ಬೆಂಗಳೂರು,ಸೆ 29: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಇದೀಗ ಸಿಡಿದೆದ್ದಿದ್ದು, ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದುಪ್ಪಟ್ಟಾಗಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗುತ್ತಿಗೆದಾರರ ಸಂಘ ಇದೀಗ ಆಕ್ರೋಶ ಹೊರಹಾಕಿದೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಾಮಗಾರಿ ಕೈಗೊಳ್ಳುವ 8 ಇಲಾಖೆಗಳಿಂದ ಹಣ ಬಂದಿಲ್ಲ. ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಬಾಕಿ ಹಣ ಬಿಡುಗಡೆ ಆಗಿಲ್ಲ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಇದೀಗ ತೀವ್ರ ಆಗ್ರಹ ಕೇಳಿ ಬರುತ್ತಿದೆ. ಒಟ್ಟು ರಾಜ್ಯ ಸರ್ಕಾರ 33,000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಹಿಂದಿನ ಸರ್ಕಾರಕ್ಕಿಂತ ಈಗಿನ ಕಮಿಷನ್ ದುಪ್ಪಟ್ಟು ಆಗಿದೆ ಎರಡು ವರ್ಷಗಳಿಂದ ಸಮಸ್ಯೆ ಇದ್ದು ಬಾಕಿ ಹಣ ಬಿಡುಗಡೆ ಮಾಡಿ ಎಂದು ಅಗ್ರಹಿಸಿದ್ದಾರೆ.ಈ ಸರ್ಕಾರದಿಂದ ನಮಗೆ ಯಾವ ಪ್ರಯೋಜನ ಆಗಿಲ್ಲ ಎಂದು ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಗುತ್ತಿಗೆದಾರರ ಪತ್ರದ ವಿಚಾರವಾಗಿ ಬಿಜೆಪಿ ಶಾಸಕ ಅಶ್ವತ್ಥನಾರಾಯಣ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಮೇಲೆ 40% ಕಮಿಷನ್ ಆರೋಪ ಮಾಡಿದ್ದರು. ಗುತ್ತಿಗೆದಾರರು ಇದೀಗ ಕಾಂಗ್ರೆಸ್ ವಿರುದ್ಧವೇ ಇದೀಗ ಆರೋಪ ಮಾಡುತ್ತಿದ್ದಾರೆ. ಗುತ್ತಿಗೆದಾರರ ಆರೋಪಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಡಬೇಕು ನಮ್ಮ ಮೇಲೆ ಆರೋಪ ಬಂದಾಗ ರಾಜೀನಾಮೆ ಕೇಳಿದರು. ಈಗ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರಾಜಿನಾಮೆ ಕೊಡುತ್ತಾರಾ? ಎಂದು ವಾಗ್ದಾಳಿ ನಡೆಸಿದರು.