ಬೆಂಗಳೂರು: ಚಿಂತಕರ ಛಾವಡಿ ಎಂದೇ ಕರೆಸಿಕೊಳ್ಳುವ ವಿಧಾನ ಪರಿಷತ್ತಿಗೆ ಸಿಎಂ ಸಿದ್ದರಾಮಯ್ಯನವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಸೇರಿ ಪಕ್ಷದ ನಾಲ್ವರನ್ನು ಸಕಾರ ನಾಮನಿರ್ದೇಶನ ಮಾಡಿದೆ.
ಉಡುಪಿ ಜಿಲ್ಲೆಯ ದಿನೇಶ್ ಅಮೀನ್ ಮಟ್ಟು,ಎನ್‌ಆರ್‌ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ದಲಿತ ಮುಖಂಡ ಸಾಗರ್ ಅವರ ಹೆಸರುಗಳನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಪಡೆದ ವಿಧಾನಪರಿಷತ್ ಸದಸ್ಯರಾಗಿ ಈ ನಾಲ್ವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.