ಬೆಂಗಳೂರು : ಮುಡಾ ಹಗರಣದ ಚಕ್ರವ್ಯೂಹದಲ್ಲಿ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯನವರಿಗೆ ಪ್ರಾಸಿಕ್ಯೂಶನ್ ಸರಿಯಾಗಿದೆ ಎಂದು ಹೈಕೋರ್ಟ್ ರಾಜ್ಯಪಾಲರ ಆದೇಶ ಎತ್ತಿಹಿಡಿದ ಬೆನ್ನಲ್ಲೇ ಸಿಎಂ ಈ ಆದೇಶ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಅರ್ಜಿಯ ವಿಚಾರಣೆ ನಡೆಸಿ ಸಿದ್ದರಾಮಯ್ಯನವರ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಿದೆ.
ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪೀಠದ ಮುಂದೆ ಹೈಕೋರ್ಟ್ ಆದೇಶದ ಪ್ರತಿ ನೀಡಿ ಸಿಎಂ ವಿರುದ್ಧ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ಈ ತನಿಖೆಯ ಹೊಣೆಯನ್ನು ಮೈಸೂರು ಲೋಕಾಯುಕ್ತ ಪೊಲೀಸರಿಗೆ ವಹಿಸಿ 3 ತಿಂಗಳೊಳಗೆ ತನಿಖೆ ಆಗಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಈ ಮೂಲಕ
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬAಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ ಎದುರಾಗಿದೆ.
ಹೈಕೋರ್ಟ್ ತೀರ್ಪಿನಲ್ಲೇನಿದೆ?
ಹೈಕೋರ್ಟ್ ಮುಡಾ ಹಗರಣ ಸಂಬAಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17ಂ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17ಂ ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
in