
ಬೆಂಗಳೂರು,ಜು.1: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ. ಕಡಿತಗೊಳಿಸಲಾಗಿದೆ.ಆದರೆ, ಈ ಬಾರಿ ಗೃಹ ಬಳಕೆಯ ಗ್ರಾಹಕರಿಗೆ ಯಾವುದೇ ಸಿಹಿಸುದ್ದಿ ಸಿಕ್ಕಿಲ್ಲ. 14.2 ಕೆ.ಜಿ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ರೂ.942ರಲ್ಲೇ ಮುಂದುವರಿದಿದ್ದು, ಅದರಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಹಾರ್ಮುಜ್ ಜಲಸಂಧಿಯ ಇಂಧನ ಪೂರೈಕೆ ಅಡಚಣೆಯ ನಂತರ ಭಾರತದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಒಟ್ಟು ನಾಲ್ಕು ಬಾರಿ ಹೆಚ್ಚಿಸಲಾಗಿತ್ತು. ಭಾರಿ ನಷ್ಟದ ಹಿನ್ನೆಲೆಯನ್ನು ಉಲ್ಲೇಖಿಸಿ ತೈಲ ಕಂಪನಿಗಳು ಮಾರ್ಚ್ನಲ್ಲಿ 144 ರೂ., ಏಪ್ರಿಲ್‌ನಲ್ಲಿ 195.50 ರೂ. ಮತ್ತು ಮೇ ತಿಂಗಳಲ್ಲಿ ಬರೋಬ್ಬರಿ 993 ರೂ.ನಷ್ಟು ಬೆಲೆ ಏರಿಕೆ ಮಾಡಿದ್ದವು. ತದನಂತರ, ಜೂನ್‌ನಲ್ಲಿ ಮತ್ತೊಮ್ಮೆ 42 ರೂ. ಹೆಚ್ಚಿಸಲಾಗಿತ್ತು. ಹೀಗೆ ಒಟ್ಟು ನಾಲ್ಕು ಕಂತುಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 1,374.50 ರೂ.ನಷ್ಟು ಹೆಚ್ಚಿಸಲಾಗಿತ್ತು.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
