ನಡೆಸಿದ್ದಾರೆ. ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಏಟಿಗೆ ಎದುರೇಟು ಎನ್ನುವಂತೆ ಪ್ರತೀಕಾರದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಪೊಲೀಸರು ಅದಕ್ಕೂ ಕ್ರಮ ಕೈಗೊಂಡಿದ್ದಾರೆ. ಇದೀಗ ಕಾರ್ಕಳದ ಯುವಕನೊಬ್ಬ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಪೋಸ್ಟ್ ಹಾಕಿದ್ದು, ಕಾರ್ಕಳ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬೆAಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಮೂಲದ ಸಂಪತ್ ಸಾಲಿಯಾನ್ ಎಂಬಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈತನ ವಿರುದ್ಧ ನಕ್ರೆಯ ಸೂರಜ್ ಶೆಟ್ಟಿ ಎಂಬವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು. ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್‌ನನ್ನು ಬಂಧಿಸಿದ್ದಾರೆ.

ಮAಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಏಟಿಗೆ ಎದುರೇಟು, ಪ್ರತೀಕಾರದ ಸಂದೇಶಗಳು ಹರಿದಾಡುತ್ತಿವೆ. ವಿಹೆಚ್‌ಪಿ ಮತ್ತು ಬಜರಂಗದಳ ಮುಖಂಡರಿಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ವಿಶ್ವ ಹಿಂದೂ ಪರಿಷತ್ ಶರಣ್ ಪಂಪ್‌ವೆಲ್ ಮತ್ತು ಬಜರಂಗದಳ ಮುಖಂಡ ಭರತ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಲಾಗಿದೆ. 2018ರಲ್ಲಿ ಮಂಗಳೂರಿನ ಕೊಟ್ಟಾರ ಚೌಕಿ ಬಳಿ ನಡೆದಿದ್ದ ಬಷೀರ್ ಹತ್ಯೆ ಆರೋಪಿ ಶ್ರೀಜಿತ್‌ಗೆ ಮತ್ತೆ ಕೊಲೆ ಬೆದರಿಕೆ ಹಾಕಲಾಗಿದೆ. ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರತೀಕಾರಕ್ಕೆ ಬಷೀರ್ ಕೊಲೆಯಾಗಿತ್ತು.

 

 

 

 

 

 

 

 

 

 

Leave a Reply

Your email address will not be published. Required fields are marked *