ನವದೆಹಲಿ, ಸೆಪ್ಟೆಂಬರ್ 1: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್ ಬೆಲೆಯಲ್ಲಿ ಮಾತ್ರ ಕಡಿಮೆಯಾಗಿದೆ. ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಗೃಹ ಬಳಕೆ ಸಿಲಿಂಡರ್ ದರ ಸ್ಥಿರವಾಗಿದೆ. ಈ ಮೊದಲಿನಂತೆಯೇ ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಗ್ರಾಹಕರಿಗೆ 853 ರೂ.ಗೆ ಸಿಗಲಿದೆ.
ಬೆಂಗಳೂರಿನಲ್ಲಿ ವಾಣಿಜ್ಯ ಬಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಈ 51.50 ರೂ. ಇಳಿಕೆಯೊಂದಿಗೆ 1,653 ರೂ. ಆಗಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಈಗಿರುವ 855.50 ರೂ. ಮುಂದುವರಿದಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ 5 ಕೆಜಿಗೆ 318.50 ರೂ. ಆಗಿದೆ. ವಾಣಿಜ್ಯ ಬಕೆಯ ಎಲ್ಪಿಜಿ ಸಿಲಿಂಡರ್ 47.5 ಕೆಜಿದಕ್ಕೆ 4,129 ರೂ. ಆಗಿದೆ. ಅಂದರೆ, ಇದರ ಬೆಲೆ 127 ರೂ. ಇಳಿಕೆಯಾಗಿದೆ.
ಕಳೆದ ಜುಲೈ ಮತ್ತು ಆಗಸ್ಟ್ನಲ್ಲಿ 33 ರೂ ಮತ್ತು 58 ರೂಪಾಯಿ ಇಳಿಕೆಯಾಗಿತ್ತು. ಇಂಡಿಯನ್ ಆಯಿಲ್ ಮತ್ತು ಇತರ ಸರ್ಕಾರಿ ತೈಲ ಕಂಪನಿಗಳು ಪ್ರತಿ ತಿಂಗಳು ಬೆಲೆಗಳನ್ನು ಪರಿಷ್ಕರಿಸುತ್ತವೆ. ಏಪ್ರಿಲ್ 2025 ರಲ್ಲಿ ಗೃಹಬಳಕೆ ಸಿಲಿಂಡರ್ನಲ್ಲಿ ₹ 50 ಹೆಚ್ಚಳವಾಗಿತ್ತು. ಕಳೆದ ವರ್ಷ (ಆಗಸ್ಟ್ 2024 ರಿಂದ ಜುಲೈ 2025 ರವರೆಗೆ), ಒಟ್ಟು ₹ 50 ಹೆಚ್ಚಳವಾಗಿತ್ತು.