ಕಾರ್ಕಳ:ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ಕಾರ್ಕಳ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಕಳ ಪುರಸಭೆ ಕಚೇರಿಗೆ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಅವರ ನೇತೃತ್ವದಲ್ಲಿ ಶುಕ್ರವಾರ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.ಈ ವೇಳೆ ಕಳೆದ 10 ತಿಂಗಳಿನಿಂದ ವಿಲೇವಾರಿಯಾಗದೇ ಬಾಕಿ ಉಳಿದಿದ್ದ ಕಡತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಬಾಕಿ ಉಳಿಸಿಕೊಂಡಿರುವ ಕಡತಗಳನ್ನು ಪರಿಶೀಲನೆ ನಡೆಸಿದ ಅಧಿಕಾರಿಗಳು ಯಾವ ಕಾರಣಕ್ಕಾಗಿ ಕಡತಗಳನ್ನು ಬಾಕಿ ಇರಿಸಿಕೊಳ್ಳಲಾಗಿದೆ ಎನ್ನುವ ಕುರಿತು ಮಾಹಿತಿ ಪಡೆದುಕೊಂಡರು.
ಖಾತಾ ಅರ್ಜಿಗಳು, ಜನನ ಮರಣ,ಉದ್ದಿಮೆ ಪರವಾನಗಿ ಹಾಗೂ ಇನ್ನಿತರೆ ವಿಚಾರದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ದೂರುಗಳು ಬಂದಿದ್ದು, ಸಕಾರಣವಿಲ್ಲದೇ ಯಾವುದೇ ಕಡತಗಳನ್ನು ಬಾಕಿ ಇರಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.